ಪೇಜಾವರಶ್ರೀಗಳಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

Posted In : ಉಡುಪಿ, ರಾಜ್ಯ

ಉಡುಪಿ: ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಯಶಸ್ವಿಯಾಗಿ ಹರ್ನಿಯಾ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಭಾನುವಾರ ಹತ್ತು ಗಂಟೆ ವೇಳೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಪೇಜಾವರ ಸ್ವಾಮೀಜಿ ತೆರಳಿದ್ದರು. ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಯಿತು.

ಒಂದು ಗಂಟೆಗಳ ಕಾಲ ಹಿರಿಯ ವೈದ್ಯ ಪದ್ಮರಾಜ್ ನೇತೃತ್ವದ ತಂಡ ಸ್ವಾಮೀಜಿಯವರಿಗೆ ಶಸ್ತ್ರಚಿಕಿತ್ಸೆ ನಡೆಸಿತು. ಸೊಂಟದಿಂದ ಕೆಳಭಾಗಕ್ಕೆ ಅನಸ್ತೇಷಿಯಾ ನೀಡಿ ಆಪರೇಷನ್ ಮಾಡಲಾಯಿತು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದೆ. ಸ್ಪೆಷಲ್ ರೂಂ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಸೋಮವಾರ ಸಂಜೆಯ ವೇಳೆಗೆ ವಾರ್ಡ್‌ಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ. ಕಳೆದ ಒಂದು ತಿಂಗಳಿಂದ ಪೇಜಾವರ ಸ್ವಾಮೀಜಿ ಅವರಿಗೆ ಹರ್ನಿಯಾ ನೋವು ಕಾಣಿಸಿಕೊಳ್ಳುತ್ತಿತ್ತು. ವೈದ್ಯರು ಶಸ್ತ್ರಚಿಕಿತ್ಸೆ ಒಳಪಡಿಸಬೇಕು ಎಂದು ಒತ್ತಡ ಹಾಕಿದ ನಂತರ ಸ್ವಾಮೀಜಿಯವರು ಶಸ್ತ್ರಚಿಕಿತ್ಸೆಗೆ ಒಪ್ಪಿಕೊಂಡಿದ್ದರು.

ಮುಂದಿನ ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ಪೇಜಾವರ ಮಠದಲ್ಲಿ ಹತ್ತಾರು ಧಾರ್ಮಿಕ ಕಾರ್ಯಕ್ರಮಗಳು, ಧರ್ಮಸಂಸತ್ತು ಇರುವುದರಿಂದ ಮುಂಚಿತವಾಗಿ ಶಸ್ತ್ರ ಚಿಕಿತ್ಸೆಗೆ ಒಳಪಡಿಸಿ ಕೊಂಡರು. ಚಿಕಿತ್ಸೆ ನಂತರ ಒಂದು ವಾರದಿಂದ ಹತ್ತು ದಿನಗಳ ಕಾಲ ವಿಶ್ರಾಂತಿ ಬೇಕಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಪೇಜಾವರ ಸ್ವಾಮೀಜಿ ಅನುಪಸ್ಥಿತಿಯಲ್ಲಿ ಕಿರಿಯ ಶ್ರೀಪಾದರು ಪೂಜಾ ಕೈಂಕರ್ಯ ನೆರವೇರಿಸುತ್ತಿದ್ದಾರೆ.

One thought on “ಪೇಜಾವರಶ್ರೀಗಳಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

Leave a Reply

Your email address will not be published. Required fields are marked *

5 × four =

Loading

ಸದನದಲ್ಲಿ ಸಿಎಂ ವಿರುದ್ಧವೇ ಹಕ್ಕುಚ್ಯುತಿ ಮಂಡಿಸಿದ ಪ್ರತಿಪಕ್ಷದ ನಿರ್ಧಾರ ಸರಿಯೇ?

Thank you for voting
You have already voted on this poll!
Please select an option!

vishwavani-timely-3

Thursday, 23.11.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಶುಕ್ಲ ಪಕ್ಷ , ಪಂಚಮಿ, ಗುರುವಾರ, ನಿತ್ಯ ನಕ್ಷತ್ರ-ಪೂರ್ವಾ ಷಾಢ, ಯೋಗ-ಗಂಡ, ಕರಣ-ಬವ.

ರಾಹುಕಾಲಗುಳಿಕಕಾಲಯಮಗಂಡಕಾಲ
01.30-03.00 09.00-10.30 06.00-07.30

Read More

 

Thursday, 23.11.2017

ಶ್ರೀಹೇಮಲಂಭಿ, ದಕ್ಷಿಣಾಯನ, ಹೇಮಂತಋತು, ಮಾರ್ಗಶಿರ ಮಾಸ, ಶುಕ್ಲ ಪಕ್ಷ , ಪಂಚಮಿ, ಗುರುವಾರ, ನಿತ್ಯ ನಕ್ಷತ್ರ-ಪೂರ್ವಾ ಷಾಢ, ಯೋಗ-ಗಂಡ, ಕರಣ-ಬವ.

ರಾಹುಕಾಲಗುಳಿಕಕಾಲಯಮಗಂಡಕಾಲ
01.30-03.00 09.00-10.30 06.00-07.30

Read More

Back To Top