ವಿಶ್ವವಾಣಿ

ಪೆಟ್ರೋಲ್ ಮೇಲಿನ ಟ್ಯಾಕ್ಸ್ ಇಳಿಕೆಯ ಸುಳಿವು ಕೊಟ್ಟ ಸಿಎಂ

ದೆಹಲಿ: ತೈಲ ಬೆಲೆ ಏರಿಕೆ ಖಂಡಿಸಿ ದೇಶವ್ಯಾಪಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಇತ್ತ ಮುಖ್ಯಮಂತ್ರಿ ಕುಮಾರಸ್ವಾಮಿ ಕರ್ನಾಟಕದ ಜನತೆಗೆ ಸಿಹಿ ಸುದ್ದಿ ನೀಡಿದ್ದಾರೆ.

ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಪೆಟ್ರೋಲ್ ಮೇಲಿನ ಟ್ಯಾಕ್ಸ್ ಕಡಿಮೆ ಮಾಡುವ ಕುರಿತು ರಾಜ್ಯ ಸರಕಾರ ಚಿಂತನೆ ನಡೆಸುತ್ತಿದೆ ಎಂದರು. ಸ್ವಲ್ಪಮಟ್ಟಿಗಾದರೂ ಬೆಲೆ ಕಡಿಮೆ ಮಾಡುವ ಬಗ್ಗೆ ರಾಜ್ಯ ಸರಕಾರ ಚಿಂತಿಸಿದೆ ಎಂದು ಪೆಟ್ರೋಲ್ ಮೇಲಿನ ಟ್ಯಾಕ್ಸ್ ಇಳಿಕೆ ಬಗ್ಗೆ ಸಿಎಂ ಸುಳಿವು ಕೊಟ್ಟರು. ಈ ಕುರಿತು ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.