About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ
Trending

ಆಪರೇಷನ್ ಕಮಲ ಸುಳಿವು: ಕಾಂಗ್ರೆಸ್ ನಾಯಕರಿಂದ ಉಪಹಾರ ಕೂಟ

ಬೆಂಗಳೂರು: ಆಪರೇಷನ್ ಕಮಲದ ಸುಳಿವು ದೊರೆಯುತ್ತಿದ್ದಂತೆ ಕಾಂಗ್ರೆಸ್ ನಾಯಕರು ನಗರದ ಅಶೋಕ ಹೋಟೆಲ್‍ನಲ್ಲಿ ಸೋಮವಾರ ಬೆಳಗ್ಗೆ ಸಭೆ ನಡೆಸಿದ್ದಾರೆ. ಉಪಹಾರ ಕೂಟದ ನೆಪದಲ್ಲಿ ಮಂತ್ರಿಗಳ ಜತೆ ದಿನೇಶ್ ಗುಂಡೂರಾವ್, ಪರಮೇಶ್ವರ್, ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ.

ಯಾವುದೇ ಕಾರಣಕ್ಕೂ ಆಪರೇಶನ್ ಕಮಲಕ್ಕೆ ಅವಕಾಶ ಮಾಡಿಕೊಡಬೇಡಿ. ದೋಸ್ತಿ ಸರ್ಕಾರದ ರಕ್ಷಣೆಗೆ ಎಲ್ಲರೂ ಬದ್ಧರಾಗಿರಿ. ಲೋಕಸಭೆ ಚುನಾವಣೆಯೇ ನಮಗೆ ಪ್ರಮುಖವಾಗಿದೆ ಎಂದು ಸಿದ್ದರಾಮಯ್ಯ ಎಲ್ಲ ಸಚಿವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಜಯಮಾಲಾ, ರಹೀಂಖಾನ್, ರಾಜಶೇಖರ್ ಪಾಟೀಲ್, ಡಿಕೆ ಶಿವಕುಮಾರ್, ಪುಟ್ಟರಂಗ ಶೆಟ್ಟಿ, ತುಕಾರಂ, ಪ್ರಿಯಾಂಕ್ ಖರ್ಗೆ, ಜಮೀರ್ ಅಹ್ಮದ್ ಉಪಹಾರ ಕೂಟದಲ್ಲಿ ಭಾಗಿಯಾಗಿದ್ದರು. ಪೂರ್ವ ನಿಯೋಜಿತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸಚಿವರಾದ ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ದೇಶಪಾಂಡೆ, ಯುಟಿ ಖಾದರ್, ಶಿವಳ್ಳಿ ಗೈರಾಗಿದ್ದರು.

Tags

Related Articles

Leave a Reply

Your email address will not be published. Required fields are marked *

Language
Close