PM Modi: ಪ್ರಧಾನಿ ಮೋದಿಗೆ ಭಾರತೀಯ ಸಮುದಾಯದಿಂದ ಲಂಡನ್ನಲ್ಲಿ ಭವ್ಯ ಸ್ವಾಗತ
ಬಹುನಿರೀಕ್ಷಿತ ಭಾರತ ಮತ್ತು ಇಂಗ್ಲೆಂಡ್ ನಡುವಿನ ಸಮಗ್ರ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಸಲುವಾಗಿ ಎರಡು ದಿನಗಳ ಪ್ರವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ತೆರಳಿದ್ದಾರೆ. ಬುಧವಾರ ಸಂಜೆ ಲಂಡನ್ಗೆ ಆಗಮಿಸಿದ ವೇಳೆ ಅವರಿಗೆ ಭವ್ಯ ಸ್ವಾಗತ ದೊರೆಯಿತು. ಭಾರತೀಯ ಸಮುದಾಯದ ನೂರಾರು ಮಂದಿ ಮೋದಿ, ಮೋದಿ, ಭಾರತ್ ಮಾತಾ ಕಿ ಜೈ, ವಂದೇ ಮಾತರಂ ಘೋಷಣೆಗಳೊಂದಿಗೆ ಅವರನ್ನು ಬರಮಾಡಿಕೊಂಡರು.



ಭಾರತ- ಇಂಗ್ಲೆಂಡ್ ನಡುವಿನ ಬಹುನಿರೀಕ್ಷಿತ ಮುಕ್ತ ವ್ಯಾಪಾರ ಒಪ್ಪಂದವನ್ನು (ಎಫ್ಟಿಎ) ಅಂತಿಮಗೊಳಿಸಲು ಎರಡು ದಿನಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಬುಧವಾರ ಸಂಜೆ ಲಂಡನ್ಗೆ ಆಗಮಿಸಿದರು. ಈ ವೇಳೆ ಅವರನ್ನು ಭಾರತೀಯ ಸಮುದಾಯದ ಸದಸ್ಯರು ಅಭೂತಪೂರ್ವವಾಗಿ ಸ್ವಾಗತಿಸಿದರು.

ಲಂಡನ್ ನಗರದ ಹೃದಯಭಾಗದಲ್ಲಿರುವ ಹೊಟೇಲ್ ಅನ್ನು ಪ್ರಧಾನಿ ಮೋದಿ ತಲುಪುತ್ತಿದ್ದಂತೆ ನೂರಾರು ಭಾರತೀಯರು ಮೋದಿ, ಮೋದಿ, ಭಾರತ್ ಮಾತಾ ಕಿ ಜೈ, ವಂದೇ ಮಾತರಂ ಘೋಷಣೆಗಳೊಂದಿಗೆ ಸ್ವಾಗತಿಸಿದರು. ಈ ವೇಳೆ ಸಾಂಪ್ರದಾಯಿಕ ಭಾರತೀಯ ಉಡುಪನ್ನು ಧರಿಸಿದ್ದ ಕಲಾವಿದರು ಡೋಲ್ ನುಡಿಸಿದರು. ಕೆಲವರು ಪ್ರಧಾನಿಯನ್ನು ಸ್ವಾಗತಿಸುವ ಪೋಸ್ಟರ್ಗಳನ್ನು ಬೀಸಿದರು.

ಲಂಡನ್ನಲ್ಲಿ ತಮಗೆ ದೊರೆತ ಹೃದಯಸ್ಪರ್ಶಿ ಸ್ವಾಗತದ ಕುರಿತು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮವಾದ ಎಕ್ಸ್ನಲ್ಲಿ ಬರೆದುಕೊಂಡಿದ್ದು, ಇಂಗ್ಲೆಂಡ್ನಲ್ಲಿರುವ ಭಾರತೀಯ ಸಮುದಾಯದ ಪ್ರೀತಿ ಮತ್ತು ಉತ್ಸಾಹ ನಿಜವಾಗಿಯೂ ಹೃದಯಸ್ಪರ್ಶಿಯಾಗಿದೆ ಎಂದು ಹೇಳಿದ್ದಾರೆ.

ಹೊಟೇಲ್ ಹೊರಗೆ ಪ್ರಧಾನ ಮಂತ್ರಿಯನ್ನು ಭೇಟಿಯಾದ ಅನೇಕರು ಸಂತೋಷವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಒಬ್ಬರು, ನಾವು ತುಂಬಾ ಹೆಮ್ಮೆಪಡುತ್ತೇವೆ... ನನಗೆ ಇನ್ನೂ ಕಣ್ಣೀರು ಬರುತ್ತಿದೆ. ನಮ್ಮ ಕೈಕುಲುಕುವಾಗ ಆಗಿರುವ ಸಂತೋಷ ಮರೆಯಲಾಗದು ಎಂದು ಹೇಳಿದ್ದಾರೆ.

ಇನ್ನೊಬ್ಬರು ಭಾರತದ ಬೆಳವಣಿಗಾಗಿ ಪ್ರಧಾನಿ ಮೋದಿ ಅವರನ್ನು ಶ್ಲಾಘಿಸಿ ಅವರು ಸಂತನಂತೆ ಕಾಣುತ್ತಿದ್ದರು. ಅದಕ್ಕಾಗಿಯೇ ಜನರು ಪ್ರಧಾನಿ ಮೋದಿಯವರನ್ನು ತುಂಬಾ ಇಷ್ಟಪಡುತ್ತಾರೆ ಎಂದು ಹೇಳಿದ್ದಾರೆ.

ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಲಂಡನ್ಗೆ ತೆರಳಿದ್ದು, ಇದು ಅವರ ನಾಲ್ಕನೇ ಭೇಟಿಯಾಗಿದೆ. ಈ ಇಬ್ಬರು ನಾಯಕರು ಈ ಹಿಂದೆ ಜೂನ್ನಲ್ಲಿ ಬ್ರೆಜಿಲ್ನಲ್ಲಿ ನಡೆದ ಜಿ20 ಶೃಂಗಸಭೆ ಮತ್ತು ಜಿ7ನಲ್ಲಿ ಭೇಟಿಯಾಗಿದ್ದರು.

ಭಾರತದ ವಿದೇಶಾಂಗ ಸಚಿವಾಲಯದ (MEA) ಪ್ರಕಾರ, ಪ್ರಧಾನಿ ಮೋದಿ ಅವರ ಈ ಭೇಟಿಯು ವ್ಯಾಪಾರ, ಆರ್ಥಿಕತೆ, ತಂತ್ರಜ್ಞಾನ, ನಾವೀನ್ಯತೆ, ರಕ್ಷಣೆ, ಭದ್ರತೆ, ಹವಾಮಾನ ಬದಲಾವಣೆ, ಶಿಕ್ಷಣ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಲ್ಲಿ ಸಹಯೋಗವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.

ಭಾರತ-ಇಂಗ್ಲೆಂಡ್ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಪ್ರಧಾನಿ ಮೋದಿ ಸಹಿ ಹಾಕಲಿದ್ದು, ಬಳಿಕ ಅವರು ಕಿಂಗ್ ಚಾರ್ಲ್ಸ್ III ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಇದು ಎರಡೂ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಸಂಬಂಧವನ್ನು ಮತ್ತಷ್ಟು ಬಲ ಪಡಿಸುವ ಸಾಧ್ಯತೆ ಇದೆ.