About Us Advertise with us Be a Reporter E-Paper

Breaking Newsದೇಶಪ್ರಚಲಿತ

ವೇದಿಕೆಯಲ್ಲಿಯೇ ಅಸ್ವಸ್ಥರಾಗಿ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್​ ಗಡ್ಕರಿ

ಮುಂಬೈ: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ವೇದಿಕೆಯಲ್ಲೇ ಕುಸಿದು ಬಿದ್ದಿದ್ದಾರೆ.

ಅಹ್ಮದ್‍ನಗರದಲ್ಲಿರುವ ಮಹಾತ್ಮ ಪುಲೆ ಕೃಷಿ ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ನಿತಿನ್ ಗಡ್ಕರಿ ಪಾಲ್ಗೊಂಡಿದ್ದರು. ಮಹಾರಾಷ್ಟ್ರದ ಅಹಮದ್​ನಗರದಲ್ಲಿ ಘಟನೆ ನಡೆದಿದ್ದು, ಗಡ್ಕರಿ ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಸ್ವಸ್ಥರಾಗುವುದಕ್ಕೂ ಮುನ್ನ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ್ದ ಗಡ್ಕರಿ, ರಾಷ್ಟ್ರಗೀತೆ ಹಾಡುವಾಗ ಕುಸಿದು ಬಿದ್ದಿದ್ದಾರೆ. ಘಟನೆ ನಡೆದಾಗ ಮಹಾರಾಷ್ಟ್ರದ ರಾಜ್ಯಪಾಲ ಸಿ.ವಿದ್ಯಾಸಾಗರ್​ ರಾವ್​ ಅವರೂ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಲೋ ಶುಗರ್​ನಿಂದ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಯವಾಗಿತ್ತು. ವೈದ್ಯರು ಆರೋಗ್ಯ ಪರಿಶೀಲಿಸಿದ್ದು, ನಾನೀಗ ಆರಾಮಾಗಿದ್ದೇನೆ. ಚೇತರಿಕೆಗೆ ಹಾರೈಸಿದ ಎಲ್ಲರಿಗೂ ನನ್ನ ಧನ್ಯವಾದಗಳು ಎಂದು ನಿತಿನ್​ ಗಡ್ಕರಿ ಟ್ವೀಟ್​ ಮಾಡಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close