RCB vs CSK: ಐಪಿಎಲ್ ಟೂರ್ನಿಯಲ್ಲಿ 8500 ರನ್ಗಳ ಸನಿಹದಲ್ಲಿ ವಿರಾಟ್ ಕೊಹ್ಲಿ!
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ವಿಶೇಷ ದಾಖಲೆ ಬರೆಯುವ ಸನಿಹದಲ್ಲಿದ್ದಾರೆ. ತಮ್ಮ ಐಪಿಎಲ್ ವೃತ್ತಿ ಜೀವನದಲ್ಲಿ 8500 ರನ್ಗಳನ್ನು ಪೂರರ್ಣಗೊಳಿಸಲು ಕಿಂಗ್ ಕೊಹ್ಲಿಗೆ ಕೇವಲ 53 ರನ್ಗಳ ಅಗತ್ಯವಿದೆ.



ಬೆಂಗಳೂರು vs ಚೆನ್ನೈ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಶನಿವಾರ ಬೆಂಗಳೂರಿನ ಎಂಎ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 52ನೇ ಪಂದ್ಯದಲ್ಲಿ ಕಾದಾಟ ನಡೆಸಲಿವೆ.

443 ರನ್ ಗಳಿಸಿರುವ ವಿರಾಟ್ ಕೊಹ್ಲಿ
ಪ್ರಸ್ತುತ ನಡೆಯುತ್ತಿರುವ 2025ರ ಐಪಿಎಲ್ ಟೂರ್ನಿಯಲ್ಲಿ ಅತ್ಯುತ್ತಮ ಫಾರ್ಮ್ನಲ್ಲಿರುವ ವಿರಾಟ್ ಕೊಹ್ಲಿ 10 ಪಂದ್ಯಗಳಿಂದ 138.87ರ ಸ್ಟ್ರೈಕ್ ರೇಟ್ನಲ್ಲಿ 443 ರನ್ಗಳನ್ನು ದಾಖಲಿಸಿದ್ದಾರೆ. ಇದರಲ್ಲಿ ಅವರು ಆರು ಅರ್ಧಶತಕಗಳನ್ನು ಬಾರಿಸಿದ್ದಾರೆ.

85000 ರನ್ ಸನಿಹದಲ್ಲಿ ಕೊಹ್ಲಿ
ಐಪಿಎಲ್ ಟೂರ್ನಿಯ ಇತಿಹಾಸದಲ್ಲಿ 8500 ರನ್ಗಳನ್ನು ಪೂರ್ಣಗೊಳಿಸಲು ವಿರಾಟ್ ಕೊಹ್ಲಿಗೆ ಕೇವಲ 53 ರನ್ಗಳ ಅಗತ್ಯವಿದೆ. ಸದ್ಯ ಕೊಹ್ಲಿ 262 ಪಂದ್ಯಗಳಿಂದ 8447 ರನ್ಗಳನ್ನು ಗಳಿಸಿದ್ದಾರೆ. ಇನ್ನು 53 ರನ್ ಗಳಿಸಿದರೆ ಐಪಿಎಲ್ನಲ್ಲಿ 8500 ರನ್ಗ ಗಳಿಸಿದ ಮೊದಲ ಬ್ಯಾಟ್ಸ್ಮನ್ ಎನಿಸಿಕೊಳ್ಳಲಿದ್ದಾರೆ.

8 ಶತಗಳನ್ನು ಸಿಡಿಸಿರುವ ಕೊಹ್ಲಿ
ಆರ್ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ತಮ್ಮ ಐಪಿಎಲ್ ವೃತ್ತಿ ಜೀವನದಲ್ಲಿ 8 ಶತಕಗಳು ಹಾಗೂ 61 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದರಲ್ಲಿ ಇವರು 744 ಬೌಂಡರಿಗಳು ಹಾಗೂ 285 ಸಿಕ್ಸರ್ಗಳನ್ನು ಬಾರಿಸಿದ್ದಾರೆ.

8000 ರನ್ ಗಳಿಸಿದ ಮೊದಲ ಬ್ಯಾಟರ್
ಐಪಿಎಲ್ ಟೂರ್ನಿಯ ಇತಿಹಾಸದಲ್ಲಿ 8000 ರನ್ಗಳನ್ನು ಪೂರ್ಣಗೊಳಿಸಿದ ಮೊದಲ ಬ್ಯಾಟ್ಸ್ಮನ್ ಎಂಬ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಅಲ್ಲದೆ ವಿಶ್ವದ ಶ್ರೀಮಂತ ಫ್ರಾಂಚೈಸಿ ಲೀಗ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮನ್ ಕೂಡ ಕೊಹ್ಲಿ.

ಎರಡನೇ ಸ್ಥಾನದಲ್ಲಿ ರೋಹಿತ್ ಶರ್ಮಾ
6868 ಐಪಿಎಲ್ ರನ್ಗಳನ್ನು ಗಳಿಸಿದ ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಶಿಖರ್ ಧವನ್ (6769) ಅವರು ಮೂರನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಸನ್ರೈಸರ್ಸ್ ಹೈದರಾಬಾದ್ ತಂಡದ ಮಾಜಿ ನಾಯಕ ಡೇವಿಡ್ ಮಿಲ್ಲರ್ (6565) ನಾಲ್ಕನೇ ಸ್ಥಾನದಲ್ಲಿದ್ದಾರೆ.