Readers Colony: ಸರ್ಕಾರದಿಂದಲೇ ಬರೆ
ಇತ್ತೀಚಿನ ದಿನಗಳಲ್ಲಿ ನಿರಂತರವಾಗಿ ಏರಿಕೆಯಾಗುತ್ತಿರುವ ಅಗತ್ಯ ವಸ್ತುಗಳ ಬೆಲೆಗಳಿಂದಾಗಿ ಸಾಮಾನ್ಯ ಜನರ ಬದುಕು ದುಸ್ತರವಾಗಿದೆ. ಎಲ್ಲಕ್ಕಿಂತ ಆಘಾತಕಾರಿ ವಿಷಯವೆಂದರೆ ಮಾರುಕಟ್ಟೆಯ ಏರಿಳಿತ ಗಳಿಗಿಂತ ಹೆಚ್ಚಾಗಿ ಸರ್ಕಾರವೇ ವಿವಿಧ ಸೇವೆಗಳು, ತೆರಿಗೆಗಳು ಮತ್ತು ಸಾರಿಗೆ ದರಗಳನ್ನು ಹೆಚ್ಚಿಸುವ ಮೂ ಲಕ ಬೆಲೆ ಏರಿಕೆಗೆ ನೇರ ಕಾರಣವಾಗುತ್ತಿರುವುದು ನಿಜಕ್ಕೂ ಕಳವಳ ಕಾರಿ ಸಂಗತಿ. ಬಸ್ ದರಗಳ ಏರಿಕೆ, ವಿದ್ಯುತ್ ಶುಲ್ಕ ಹೆಚ್ಚಳ, ಹಾಲಿ ನ ದರ ಏರಿಕೆ ಮತ್ತು ಆಸ್ತಿ ತೆರಿಗೆಗಳ ಹೆಚ್ಚಳದಿಂದಾಗಿ ಬಡ ಹಾಗೂ ಮಧ್ಯಮ ವರ್ಗದವರ ಜೇಬಿಗೆ ಕತ್ತರಿ ಬೀಳುತ್ತಿದೆ.