ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ್​ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Operation Sindoor: ಪಾಕ್‌ ವಿರುದ್ಧ ಪ್ರತೀಕಾರದ ದಾಳಿಗೆ ʻಆಪರೇಷನ್‌ ಸಿಂಧೂರ್‌ʼ ಹೆಸರಿಟ್ಟಿದ್ದೇಕೆ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

ಸಿಂಧೂರ ಸಾಂಪ್ರದಾಯಿಕವಾಗಿ ಹಿಂದೂ ಮಹಿಳೆಯರ ಮುತ್ತೈದೆತನ ಸಂಕೇತ. ಏಪ್ರಿಲ್ 22ರಂದು ಧರ್ಮದ ಆಧಾರದ ಮೇಲೆ ಪುರುಷರನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದರು. ಅನೇಕ ಮಹಿಳೆಯರ ಮುತ್ತೈದೆತನಕ್ಕೆ ಕೈ ಹಾಕುವ ದುಸ್ಸಾಹಸ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಭಾರತ ಡೆಡ್ಲಿ ಅಟ್ಯಾಕ್‌ ನಡೆಸಿದ್ದು, ಈ ಆಪರೇಷನ್‌ಗೆ ಈ ಹೆಸರು ಅತ್ಯಂತ ಸೂಕ್ತವಾಗಿದೆ. ಇನ್ನು ಪ್ರಮುಖ ವಿಚಾರ ಎಂದರೆ ಯುದ್ಧಕ್ಕೆ ಹೊರಡುವ ಯೋಧರು ಹಣೆಗೆ ಸಿಂಧೂರ ತಿಲಕವನ್ನು ಇಡುವುದು ವಾಡಿಕೆ. ಹೀಗಾಗಿ ಈ ಆಪರೇಷನ್‌ಗೆ ಸಿಂಧೂರ ಎಂದು ಹೆಸರಿಡಲಾಗಿದೆ.

ʻಆಪರೇಷನ್‌ ಸಿಂಧೂರ್‌ʼ ಹೆಸರಿನ ಮಹತ್ವವೇನು? ಇಲ್ಲಿದೆ ಡಿಟೇಲ್ಸ್‌

Profile Rakshita Karkera May 7, 2025 7:59 AM

ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರ (POK)ದ ಒಂಬತ್ತು ಸ್ಥಳಗಳನ್ನು ಹೊಡೆದುರುಳಿಸುವ ಮೂಲಕ ಭಾರತ ಸೇಡು ತೀರಿಸಿಕೊಂಡಿದೆ. ಇನ್ನು ಈ ಕಾರ್ಯಾಚರಣೆಗೆ ಆಪರೇಷನ್‌ ಸಿಂಧೂರ(Operation Sindoor) ಎಂಬ ಹೆಸರಿಡಲಾಗಿದೆ. ಹಾಗಾದರೆ ಈ ಹೆಸರಿನ ಮಹತ್ವವೇನು? ಕಾರ್ಯಚರಣೆಗೆ ಇದೇ ಹೆಸರಿಡಲು ಕಾರಣವೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಪಹಲ್ಗಾಮ್‌ ದಾಳಿಗೆ ಸೇಡು ತೀರಿಸಿಕೊಂಡಿರುವ ಭಾರತ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿನ 9 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಆಪರೇಷನ್‌ ಸಿಂಧೂರ್‌ ಹೆಸರಿನಲ್ಲಿ ಕ್ಷಿಪಣಿ ದಾಳಿ ನಡೆಸಿದ ಭಾರತ ಉಗ್ರರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದೆ. ಯಾವುದೇ ಸೂಚನೆ ಇಲ್ಲದೆ ಸುಮಾರು 20 ನಿಮಿಷಗಳ ಕಾಲ ನಡೆದ ಈ ದಾಳಿಯಿಂದ ಪಾಕ್‌ ಪತರುಗುಟ್ಟಿ ಹೋಗಿದೆ. ಹಾಗಾದರೆ ಈ ಕಾರ್ಯಾಚರಣೆಗೆ ಆಪರೇಷನ್‌ ಸಿಂಧೂರ ಎಂದು ಏಕೆ ಇಡಲಾಗಿದೆ? ಅದಕ್ಕೆ ಇಲ್ಲಿದೆ ಉತ್ತರ. ಸಿಂಧೂರ ಸಾಂಪ್ರದಾಯಿಕವಾಗಿ ಹಿಂದೂ ಮಹಿಳೆಯರ ಮುತ್ತೈದೆತನದ ಸಂಕೇತ. ಏಪ್ರಿಲ್ 22ರಂದು ಧರ್ಮದ ಆಧಾರದ ಮೇಲೆ ಪುರುಷರನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದರು. ಅನೇಕ ಮಹಿಳೆಯರ ಮುತೈದೆತನಕ್ಕೆ ಕೈ ಹಾಕುವ ದುಸ್ಸಾಹಸ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಭಾರತ ಡೆಡ್ಲಿ ಅಟ್ಯಾಕ್‌ ನಡೆಸಿದ್ದು, ಈ ಆಪರೇಷನ್‌ಗೆ ಈ ಹೆಸರು ಅತ್ಯಂತ ಸೂಕ್ತವಾಗಿದೆ. ಇನ್ನು ಪ್ರಮುಖ ವಿಚಾರ ಎಂದರೆ ಯುದ್ಧಕ್ಕೆ ಹೊರಡುವ ಯೋಧರು ಹಣೆಗೆ ಸಿಂಧೂರ ತಿಲಕವನ್ನು ಇಡುವುದು ವಾಡಿಕೆ. ಹೀಗಾಗಿ ಈ ಆಪರೇಷನ್‌ಗೆ ಸಿಂಧೂರ ಎಂದು ಹೆಸರಿಡಲಾಗಿದೆ. ಇನ್ನು ಆಪರೇಷನ್‌ ಸಿಂಧೂರ್‌ ಎಂಬ ಹೆಸರಿನಲ್ಲಿ ಭಾವನಾತ್ಮಕ ಮತ್ತು ವೀರೋಚಿತ ಸಂದೇಶವಿದೆ.

ಆಪರೇಷನ್ ಸಿಂಧೂರ್: ಒಂದು ಸಾಂಕೇತಿಕ ಹೆಸರು

ಎರಡು ವಾರಗಳ ಹಿಂದೆ, ಏಪ್ರಿಲ್ 22 ರಂದು, ತನ್ನ ಪತಿಯ ನಿರ್ಜೀವ ದೇಹದ ಪಕ್ಕದಲ್ಲಿ ಮೌನವಾಗಿ ಆಘಾತದಿಂದ ಕುಳಿತಿರುವ ಹಿಂದೂ ಮಹಿಳೆಯ ಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡಿತು, ಇದು ಜಮ್ಮು ಮತ್ತು ಕಾಶ್ಮೀರದಲ್ಲಿ 26 ನಾಗರಿಕರ ಜೀವಗಳನ್ನು ಬಲಿತೆಗೆದುಕೊಂಡ ವಿನಾಶಕಾರಿ ಉಗ್ರಗಾಮಿ ದಾಳಿಯ ಪ್ರಬಲ ಸಂಕೇತವಾಯಿತು.

ಈ ಸುದ್ದಿಯನ್ನೂ ಓದಿ: Operation Sindoor: ಉಗ್ರರ ಉಸಿರು ಅಡಗಿಸಿದ ಲೋಟರಿಂಗ್‌ ಮ್ಯುನಿಷನ್ಸ್ ಡ್ರೋನ್‌:‌ ಹಾಗಂದ್ರೇನು ಗೊತ್ತ?

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ಮಂಗಳವಾರ ತಡರಾತ್ರಿ ಪಾಕ್‌ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು(Operation Sindoor) ನಿರ್ದಿಷ್ಟ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಪಾಕಿಸ್ತಾನ ಎಲ್‌ಒಸಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಸದ್ಯ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಜಮ್ಮು, ಸಾಂಬಾ, ಕಥುವಾ, ರಾಜೌರಿ ಮತ್ತು ಪೂಂಚ್‌ನಲ್ಲಿರುವ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳು ಇಂದು ಮುಚ್ಚಲ್ಪಡುತ್ತವೆ. ಪಠಾಣ್‌ಕೋಟ್‌ನಲ್ಲಿರುವ ಎಲ್ಲಾ ಶಾಲೆಗಳು 72 ಗಂಟೆಗಳ ಕಾಲ ಮುಚ್ಚಲ್ಪಟ್ಟಿದೆ.

ಕೊಟ್ಪಿ, ಮುಜಾಫರ್‌ಬಾದ್, ಬಹವಲ್ಪುರ್‌ ಬಳಿ ಏರ್‌ಸ್ಟ್ರೈಕ್ ನಡೆದಿದೆ. ಭಾರತದ ದಾಳಿಯನ್ನು ಖಚಿತಪಡಿಸಿರುವ ಪಾಕಿಸ್ತಾನ, ಭಾರತೀಯ ದಾಳಿಯಲ್ಲಿ 9 ಸ್ಥಳಗಳು ಹಾನಿಗೊಳಗಾಗಿವೆ ಮತ್ತು 8 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಲಷ್ಕರ್ ಎ ತಯಬಾ ಮತ್ತು ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಗಳ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತದಿಂದ ದಾಳಿ ನಡೆಸಲಾಗಿತ್ತು.