About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ
Trending

ಟಿಪ್ಪು ಜಯಂತಿ ಮಾಡಿಯೇ ಸಿದ್ಧ: ರಾಜ್ಯ ಸರಕಾರ

ಬೆಂಗಳೂರು: ಭಾರೀ ವಿರೋಧದ ನಡುವೆಯೂ ಟಿಪ್ಪು ಜಯಂತಿ ಆಚರಣೆಗೆ ಟೊಂಕ ಕಟ್ಟಿ ನಿಂತಿರುವ ರಾಜ್ಯ ಸರಕಾರ, ಈ ನಿಟ್ಟಿನಲ್ಲಿ ಇಂದು ಅಧಿಕಾರಿಗಳ ಸಭೆ ಕರೆದಿದೆ.

ಗೃಹ ಸಚಿವರೂ ಆದ ಪರಮೇಶ್ವರ  ಇಂದು ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. “ಟಿಪ್ಪು ಜಯಂತಿ ವೇಳೆ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವ ಬಗ್ಗೆ ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು” ಎಂದು ಪರಮೇಶ್ವರ ತಿಳಿಸಿದ್ದಾರೆ.

ಇದೇ ವೇಳೆ, ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ ಹಾಗು ಹಿಂದು ಸಂಘಟನೆಗಳ ದೊಡ್ಡ ಮಟ್ಟದಲ್ಲಿ ದನಿಯೆತ್ತಿವೆ. ಈ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ, “ಬಿಜೆಪಿಯವರು ಕೋಮುವಾದಿಗಳು, ಇದೇ ಕಾರಣಕ್ಕೆ ಟಿಪ್ಪು ಜಯಂತಿ ವಿರೋಧಿಸುತ್ತಿದ್ದಾರೆ. ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಮಾಡಲು ಯತ್ನಿಸುತ್ತಿದ್ದಾರೆ” ಎಂದರು.

ಜಯಂತಿಗೆ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ವಿರೋಧದ ಕುರಿತು ಮಾತನಾಡಿದ ಪರಂ, “ಆಹ್ವಾನ ಪತ್ರಿಕೆಯಲ್ಲಿ ಹೆಸರು ಮುದ್ರಿಸದಂತೆ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಮನವಿಗೆ ಪ್ರತಿಕ್ರೊಯಿಸಿ ಶಿಷ್ಟಾಚಾರ ರೀತಿಯ ಆಮಂತ್ರಣ ಪತ್ರಿಕೆ ಮುದ್ರಿಸಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ

 

Tags

Related Articles

Leave a Reply

Your email address will not be published. Required fields are marked *

Language
Close