About Us Advertise with us Be a Reporter E-Paper

ಪ್ರಚಲಿತವಿದೇಶ
Trending

ಪಾಕಿಸ್ತಾನ: ಆತ್ಮಾಹುತಿ ಬಾಂಬ್ ದಾಳಿಗೆ 133 ಸಾವು

ಇಸ್ಲಾಮಬಾದ್: ಪಾಕಿಸ್ತಾನದಲ್ಲಿ ಪ್ರತ್ಯೇಕ ಎರಡು ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, 133 ಜನ ಮೃತಪಟ್ಟಿದ್ದಾರೆ.
ಜುಲೈ 25 ರಂದು ಸಾರ್ವತ್ರಿಕ ಚುನಾವಣೆಯ ಪ್ರಯುಕ್ತ ನಡೆಯುತ್ತಿದ್ದ ಎರಡು ಪ್ರತ್ಯೇಕ ಚುನಾವಣಾ ರ್ಯಾಲಿಯನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಪ್ರಮುಖ ರಾಜಕೀಯ ಮುಖಂಡ ಸೇರಿ 128 ಜನ ಸಾವನ್ನಪ್ಪಿದ್ದು, 300ಕ್ಕೂ ಹೆಚ್ಚಿನ ಜನ ಗಾಯಗೊಂಡಿದ್ದಾರೆ.
ಮಸ್ತಂಗ್ ಪ್ರದೇಶದಲ್ಲಿ ಬಲೂಚಿಸ್ತಾನ ಅವಾಮಿ ಪಕ್ಷ ನಡೆಸುತ್ತಿದ್ದ ರ್ಯಾಲಿ ವೇಳೆ ಪಕ್ಷದ ಮುಖಂಡ ಸಿರಾಜ್ ರೈಸಾನಿ ಅವರು ಮೃತಪಟ್ಟಿದ್ದಾರೆ. ಮತ್ತೊಂದು ಬಾಂಬ್ ದಾಳಿ ಬನ್ನುನಡೆದಿದೆ. ಈ ದಾಳಿಯಲ್ಲಿ ಐವರು ಸಾವನ್ನಪ್ಪಿದ್ದು, 39 ಜನರು ಗಾಯಗೊಂಡಿದ್ದಾರೆ. ಮಾಜಿ ಪ್ರಧಾನಿ ನವಾಜ್ ಶರೀಫ್ ಹಾಗೂ ಅವರ ಪುತ್ರಿ ಮರಿಯಮ್ ಶರೀಫ್ ಬಂಧನದ ವೇಳೆಯಲ್ಲೇ ಈ ಘಟನೆ ಜರುಗಿದ್ದು, ಈ ಸಂಬಂಧ ಜುಲೈ 25ರಂದು ನಡೆಯಲಿರುವ ಚುನಾವಣೆ ಹಿನ್ನಲೆಯಲ್ಲಿ ಸಾಕಷ್ಟು ರಾಜಕೀಯ ಕೆಸರೆರೆಚಾಟ ನಡೆಯುವ ಸಾಧ್ಯತೆ ಇದೆ.

Tags

Related Articles

Leave a Reply

Your email address will not be published. Required fields are marked *

Language
Close