About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ನಾನು ಮಾಡಿದಷ್ಟು ಕೆಲಸ ಯಾವ ಮುಖ್ಯಮಂತ್ರಿಯೂ ಮಾಡಿಲ್ಲ: ಸಿದ್ದರಾಮಯ್ಯ

ಬಳ್ಳಾರಿ: ನಾನು ಮುಖ್ಯಮಂತ್ರಿಯಾಗಿ ಮಾಡಿದಷ್ಟು ಕೆಲಸ ಕರ್ನಾಟಕದ ಇತಿಹಾಸದಲ್ಲಿ ಯಾವ ಮುಖ್ಯಮಂತ್ರಿಯೂ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಲ್ಲಿನ ಬಂಡಿಹಟ್ಟಿಯಲ್ಲಿ ಕನಕದಾಸ ಪುತ್ಥಳಿ ಅನಾವರಣ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಅವಧಿಯಲ್ಲಿ ಮಾಡಿದಷ್ಟು ಹಿಂದಿಯ ಯಾವ ಮುಖ್ಯಮಂತ್ರಿಯೂ ಮಾಡಿಲ್ಲ. ಆದರೆ, ಮತೀಯ ಶಕ್ತಿಗಳು ಹಿಂದುತ್ವದ ಹೆಸರಿನಲ್ಲಿ ಜನರನ್ನು ಮರಳು ಮಾಡಿದ್ದರಿಂದ ನಾವು ಸೋಲು ಕಾಣಬೇಯಿತು. ಬಿಜೆಪಿ  ಹಿಂದುತ್ವ ಹೆಸರಿನಲ್ಲಿ ಸುಳ್ಳು ಪ್ರಚಾರ ಮಾಡಿದ್ದರಿಂದ ನಮಗೆ ಹಿನ್ನಡೆಯಾಯಿತು. ಹಿಂದುತ್ವದ ಸುಳ್ಲು ಪ್ರಚಾರ ಹೆಚ್ಚು ಪ್ರಾಮುಖ್ಯ ಪಡೆದಿದ್ದರಿಂದ, ನಮ್ಮ ಸರ್ಕಾರದ ಯೋಜನೆಗಳು ಜನರರಿಗೆ ತಲುಪದೆ ತೆರೆಮರೆಗೆ ಸರಿದರು ಎಂದು  ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.

 ರಾಜ್ಯ ಸರ್ಕಾರದ ಮಿತ್ರ ಪಕ್ಷಗಳ ನಡುವೆ ಸಮನ್ವಯ ಸಾಧಿಸುವುದಷ್ಟೇ ಸಮನ್ವಯ ಸಮಿತಿ ಕೆಲಸ, ಮುಖ್ಯಮಂತ್ರಿ ಆಯ್ಕೆ ವಿಚಾರ ಸಮನ್ವಯ ಸಮಿತಿಗೆ ಸಂಬಂಧಿಸಿದ್ದಲ್ಲ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥರನ್ನು ಸಮನ್ವಯ ಸಮಿತಿಗೆ ಸೇರ್ಪಡೆ ಮಾಡಿಕೊಳ್ಳುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಹೇಳಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close