Narendra Modi: ಆದಂಪುರ ವಾಯುನೆಲೆಗೆ ಮೋದಿ ಭೇಟಿ; ವೀರ ಯೋಧರಿಗೆ ಸೆಲ್ಯುಟ್ ಎಂದ ಪ್ರಧಾನಿ, ಫೋಟೋಸ್ ನೋಡಿ
ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡ ಕೆಲವು ದಿನಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪಂಜಾಬ್ನ ಅದಮ್ಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದರು. ಸೈನಿಕರ ಕುಶಲೋಪರಿಯನ್ನು ಅವರು ವಿಚಾರಿಸಿದ್ದಾರೆ.



ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡ ಕೆಲ ದಿನಳಗ ಬಳಿಕ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪಂಜಾಬ್ನ ಅದಮ್ಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದರು. ಆಪರೇಷನ್ ಸಿಂದೂರ್ ಬಳಿಕ ಮೋದಿ ಅಲ್ಲಿಗೆ ಭೇಟಿ ನೀಡಿದ್ದಾರೆ. "ಆಪರೇಷನ್ ಸಿಂಧೂರ್" ನಂತರ, ಮೇ 9 ಮತ್ತು 10 ರ ಮಧ್ಯರಾತ್ರಿ ಪಾಕಿಸ್ತಾನ ದಾಳಿ ಮಾಡಲು ಪ್ರಯತ್ನಿಸಿದ ವಾಯುಪಡೆಯ ಕೇಂದ್ರಗಳಲ್ಲಿ ಅದಂಪುರವೂ ಸೇರಿತ್ತು.

ಜೆಎಫ್ -17 ಯುದ್ಧ ವಿಮಾನಗಳಿಂದ ಹಾರಿಸಲಾದ ಹೈಪರ್ಸಾನಿಕ್ ಕ್ಷಿಪಣಿಗಳು ಅದಂಪುರದಲ್ಲಿ ಭಾರತದ ಎಸ್ -400 ವಾಯು ರಕ್ಷಣಾ ವ್ಯವಸ್ಥೆಯನ್ನು ನಾಶಪಡಿಸಿವೆ ಎಂದು ಪಾಕಿಸ್ತಾನ ಹೇಳಿಕೊಂಡಿತ್ತು, ಆದರೆ ಭಾರತೀಯ ಅಧಿಕಾರಿಗಳು ಈ ಆರೋಪವನ್ನು ತಿರಸ್ಕರಿಸಿದ್ದಾರೆ. ಪಾಕಿಸ್ತಾನದ 4 ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ.

ಯೋಧರನ್ನು ಭೇಟಿ ಮಾಡಿದ ಕ್ಷಣವನ್ನು ಮೋದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಕುರಿತು ಬರೆದಿರುವ ಅವರು ನಮ್ಮ ವೀರರನ್ನು ಇಂದು ಭೇಟಿಯಾದೆ ಎಂದು ಹೇಳಿದ್ದಾರೆ.

ಇಂದು ಬೆಳಿಗ್ಗೆ ನಾನು ಎಎಫ್ಎಸ್ ಆದಂಪುರಕ್ಕೆ ಹೋಗಿ ನಮ್ಮ ವೀರ ವಾಯು ಯೋಧರು ಮತ್ತು ಸೈನಿಕರನ್ನು ಭೇಟಿಯಾದೆ. ಧೈರ್ಯ, ದೃಢನಿಶ್ಚಯ ಮತ್ತು ನಿರ್ಭಯತೆಯನ್ನು ಸಾರುವವರೊಂದಿಗೆ ಇರುವುದು ಬಹಳ ವಿಶೇಷ ಅನುಭವವಾಗಿತ್ತು. ನಮ್ಮ ರಾಷ್ಟ್ರಕ್ಕಾಗಿ ನಮ್ಮ ಸಶಸ್ತ್ರ ಪಡೆಗಳು ಮಾಡುವ ಎಲ್ಲದಕ್ಕೂ ಭಾರತವು ಅವರಿಗೆ ಯಾವತ್ತೂ ಕೃತಜ್ಞತೆಯನ್ನು ಸಮರ್ಪಿಸುತ್ತದೆ.

ಸೋಮವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂದೂರ್ನ ಉದ್ದೇಶಗಳನ್ನು ಸಾಧಿಸುವಲ್ಲಿ ಅಚಲ ಧೈರ್ಯವನ್ನು ಪ್ರದರ್ಶಿಸಿದವು ಎಂದು ಹೇಳಿದ್ದರು.