PM Narendra Modi: ಆಧಂಪುರ ಏರ್ಬೇಸ್ ಭೇಟಿಯಿಂದ ವೇವ್ಸ್ ಶೃಂಗಸಭೆವರೆಗೆ- ಪ್ರಧಾನಿಯ ಎಕ್ಸ್ಕ್ಲೂಸಿವ್ ಫೋಟೋಗಳು
ಮೇ 2025 ಪ್ರಧಾನಿ ಮೋದಿಯವರಿಗೆ ಪ್ರಮುಖ ಮೈಲಿಗಲ್ಲುಗಳ ತಿಂಗಳಾಗಿತ್ತು. ಆಪರೇಷನ್ ಸಿಂದೂರ್, ಸೇನಾ ಮುಖ್ಯಸ್ಥರ ಜೊತೆಗಿನ ಉನ್ನತ ಮಟ್ಟದ ಸಭೆಗಳಿಂದ ಹಿಡಿದು ಜಾಗತಿಕ ಶೃಂಗಸಭೆಗಳವರೆಗೆ ಪ್ರಧಾನಿ ಮೋದಿಗೆ ಈ ಮೇ ತಿಂಗಳು ಅತ್ಯಂತ ನಿರ್ಣಾಯಕವಾಗಿತ್ತು. ಇದಕ್ಕೆ ಸಂಬಂಧಿಸಿದ ಹಲವಾರು ಫೋಟೋಗಳು ಇಲ್ಲಿವೆ.



ಮುಂಬೈನಲ್ಲಿ ನಡೆದ ವೇವ್ಸ್ ಶೃಂಗಸಭೆ 2025 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚಿತ್ರರಂಗ ಮತ್ತು ಇತರ ಕ್ಷೇತ್ರಗಳ ಗಣ್ಯರು ಭಾಗಿಯಾದರು.

ಪ್ರಧಾನಿ ಮೋದಿ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಮತ್ತು ಮೂರು ಪಡೆಗಳ ಮುಖ್ಯಸ್ಥರೊಂದಿಗೆ 7, ಲೋಕ ಕಲ್ಯಾಣ್ ಮಾರ್ಗದಲ್ಲಿ ಪ್ರಮುಖ ಸಭೆ ನಡೆಸಿದರು.

ವೇವ್ಸ್ ಶೃಂಗಸಭೆ 2025 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ಪ್ರದರ್ಶನಕ್ಕೆ ಭೇಟಿ ನೀಡಿದರು.

ನವದೆಹಲಿಯ 7 ಲೋಕ ಕಲ್ಯಾಣ್ ಮಾರ್ಗದಲ್ಲಿ ಪ್ರಧಾನಿ ಮೋದಿ ಅವರು ಉನ್ನತ ಮಟ್ಟದ ಭದ್ರತಾ ಸಭೆಯ ಅಧ್ಯಕ್ಷತೆ ವಹಿಸಿದ್ದಾರೆ.

ಗುಜರಾತ್ನ ಗಾಂಧಿನಗರದಲ್ಲಿ ನಡೆದ ಭವ್ಯ ರೋಡ್ಶೋನಲ್ಲಿ ಪ್ರಧಾನಿ ಮೋದಿ ಭಾಗವಹಿಸಿದರು. ಈ ವೇಳೆ ಜನರು ರಾಷ್ಟ್ರಧ್ವಜವನ್ನು ಬೀಸಿ ಪ್ರಧಾನಿಗೆ ಸ್ವಾಗತ ಕೋರಿದರು.

ದೆಹಲಿಯಲ್ಲಿ ನಡೆದ ನೀತಿ ಆಯೋಗದ 10 ನೇ ಆಡಳಿತ ಮಂಡಳಿ ಸಭೆಯಲ್ಲಿ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಮತ್ತು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು

ಗುಜರಾತ್ನ ದಾಹೋದ್ನಲ್ಲಿರುವ ಭಾರತೀಯ ರೈಲ್ವೆ ಲೋಕೋಮೋಟಿವ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದರು.

1971 ರ ಭಾರತ-ಪಾಕ್ ಯುದ್ಧದ ವೀರ ಮಹಿಳೆಯರು ಗುಜರಾತ್ನ ಭುಜ್ನಲ್ಲಿ ಪ್ರಧಾನಿ ಮೋದಿಗೆ 'ಸಿಂಧೂರ್' ಸಸಿಯನ್ನು ಉಡುಗೊರೆಯಾಗಿ ನೀಡಿದರು.

ಪಂಜಾಬ್ನ ಅದಮ್ಪುರ ವಾಯುನೆಲೆಯಲ್ಲಿ ಆಪರೇಷನ್ ಸಿಂಧೂರ್ ಬ್ರೀಫಿಂಗ್ ಸಂದರ್ಭದಲ್ಲಿ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರೊಂದಿಗೆ ಪ್ರಧಾನಿ ಮೋದಿ.

ಉತ್ತರ ಪ್ರದೇಶದ ಕಾನ್ಪುರದಲ್ಲಿ ಫಲಾನುಭವಿಗಳಿಗೆ ಪ್ರಧಾನಿ ಮೋದಿ ಆಯುಷ್ಮಾನ್ ಮತ್ತು ವಯ ವಂದನಾ ಕಾರ್ಡ್ಗಳನ್ನು ಹಸ್ತಾಂತರಿಸಿದರು.