About Us Advertise with us Be a Reporter E-Paper

Breaking Newsದೇಶಪ್ರಚಲಿತ
Trending

ಅಧಿಕಾರಿ ವರ್ಗಾವಣೆ: ಸುಪ್ರೀಂ ಕೋರ್ಟ್ ಕ್ಷಮೆ ಕೋರಿದ ನಾಗೇಶ್ವರ್ ರಾವ್

ದೆಹಲಿ: ಸಿಬಿಐನ ಹಂಗಾಮಿ ನಿರ್ದೇಶಕರಾಗಿದ್ದ ಅವಧಿಯಲ್ಲಿ ಅಧಿಕಾರಿಯೊಬ್ಬರನ್ನು ವರ್ಗಾವಣೆ ಮಾಡಿದ್ದಕ್ಕೆ ಸಂಬಂಧಿಸಿದಂತೆ ನಾಗೇಶ್ವರ್ ರಾವ್ ಸುಪ್ರೀಂ ಕೋರ್ಟ್ ಕ್ಷಮೆಯಾಚಿಸಿದ್ದಾರೆ.

ಅಧಿಕಾರಿಗಳ ವರ್ಗಾವಣೆ ಮಾಡಬಾರದೆಂಬ ಸುಪ್ರೀಂ ಕೋರ್ಟ್ ನ ಆದೇಶದ ಹೊರತಾಗಿಯೂ ಸಹ ನಾಗೇಶ್ವರ್ ರಾವ್ ಬಿಹಾರದ ಬಾಲಿಕಾ ಗೃಹಗಳಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಗಳ ಕುರಿತು ತನಿಖೆ ನಡೆಸುತ್ತಿದ್ದ ಸಿಬಿಐ ಮಾಜಿ ಜಂಟಿ ನಿರ್ದೇಶಕ ಎ.ಕೆ. ಶರ್ಮಾ ಅವರನ್ನು ಕಾರಣವಿಲ್ಲದೆ ವರ್ಗಾವಣೆ ಮಾಡಿದ್ದರು.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶ ಉಲ್ಲಂಘನೆಯಾಗಿದೆ ಎಂದು ಫೆ.07 ರಂದು ಸುಪ್ರೀಂ ಕೋರ್ಟ್ ಸಿಬಿಐ ಗೆ ಚಾಟಿ ಬೀಸಿತ್ತು. ಅಷ್ಟೇ ಅಲ್ಲದೇ ಕೋರ್ಟ್ ಅನುಮತಿ  ಇಲ್ಲದೇ ಅಧಿಕಾರಿಯನ್ನು ವರ್ಗಾವಣೆ ಮಾಡಿದ್ದ ನಾಗೇಶ್ವರ್ ರಾವ್ ಗೆ ನ್ಯಾಯಾಂಗ ನಿಂದನೆ ನೊಟೀಸ್ ನ್ನೂ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಗೆ ಕ್ಷಮೆ ಯಾಚಿಸಿರುವ ನಾಗೇಶ್ವರ್ ತಮ್ಮದು ತಪ್ಪಾಗಿದೆಯೆಂದೂ, ಉದ್ದೇಶಪೂರ್ವಕವಾಗಿ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಿಲ್ಲ ಎಂದು ತಮ್ಮ ಅಫಿಡವಿಟ್​ನಲ್ಲಿ ತಿಳಿಸಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close