About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ರಸ್ತೆ ದುರಸ್ತಿ ಮಾಡಲು ಪ್ರಧಾನಿಗೆ ಪತ್ರ ಬರೆದ ಗ್ರಾಮ ಪಂಚಾಯ್ತಿ ಸದಸ್ಯ

ಬಣಕಲ್ ಗ್ರಾಪಂ ಸದಸ್ಯ ಬರೆದ ಪತ್ರಕ್ಕೆ ಪ್ರಧಾನಿ ಸ್ಪಂದನೆ, ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಸಿಎಂ ಕಚೇರಿಗೆ ಸೂಚನೆ

ಬಣಕಲ್: ಬಣಕಲ್-ಗುಡ್ಡಹಟ್ಟಿ ರಸ್ತೆ ಅಭಿವೃದ್ಧಿ ಮಾಡುವಂತೆ ಬಣಕಲ್ ಗ್ರಾಪಂ ಸದಸ್ಯ ಸತೀಶ್ ಮತ್ತಿಕಟ್ಟೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರಕ್ಕೆ ಸ್ಪಂದನೆ ದೊರೆತ್ತಿದ್ದು, ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಕಚೇರಿಯಿಂದ ಮುಖ್ಯಮಂತ್ರಿಗಳ ಕಚೇರಿಗೆ ಸೂಚನೆ ನೀಡಲಾಗಿದೆ.

ಮಾರ್ಚ್ 19ರಂದು ಗ್ರಾಪಂ ಸದಸ್ಯ ಸತೀಶ್ ಮತ್ತಿಕಟ್ಟೆ ಪರಿಶಿಷ್ಟ ಜಾತಿ ಪಂಗಡದವರೆ ಹೆಚ್ಚಿನ ಸಂಖ್ಯೆಯಲ್ಲಿ ಗುಡ್ಡಹಟ್ಟಿ ರಸ್ತೆ ಹೊಂಡ ಗುಂಡಿಗಳಿಂದ ಕೂಡಿದ್ದು, ಹಲವು ವರ್ಷದಿಂದ ದುರಸ್ತಿ ಮಾಡದೆ ಇರುವುದರಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು, ಪಾದಚಾರಿಗಳು ತೊಂದರೆ ಅನುಭವಿಸುವಂತಾಗಿದೆ. ರಸ್ತೆ ಅಭಿವೃದ್ಧಿಪಡಿಸಿ ಕೊಡಿಸುವಂತೆ ಪ್ರಧಾನಿ ಅವರಿಗೆ ಪತ್ರ ಬರೆದಿದ್ದರು.

ಇದಕ್ಕೆ ಸ್ಪಂದಿಸಿ ಪ್ರಧಾನಿ ಕಚೇರಿಯಿಂದ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಕಚೇರಿಗೆ ಸೂಚಿಸಲಾಗಿದ್ದು, ಮುಖ್ಯಮಂತ್ರಿಗಳ ಕಚೇರಿಯಿಂದ ಈ ಬಗ್ಗೆ ಮಾಹಿತಿ ನೀಡುವಂತೆ ಜಿಲ್ಲಾ ಪಂಚಾಯತ್ ರಾಜ್ ಎಂಜಿನಿಯರ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ತಾಲೂಕು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರಿಗೆ ಸೂಚಿಸಲಾಗಿದೆ.

ಪ್ರಧಾನಿಗೆ ಬರೆದ ಪತ್ರ ಪ್ರದರ್ಶಿಸುತ್ತಿರುವ ಸತೀಶ್ ಮತ್ತಿಕಟ್ಟೆ.

ಈ ಭಾಗದ ಜನಪ್ರತಿನಿಧಿಗಳಿಗೆ ಹಲವು ಬಾರಿ ರಸ್ತೆ ದುರಸ್ತಿ ಮಾಡುವಂತೆ ಮನವಿ ಮಾಡಿದರೂ, ಯಾವುದೇ ಕ್ರಮಕೈಗೊಳ್ಳದೆ ಇರುವುದರಿಂದ ಪ್ರಧಾನಿಯವರಿಗೆ ರಸ್ತೆ ಸಮಸ್ಯೆಯ ಬಗ್ಗೆ ಪತ್ರ ಬರೆದಿದ್ದೆ. ಅದಕ್ಕೆ ಪ್ರತಿಕ್ರಿಯೆ ಬಂದಿದ್ದು, ಮುಖ್ಯಮಂತ್ರಿಗಳ ಕಚೇರಿಯಿಂದ ಜಿಲ್ಲಾ ಮತ್ತು ತಾಲೂಕು ಅಧಿಕಾರಿಗಳಿಗೆ ಸೂಚನೆ ಬಂದಿದೆ. ಇನ್ನಾದರೂ ದುರಸ್ತಿಯಾಗಬಹುದೆಂಬ ಮಹದಾಸೆ ಹೊಂದಿದ್ದೇನೆ.
-ಸತೀಶ್ ಮತ್ತಿಕಟ್ಟೆ, ಗ್ರಾ.ಪಂ ಸದಸ್ಯ.

Tags

Related Articles

Leave a Reply

Your email address will not be published. Required fields are marked *

Language
Close