IND vs ENG: ಇಂಗ್ಲೆಂಡ್ ಟೆಸ್ಟ್ ಸರಣಿಗೆ ಭಾರತದ ಸಂಭಾವ್ಯ ಆಟಗಾರರ ತಂಡ!
ಭಾರತ ಕ್ರಿಕೆಟ್ ತಂಡ ಮುಂದಿನ ತಿಂಗಳು ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಇಲ್ಲಿ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಮೊದಲ ಪಂದ್ಯ ಜೂನ್ 20 ರಂದು ಲೀಡ್ಸ್ನ ಹೆಡಿಂಗ್ಲಿಯಲ್ಲಿ ಪ್ರಾರಂಭವಾಗಲಿದೆ. ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಭಾರತ ತಂಡ 2007 ರಲ್ಲಿ ಕೊನೆಯ ಬಾರಿಗೆ ಇಂಗ್ಲೆಂಡ್ನಲ್ಲಿ ಟೆಸ್ಟ್ ಸರಣಿಯನ್ನು ಗೆದ್ದಿತ್ತು. 2025ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ಗೆ ತಲುಪಲು ಭಾರತ ವಿಫಲವಾಗಿತ್ತು. ಈ ಸರಣಿಯ ಮೂಲಕ 2025-27ರ ಡಬ್ಲ್ಯುಟಿಸಿ ಋತುವನ್ನು ಟೀಮ್ ಇಂಡಿಯಾ ಆರಂಭಿಸಲಿದೆ.



ನಾಯಕತ್ವದ ರೇಸ್ನಲ್ಲಿ ಗಿಲ್, ಬುಮ್ರಾ
ಟೆಸ್ಟ್ ಕ್ರಿಕೆಟ್ಗೆ ರೋಹಿತ್ ಶರ್ಮಾ ನಿವೃತ್ತರಾಗಿದ್ದು, ತಂಡಕ್ಕೆ ಹೊಸ ನಾಯಕನ ಅಗತ್ಯವಿದೆ. ಪ್ರಸ್ತುತ ಶುಭಮನ್ ಗಿಲ್ ಮತ್ತು ಜಸ್ಪ್ರೀತ್ ಬುಮ್ರಾ ನಾಯಕ್ವದ ರೇಸ್ನಲ್ಲಿ ಮುಂಚೂಣಿಯಲ್ಲಿದ್ದಾರೆ. ಇವರ ಪೈಕಿ ಒಬ್ಬರು ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಭಾರತವನ್ನು ಮುನ್ನಡೆಸಬಹುದು.

ರೋಹಿತ್ ಶರ್ಮಾ ನಿವೃತ್ತಿ
ಇಂಗ್ಲೆಂಡ್ ಪ್ರವಾಸಕ್ಕೂ ಒಂದೂವರೆ ತಿಂಗಳು ಮುನ್ನ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಟಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ಅವರ ಪ್ರದರ್ಶನ ಉತ್ತಮವಾಗಿರಲಿಲ್ಲ. ಐದು ಇನ್ನಿಂಗ್ಸ್ಗಳಲ್ಲಿ ಅವರು ಗಳಿಸಿದ್ದು ಕೇವಲ 31 ರನ್ಗಳು.

ಕರುಣ್-ಸುದರ್ಶನ್ಗೆ ಸ್ಥಾನ?
ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್ ಮತ್ತು ವಿರಾಟ್ ಕೊಹ್ಲಿ ಕೂಡ ತಂಡವನ್ನು ಸೇರಿಕೊಳ್ಳಲಿದ್ದಾರೆ. ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿ ತಂಡವನ್ನು ಸೇರಿಕೊಳ್ಳಬಹುದು. ತಮಿಳುನಾಡಿನ ಬಿ ಸಾಯಿ ಸುದರ್ಶನ್ ಕೂಡ ಟೆಸ್ಟ್ ತಂಡದ ಆಯ್ಕೆಯ ರೇಸ್ನಲ್ಲಿದ್ದಾರೆ. ದೇಶಿ ಕ್ರಿಕೆಟ್ನಲ್ಲಿ ಮಿಂಚಿದ್ದ ಕರುಣ್ ನಾಯರ್ಗೆ ಅವಕಾಶ ನೀಡಬಹದು.

ನಿತೀಶ್ ರೆಡ್ಡಿಗೆ ಅವಕಾಶ ಸಿಗಲಿದೆ
ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ನಿತೀಶ್ ಕುಮಾರ್ ರೆಡ್ಡಿ ಉತ್ತಮ ಪ್ರದರ್ಶನ ನೀಡಿದ್ದರು. ಅವರು ತಂಡದಲ್ಲಿದ್ದ ಏಕೈಕ ವೇಗದ ಬೌಲಿಂಗ್ ಆಲ್ರೌಂಡರ್ ಆಗಿದ್ದರು. ಆದ್ದರಿಂದ, ಅವರನ್ನು ಇಂಗ್ಲೆಂಡ್ ಪ್ರವಾಸಕ್ಕೂ ತಂಡದಲ್ಲಿ ಸೇರಿಸಿಕೊಳ್ಳಬಹುದು. ರವೀಂದ್ರ ಜಡೇಜಾ ತಂಡದ ಪ್ರಮುಖ ಸ್ಪಿನ್ ಬೌಲರ್ ಆಗಿರುತ್ತಾರೆ.

ಜಸ್ಪ್ರೀತ್ ಬುಮ್ರಾ ಮೇಲೆ ಎಲ್ಲರ ಕಣ್ಣು
ಆಸ್ಟ್ರೇಲಿಯಾ ವಿರುದ್ಧ ಜಸ್ಪ್ರೀತ್ ಬುಮ್ರಾ ಅದ್ಭುತ ಪ್ರದರ್ಶನ ನೀಡಿದ್ದರು. ಅವರು 32 ವಿಕೆಟ್ಗಳನ್ನು ಕಬಳಿಸಿದ್ದರು. ಟೆಸ್ಟ್ ಸರಣಿಯೊಂದರಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಗಾಯದಿಂದ ಚೇತರಿಸಿಕೊಂಡ ನಂತರ ಅವರು ಮುಂಬೈ ಇಂಡಿಯನ್ಸ್ ಪರ ಐಪಿಎಲ್ನಲ್ಲಿ ಮಿಂಚಿದ್ದಾರೆ.

ಇಂಗ್ಲೆಂಡ್ ಟೆಸ್ಟ್ ಸರಣಿಗೆ ಭಾರತದ ಸಂಭಾವ್ಯ ತಂಡ
ಶುಭಮನ್ ಗಿಲ್ (ನಾಯಕ), ಜಸ್ಪ್ರೀತ್ ಬುಮ್ರಾ (ಉಪ ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಬಿ ಸಾಯಿ ಸುದರ್ಶನ್, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಆಕಾಶ ದೀಪ್ ಹಾಗೂ ಪ್ರಸಿಧ್ ಕೃಷ್ಣ.