About Us Advertise with us Be a Reporter E-Paper

Breaking Newsರಾಜ್ಯ

ಪಾದಚಾರಿಗಳಿಗೆ ಬಿಎಂಟಿಸಿ ಬಸ್ ಡಿಕ್ಕಿ, ಇಬ್ಬರು ವಿದ್ಯಾರ್ಥಿಗಳು ಬಲಿ

ಬೆಂಗಳೂರು: ಬಿಎಂಟಿಸಿ ಬಸ್ ಬ್ರೇಕ್ ಫೇಲ್ ಆಗಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯ ಗೋಪಾಲನ್ ಮಾಲ್ ಬಳಿ ನಡೆದಿದೆ.

ದೊಡ್ಡ ಬಸ್ತಿಯಿಂದ ಮಾರ್ಕೆಟ್ ಕಡೆಗೆ ತೆರಳುತ್ತಿದ್ದ ಬಸ್, ಮೈಸೂರು ರಸ್ತೆಯ ಮೂಲಕ ಮೆಜೆಸ್ಟಿಕ್ ನತ್ತ ಹೋಗುತ್ತಿತ್ತು. ಈ ವೇಳೆ ಬ್ರೇಕ್ ಫೇಲ್ ಆಗಿ ಬಸ್ ಪಾದಚಾರಿ ಮಾರ್ಗದ ಮೇಲೆ ನುಗ್ಗಿದೆ. ಪಾದಚಾರಿ ಮಾರ್ಗದಲ್ಲಿ ಹೋಗುತ್ತಿದ್ದ ನಾಲ್ವರಿಗೆ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ಪಾದಚಾರಿಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿ ಕಾಂಪೌಂಡ್ ಗೆ ಗುದ್ದಿದೆ.

ಮೃತರಲ್ಲಿ ಒಬ್ಬ ವಿದ್ಯಾರ್ಥಿಯನ್ನು ಚಂದ್ರಕಾಂತ್ ಮತ್ತು ಮತ್ತೊಬ್ಬ ವಿದ್ಯಾರ್ಥಿಯನ್ನು ಯದು ಕುಮಾರ್ ಎಂದು ಗುರುತಿಸಲಾಗಿದೆ. ಇಬ್ಬರೂ ಮೈಸೂರು ರಸ್ತೆಯ ಕಸ್ತೂರಬಾ ನಗರದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

Tags

Related Articles

Leave a Reply

Your email address will not be published. Required fields are marked *

Language
Close