ವಿಶ್ವವಾಣಿ

ಪೆಟ್ರೋಲ್, ಡೀಸೆಲ್ ದರದಲ್ಲಿ ಮತ್ತೆ ಏರಿಕೆ

ದೆಹಲಿ: ತೈಲ ಬೆಲೆ ಏರಿಕೆ ಖಂಡಿಸಿ ವಿಪಕ್ಷಗಳು ಇಂದು ಭಾರತ್ ಬಂದ್‍ ನಡೆಸುತ್ತಿದ್ದು, ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಈ ಬೆನ್ನಲ್ಲೇ ಸೋಮವಾರ ಮತ್ತೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ.

ಪ್ರತಿ ಲೀಟರ್ ಪೆಟ್ರೋಲ್ ಬೆಲೆ 23 ಪೈಸೆ ಹಾಗೂ ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್ ಗೆ 22 ಪೈಸೆ ಏರಿಕೆಯಾಗಿದೆ. ಇದರಂತೆ ಪ್ರತಿ ಲೀಟರ್ ಪೆಟ್ರೋಲ್ ದರ 80.73 ರೂ. ಹಾಗೂ ಡೀಸೆಲ್ ಬೆಲೆ 72.83 ರೂ. ಆಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 80.73 ರೂ. ಹಾಗೂ ಡೀಸೆಲ್ ಬೆಲೆ 72.83 ರೂ. ಇದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 83.91 ರೂ. ಇದ್ದರೆ, ಡೀಸೆಲ್ ಬೆಲೆ 76.98 ರೂ. ಇದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 83.36 ರೂ. ಇದ್ರೆ, ಡೀಸೆಲ್ ಬೆಲೆ 75.18 ರೂ. ಆಗಿದೆ.