Neeti Ayoga Meeting: ಕೇಂದ್ರ, ರಾಜ್ಯ ಸರ್ಕಾರಗಳು ಟೀ ಇಂಡಿಯಾದ ರೀತಿಯಲ್ಲಿ ಕೆಲಸ ಮಾಡಬೇಕು; ನೀತಿ ಆಯೋಗದ ಸಭೆಯಲ್ಲಿ ಒಗ್ಗಟ್ಟಿನ ಮಂತ್ರ ಪಠಿಸಿದ ಮೋದಿ
ಇಂದು ದೆಹಲಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಭಿವೃದ್ಧಿಯ ವೇಗವನ್ನು ಹೆಚ್ಚಿಸುವ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ. ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ ಮೋದಿ, ಒಗ್ಗಟ್ಟಿನಲ್ಲಿ ಕೆಲಸ ಮಾಡಿದರೆ ಯಾವುದೂ ಅಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.



ಶನಿವಾರ ದೆಹಲಿಯಲ್ಲಿ ನೀತಿ ಆಯೋಗದ 10 ಆಡಳಿತ ಮಂಡಳಿಯ ಸಭೆ ನಡೆದಿದೆ. ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಹಿಸಿಕೊಂಡಿದ್ದಾರೆ. ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್ಗಳು ಮತ್ತು ಹಲವಾರು ಕೇಂದ್ರ ಸಚಿವರು ಇಂದಿನ ಸಭೆಯಲ್ಲಿ ಹಾಜರಿದ್ದರು.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಟೀಮ್ ಇಂಡಿಯಾದಂತೆ ಒಟ್ಟಾಗಿ ಕೆಲಸ ಮಾಡಿದರೆ, ಯಾವುದೇ ಗುರಿ ಸಾಧಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸಭೆಯಲ್ಲಿ ಮಾತನಾಡಿದ್ದಾರೆ. ಆಪರೇಷನ್ ಸಿಂದೂರ್ ಪ್ರಾರಂಭವಾದ ನಂತರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಎಲ್ಜಿಗಳೊಂದಿಗೆ ಪ್ರಧಾನಿಯವರ ಮೊದಲ ಪ್ರಮುಖ ಸಂವಾದ ಇದಾಗಿದೆ. "ವೀಕ್ಷಿತ್ ಭಾರತ್ ಪ್ರತಿಯೊಬ್ಬ ಭಾರತೀಯನ ಗುರಿ. ಪ್ರತಿಯೊಂದು ರಾಜ್ಯವೂ ವಿಕ್ಷಿತ್ ಆಗಿದ್ದರೆ, ಭಾರತವು ವಿಕ್ಷಿತ್ ಆಗಿರುತ್ತದೆ. ಇದು ಅದರ 140 ಕೋಟಿ ನಾಗರಿಕರ ಆಕಾಂಕ್ಷೆಯಾಗಿದೆ" ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಭಾರತ್ ಮಂಟಪದಲ್ಲಿ ನಡೆದ 10ನೇ ನೀತಿ ಆಯೋಗ ಆಡಳಿತ ಮಂಡಳಿ ಸಭೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, ಕೇಂದ್ರದ ಸಹಯೋಗದೊಂದಿಗೆ ರಚಿಸಲಾದ ರಾಜ್ಯಗಳ ಉಪ-ಗುಂಪುಗಳು ವಿಕ್ಷಿತ್ ಭಾರತ್ - 2047 (ಅಭಿವೃದ್ಧಿ ಹೊಂದಿದ ಭಾರತ) ದೃಷ್ಟಿಕೋನವನ್ನು ವೇಗವಾಗಿ ಸಾಧಿಸುವತ್ತ ಕೆಲಸ ಮಾಡಬೇಕು ಎಂದು ಹೇಳಿದರು.

ರಾಜ್ಯಗಳು ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಮತ್ತು ಎಲ್ಲಾ ಸೌಲಭ್ಯಗಳು ಮತ್ತು ಮೂಲಸೌಕರ್ಯಗಳನ್ನು ಒದಗಿಸುವ ಮೂಲಕ ಪ್ರತಿ ರಾಜ್ಯ ಕನಿಷ್ಠ ಒಂದು ಪ್ರವಾಸಿ ತಾಣವನ್ನು ಅಭಿವೃದ್ಧಿಪಡಿಸಬೇಕು ಎಂದು ಪ್ರಧಾನಿ ಎಲ್ಲಾ ರಾಜ್ಯದ ಸಿಎಂಗಳಿಗೆ ಸಲಹೆಯನ್ನು ನೀಡಿದ್ದಾರೆ.

ನೀತಿ ಆಯೋಗ ಸಭೆಯ ಹೊರತಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತದ ಹಲವಾರು ರಾಜಕೀಯ ನಾಯಕರನ್ನು ಭೇಟಿಯಾದರು. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ಎನ್ ಚಂದ್ರಬಾಬು ನಾಯ್ಡು ಮತ್ತು ಎಂಕೆ ಸ್ಟಾಲಿನ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸೇರಿದಂತೆ ಹಲವರನ್ನು ಮೋದಿ ಭೇಟಿ ಮಾಡಿ ಮಾತನಾಡಿದ್ದಾರೆ. "ಕೇಂದ್ರ ಮತ್ತು ಎಲ್ಲಾ ರಾಜ್ಯಗಳು ಒಟ್ಟಾಗಿ ಬಂದು ಟೀಮ್ ಇಂಡಿಯಾದಂತೆ ಒಟ್ಟಾಗಿ ಕೆಲಸ ಮಾಡಿದರೆ, ಯಾವುದೇ ಗುರಿ ಅಸಾಧ್ಯವಲ್ಲ ಎಂದು ಮೋದಿ ಸಭೆಯಲ್ಲಿ ಹೇಳಿದ್ದಾರೆ.