Operation Sindoor: ಭಾರತದ ಆರ್ಭಟಕ್ಕೆ ಬೆಚ್ಚಿ ಬಿದ್ದ ಪಾಕ್; ಉಗ್ರರ ನೆಲೆಗಳು ಉಡೀಸ್, ಇಲ್ಲಿವೆ ನೋಡಿ ಫೋಟೋಸ್
ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರನ್ನು ಹತ್ಯೆ ಮಾಡಿದ್ದ ಪ್ರತೀಕಾರವಾಗಿ ಭಾರತ ಪಾಕಿಸ್ತಾನದಲ್ಲಿರುವ 9 ಉಗ್ರ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆಗಳಾದ ಜೈಶ್-ಎ-ಮೊಹಮ್ಮದ್ (ಜೆಇಎಂ), ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಮತ್ತು ಹಿಜ್ಬುಲ್ ಮುಜಾಹಿದ್ದೀನ್ಗೆ ಸಂಬಂಧಿಸಿದ ಒಂಬತ್ತು ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ.



ಭಾರತದಲ್ಲಿ ಉಗ್ರರು ನಡೆಸಿದ ನರಮೇಧಕ್ಕೆ ಭಾರತ ಪಾಕ್ಗೆ ತಕ್ಕ ಪ್ರತ್ಯುತ್ತರ ನೀಡಿದೆ. ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನದಲ್ಲಿರುವ 9 ಉಗ್ರ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ. ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ಸರಣಿ ನಿಖರ ದಾಳಿಯಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದೀಗ ದಾಳಿ ನಡೆದ ಸ್ಥಳದಲ್ಲಿನ ಫೋಟೋ ವೈರಲ್ ಆಗಿವೆ. ಪಾಕಿಸ್ತಾನದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಭಾರತವು ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಮುಜಫರಾಬಾದ್ನಲ್ಲಿರುವ ಭಯೋತ್ಪಾದಕ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಹಾನಿಗೊಳಗಾದ ಕಟ್ಟಡದ ಚಿತ್ರ ಇಲ್ಲಿದೆ.

ಲಾಹೋರ್ ನಿಂದ 30 ಕಿ.ಮೀ ದೂರದಲ್ಲಿರುವ ಮುರಿಡ್ಕೆ ಪಟ್ಟಣದಲ್ಲಿನ ಭಯೋತ್ಪಾದಕ ಅಡಗುತಾಣಗಳನ್ನು ವೈಮಾನಿಕ ದಾಳಿ ಮೂಲಕ ನಾಶ ಪಡಿಸಲಾಗಿದೆ. ಅಲ್ಲಿರುವ ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.

ಪಾಕಿಸ್ತಾನದ ಲಾಹೋರ್ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಮುಂದಿನ 48 ಗಂಟೆಗಳ ಕಾಲ ಎಲ್ಲಾ ವಿಮಾನಗಳ ಸಂಚಾರ ರದ್ದುಪಡಿಸಲಾಗಿದೆ. ಲಾಹೋರ್ ನಿಂದ 30 ಕಿ.ಮೀ ದೂರದಲ್ಲಿರುವ ಮುರಿಡ್ಕೆ ಪಟ್ಟಣದಲ್ಲಿನ ಭಯೋತ್ಪಾದಕ ಅಡಗುತಾಣಗಳನ್ನು ವೈಮಾನಿಕ ದಾಳಿ ಮೂಲಕ ನಾಶ ಪಡಿಸಲಾಗಿದೆ. ಅಲ್ಲಿರುವ ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಇಸ್ಲಾಮಾಬಾದ್ನ ಅಗ್ನಿಶಾಮಕ ಠಾಣೆಯ ಹೊರಗೆ ಅಗ್ನಿಶಾಮಕ ದಳದವರನ್ನು ನಿಯೋಜಿಸಲಾಗಿದೆ. ನಗರದಲ್ಲಿ ಎಚ್ಚರಿಕೆ ನೀಡಲಾಗಿದೆ. ಬಹಾವಲ್ಪುರದಲ್ಲಿ ಭಾರತದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ವಿಕ್ಟೋರಿಯಾ ಆಸ್ಪತ್ರೆಯ ಹೊರಗೆ ಜನರು ಭಾರತ ವಿರೋಧಿ ಘೋಷಣೆಗಳನ್ನು ಕೂಗಿದರು.

ಎಲ್ಒಸಿ ಪ್ರದೇಶಗಳಲ್ಲಿ ಪಾಕಿಸ್ತಾನದ ನಿರಂತರ ಗುಂಡಿನ ದಾಳಿಯಿಂದಾಗಿ, ಜನರು ಬಂಕರ್ಗಳಲ್ಲಿ ಆಶ್ರಯ ಪಡೆದಿದ್ದಾರೆ. ಭಾರತದ ಪ್ರತೀಕಾರದ ಸೇಡಿಗೆ ಪಾಕಿಸ್ತಾನ ಬೆಚ್ಚಿಬಿದ್ದಿದೆ. ದಾಳಿಯ ಶಬ್ದ ಕೇಳಿ ಮುರಿಡ್ಕೆ ನಗರದ ಜನರು ತಮ್ಮ ಮನೆಗಳಿಂದ ಹೊರಬಂದು ಬೀದಿಗಳಿಗೆ ಬಂದಿದ್ದಾರೆ. ದಾಳಿಯಲ್ಲಿ ಗಾಯಗೊಂಡವರು ಬಹವಾಲ್ಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.