ಒಂದು ನಿಮಿಷ ತಡವಾಗಿ ಹಾಜರಾದರೆ ಪರೀಕ್ಷೆ ಬರೆಯಲಿಕ್ಕಿಲ್ಲ

Posted In : ಬೆಂಗಳೂರು, ರಾಜ್ಯ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಈ ಬಾರಿ ನಿಗದಿತ ಸಮಯಕ್ಕಿಂತ ಒಂದು ನಿಮಿಷ ತಡವಾಗಿ ಹೋದರೂ ಪರೀಕ್ಷೆ ಬರೆಯಲು ಅವಕಾಶ ಸಿಗುವುದಿಲ್ಲ ಎಂದು ಎಸ್‌ಎಸ್‌ಎಲ್‌ಸಿ ಮಂಡಳಿ ಸುತ್ತೋಲೆ ಹೊರಡಿಸಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಮಂಡಳಿ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ. ಬೆಳಗ್ಗೆ 9.30ಕ್ಕೆ ಆರಂಭವಾಗುವ ಪರೀಕ್ಷೆಗೆ ಆ ಸಮಯದೊಳಗೆ ವಿದ್ಯಾರ್ಥಿಗಳು ಹಾಜರಿರುವುದು ಕಡ್ಡಾಯ. ಬೆಳಗ್ಗೆ 9.25ಕ್ಕೆ ಮುಖ್ಯ ಅಧೀಕ್ಷಕರಿಂದ ಕೊಠಡಿ ಮೇಲ್ವಿಚಾರಕರಿಗೆ ಪ್ರಶ್ನೆ ಪತ್ರಿಕೆ ನೀಡಲಾಗುತ್ತದೆ. 9.30ಕ್ಕೆ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ವಿತರಿಸಲಾಗುತ್ತದೆ.

ಅನಂತರ ಬರುವ ವಿದ್ಯಾರ್ಥಿಗಳಿಗೆ ಪ್ರವೇಶವಿರುವುದಿಲ್ಲ. ಈ ಬಗ್ಗೆ ಮಂಡಳಿ, ಡಿಡಿಪಿಐಗಳು ಹಾಗೂ ಬಿಇಓಗಳ ಮೂಲಕ ಎಲ್ಲ ಶಾಲೆಗಳಿಗೆ ಸುತ್ತೋಲೆ ಕಳಿಸಿದೆ. ಈ ಹಿಂದೆ 9.30 ರಿಂದ 10 ಗಂಟೆಯೊಳಗೆ ವಿದ್ಯಾರ್ಥಿಗಳು ಅನುಕಂಪದ ಮೇಲೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಲಾಗುತ್ತಿತ್ತು. ಇದು ದುರುಪಯೋಗ ಆಗಬಹುದು ಎಂಬ ನಿಟ್ಟಿನಲ್ಲಿ ಮಂಡಳಿ ಈ ಕ್ರಮ ಜಾರಿಗೆ ತಂದಿದೆ.

Leave a Reply

Your email address will not be published. Required fields are marked *

3 × 3 =

Monday, 22.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಪಂಚಮಿ, ಸೋಮವಾರ, ನಿತ್ಯ ನಕ್ಷತ್ರ-ಪೂರ್ವಾ ಭಾದ್ರ , ಯೋಗ-ಪರಿಘ, ಕರಣ-ಬಾಲವ.

ರಾಹುಕಾಲಗುಳಿಕಕಾಲಯಮಗಂಡಕಾಲ
7.30-9.00 1.30-3.00 10.30-12.00

Read More

 

Monday, 22.01.2018

ಉತ್ತರಾಯಣ, ಶಿಶಿರಋತು, ಮಾಘ ಮಾಸ, ಶುಕ್ಲಪಕ್ಷ, ಪಂಚಮಿ, ಸೋಮವಾರ, ನಿತ್ಯ ನಕ್ಷತ್ರ-ಪೂರ್ವಾ ಭಾದ್ರ , ಯೋಗ-ಪರಿಘ, ಕರಣ-ಬಾಲವ.

ರಾಹುಕಾಲಗುಳಿಕಕಾಲಯಮಗಂಡಕಾಲ
7.30-9.00 1.30-3.00 10.30-12.00

Read More

Back To Top