About Us Advertise with us Be a Reporter E-Paper

Breaking Newsದೇಶಪ್ರಚಲಿತ
Trending

ಉತ್ತರ ಭಾರತದಲ್ಲಿ ಭಾರಿ ಮಳೆಗೆ 25 ಮಂದಿ ಬಲಿ

ಹಿ.ಪ್ರದೇಶದಲ್ಲಿ ಭಾರಿ ಹಿಮಪಾತವಾಗಿದ್ದು, ಟ್ರೆಕಿಂಗ್‍ಗೆ ತೆರಳಿದ್ದ 35 ಐಐಟಿ ವಿದ್ಯಾರ್ಥಿಗಳು ಸೇರಿ 45 ಮಂದಿ ನಾಪತ್ತೆಯಾಗಿದ್ದಾರೆ.

ದೆಹಲಿ: ಹಿಮಾಚಲಪ್ರದೇಶ, ಜಮ್ಮು-ಕಾಶ್ಮೀರ, ಪಂಜಾಬ್ ಮತ್ತು ಹರಿಯಾಣದಲ್ಲಿ ವರುಣದೇವ ರುದ್ರವತಾರ ತೋರುತ್ತಿದ್ದಾನೆ.

ಉತ್ತರದ ನಾಲ್ಕು ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಅಲ್ಲದೆ ಭೂಕುಸಿತ ಕೂಡ ಉಂಟಾಗಿದ್ದು ಒಟ್ಟು 25 ಮಂದಿ ಮೃತಪಟ್ಟಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಎಂಟು ಮಂದಿ, ಜಮ್ಮು-ಕಾಶ್ಮೀರದಲ್ಲಿ ಏಳು, ಪಂಜಾಬ್ ನಲ್ಲಿ ಆರು ಹಾಗೂ ಹರಿಯಾಣದಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಇಲ್ಲಿ ಭಾರಿ ಮಳೆಗೆ ಈಗಾಗಲೇ ಅಪಾರ ಹಾನಿ ಸಂಭವಿಸಿದೆ. ಪ್ರಮುಖ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ಕುಲ್ಲು ಜಿಲ್ಲೆಯಲ್ಲಿ ಹಲವು ಮನೆಗಳು ಜಲಾವೃತವಾಗಿದ್ದು, ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ.

ಪ್ರವಾಹಪೀಡಿತ ಪ್ರದೇಶಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಹಿಮಾಚಲ ಪ್ರದೇಶದಲ್ಲಿ ಭಾರಿ ಹಿಮಪಾತವಾಗಿದ್ದು, ಟ್ರೆಕಿಂಗ್‍ಗೆ ತೆರಳಿದ್ದ ರೂರ್ಕಿಯ 35 ಐಐಟಿ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 45 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿಗಳ ನಾಪತ್ತೆ ಪ್ರಕರಣವನ್ನು ಹಿಮಾಚಲ ಪ್ರದೇಶ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳುವಂತೆ ಭಾರತೀಯ ಸೇನೆಗೆ ಮನವಿ ಮಾಡಿದೆ. ಕುಲ್ಲು, ಕಂಗ್ರಾ ಮತ್ತು ಚಂಬಾ ಜಿಲ್ಲೆಗಳಲ್ಲಿ ಹಿಮಪಾತದ ಪ್ರಮಾಣ ಹೆಚ್ಚಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close