ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

West Bengal Assembly Polls: ಮಾತುವಾ ದೇಗುಲಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ; ರಾಜಕೀಯ ಬದಲಾವಣೆ ಇಲ್ಲಿಂದಲೇ ಆರಂಭವಾಗುತ್ತ?

Narendra Modi: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿದಿದ್ದು, ದಾಖಲೆಯ ಶೇಕಡಾ 92ರಷ್ಟು ಹಕ್ಕು ಚಲಾವಣೆಯಾಗಿದೆ. ಎರಡನೇ ಮತ್ತು ಅಂತಿಮ ಹಂತ ಏಪ್ರಿಲ್‌ 29ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕೊನೆಯ ಹಂತದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಭಾನುವಾರ (ಏಪ್ರಿಲ್‌ 26) ವಿವಿಧ ಕಡೆ ಆಯೋಜಿಸಿದ್ದ ಬಿಜೆಪಿ ರ‍್ಯಾಲಿಯಲ್ಲಿ ಭಾಗವಹಿಸಿ ಆಡಳಿತರೂಢ ಟಿಎಂಸಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಈ ವೇಳೆ ಮೋದಿ ಉತ್ತರ 24 ಪರಗಣ ಜಿಲ್ಲೆಯ ಠಾಕೂರ್ ನಗರದಲ್ಲಿರುವ ಠಾಕೂರ್ಬರಿ ಮಾತುವಾ ಮಹಾಸಂಘದ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಮಾತುವಾ ಪಶ್ಚಿಮ ಬಂಗಾಳದಲ್ಲಿ ನಿರ್ಣಾಯಕ ಸಮುದಾಯವಾಗಿದ್ದು, ಕನಿಷ್ಠ 34 ವಿಧಾನಸಭಾ ಕ್ಷೇತ್ರಗಳ ಮೇಲೆ ನೇರವಾಗಿ ಪ್ರಭಾವ ಬೀರುತ್ತದೆ. 2021ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಈ ಸಮುದಾಯದಿಂದ ಉತ್ತಮ ಬೆಂಬಲ ಲಭಿಸಿತ್ತು. ಹೀಗಾಗಿ ಪ್ರಧಾನಿ ಮೋದಿ ಭೇಟಿ ರಾಜಕೀಯವಾಗಿ ಮಹತ್ವದ ತಿರುವು ಪಡೆದುಕೊಳ್ಳಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಮಾತುವಾ ದೇಗುಲಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಠಾಕೂರ್ ನಗರದಲ್ಲಿರುವ ಮಾತುವಾ ಮಹಾಸಂಘದ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ -

Ramesh Ballamoole
Ramesh Ballamoole Apr 26, 2026 9:25 PM