About Us Advertise with us Be a Reporter E-Paper

Breaking Newsದೇಶಪ್ರಚಲಿತ
Trending

ಬಾಯಿಗೆ ಬಂದಂತೆ ಭರವಸೆ ಕೊಡುವ ರಾಜಕೀಯ ಪಕ್ಷಗಳ ಪರಿಪಾಠಕ್ಕೆ ಬ್ರೇಕ್ ಹಾಕಲು ಮುಂದಾದ ಚುನಾವಣಾ ಆಯೋಗ

ಶನಿವಾರದಂದು ಚುನಾವಣಾ ಆಯೋಗವು ರಾಜಕೀಯ ಪಕ್ಷಗಳಿಗೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವ ವಿಚಾರವಾಗಿ ಟೈಮ್ ಲೈನ್ ನಿಗಧಿಪಡಿಸಿದೆ.

ಮತದಾರರನ್ನು ಓಲೈಸುವ ಭರದಲ್ಲಿ ಬಾಯಿಗೆ ಬಂದಂತೆ ಭರವಸೆಗಳನ್ನು ನೀಡುವ ರಾಜಕೀಯ ಪಕ್ಷಗಳ ಪ್ರವೃತ್ತಿಗೆ ಕಡಿವಾಣ ಹಾಕಲು ಚುನಾವಣಾ ಆಯೋಗ ಮುಂದಾಗಿದೆ.

ಚುನಾವಣಾ ನೀತಿ ಸಂಹಿತೆಯ ಅವಧಿಯ ಕೊನೆಯ 48 ಗಂಟೆಗಳ ನಿಷೇಧಾಜ್ಞೆ ಅವಧಿಯಲ್ಲಿ ಚುನಾವಣಾ ಪ್ರಣಾಳಿಕೆಯನ್ನು ರಾಜಕೀಯ ಪಕ್ಷಗಳು ಆಚೆ ತರಬಾರದು ಎಂಬ ಕಠಿಣ ನಿಯಮವನ್ನು ತರಲು ಜನ ಪ್ರತಿನಿಧಿ ಕಾಯ್ದೆ 1951ರ 126ನೇ ವಿಧಿಯನ್ನು ಬಲಪಡಿಸಲಾಗಿದೆ.

ಮತದಾನಕ್ಕೂ ಮುನ್ನ ಎರಡು ದಿನಗಳ ಅವಧಿಯಲ್ಲಿ ಯಾವುದೇ ಬಹಿರಂಗ ಪ್ರಚಾರಕ್ಕೆ ಅವಕಾಶವಿಲ್ಲ,  ಈಗ ಪ್ರಣಾಳಿಕೆ ಬಿಡುಗಡೆಯನ್ನು ಸಹ ಇದೇ ವ್ಯಾಪ್ತಿಯಲ್ಲಿ ಒಳಗೊಳ್ಳುವಂತೆ ಮಾಡಲಾಗಿದೆ.

ಕೇವಲ ಲೋಕಸಭಾ ಚುನಾವಣೆಗೆ ಮಾತ್ರವಲ್ಲದೆ ಮುಂಬರುವ ಎಲ್ಲ ಚುನಾವಣೆಗೂ ಈ ನಿಯಮ ಅನ್ವಯವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

Tags

Related Articles

Leave a Reply

Your email address will not be published. Required fields are marked *

Language
Close