ಜೈಸ್ವಾಲ್-ರಾಹುಲ್ ಓಪನರ್ಸ್? ಇಂಗ್ಲೆಂಡ್ ಟೆಸ್ಟ್ ಸರಣಿಗೆ ಭಾರತದ ಬಲಿಷ್ಠ ಪ್ಲೇಯಿಂಗ್ XI ವಿವರ!
India's Storngest Playing XI: ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿ ಜೂನ್ 20 ರಂದು ಆರಂಭವಾಗಲಿದೆ. ಈ ಸರಣಿಯ ನಿಮಿತ್ತ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 18 ಸದಸ್ಯರ ಭಾರತ ತಂಡವನ್ನು ಮೇ 24 ರಂದು ಪ್ರಕಟಿಸಿದೆ. ಅಂದ ಹಾಗೆ ಇಂಗ್ಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡದ ಬಲಿಷ್ಠ ಪ್ಲೇಯಿಂಗ್ XI ಅನ್ನು ಇಲ್ಲಿ ವಿವರಿಸಲಾಗಿದೆ.



ಭಾರತ VS ಇಂಗ್ಲೆಂಡ್ ಟೆಸ್ಟ್ ಸರಣಿ
ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಐದು ಪಂದ್ಯಗಳ ಟೆಸ್ಟ್ ಸರಣಿ ಜೂನ್ 20 ರಂದು ಆರಂಭವಾಗಲಿದೆ. ಆ ಮೂಲಕ 2025-27ರ ಸಾಲಿನ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ 18ರ ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ. 25ರ ಪ್ರಾಯದ ಶುಭಮನ್ ಗಿಲ್ ಅವರಿಗೆ ನಾಯಕತ್ವವನ್ನು ನೀಡಲಾಗಿದೆ.

ಭಾರತ ತಂಡದ ಬಲಿಷ್ಠ ಪ್ಲೇಯಿಂಗ್ XI
ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿರುವ ಕಾರಣ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡಕ್ಕೆ ಕಠಿಣ ಸವಾಲು ಎದುರಾಗಲಿದೆ. ಈ ಟೆಸ್ಟ್ ಸರಣಿಯ ಭಾರತ ತಂಡದ ಬಲಿಷ್ಠ ಪ್ಲೇಯಿಂಗ್ XI ಯಾವ ರೀತಿ ಇರಲಿದೆ ಎಂಬ ಬಗ್ಗೆ ತೀವ್ರ ಕುತೂಹಲ ಕೆರಳಿಸಿದೆ.

ಕೆಎಲ್ ರಾಹುಲ್-ಯಶಸ್ವಿ ಜೈಸ್ವಾಲ್ ಓಪನರ್
ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಅವರು ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಭಾರತ ತಂಡದ ಪರ ಇನಿಂಗ್ಸ್ ಆರಂಭಿಸುವ ಸಾಧ್ಯತೆ. ಜೈಸ್ವಾಲ್ ಕಳೆದ ಒಂದು ವರ್ಷದಿಂದ ಟೆಸ್ಟ್ ಓಪನರ್ ಆಗಿ ಆಡುತ್ತಿದ್ದಾರೆ. ಆದರೆ, ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಿಂದ ಆರಂಭಿಕ ಸ್ಥಾನಕ್ಕೆ ಬರಬಹುದು.

ಸಾಯಿ ಸುದರ್ಶನ್ಗೆ ಚೊಚ್ಚಲ ಅವಕಾಶ
ಸಾಯಿ ಸುದರ್ಶನ್ ಅವರು ಭಾರತ ಟೆಸ್ಟ್ ತಂಡದಲ್ಲಿ ಚೊಚ್ಚಲ ಅವಕಾಶವನ್ನು ಪಡೆದಿದ್ದಾರೆ. ಎಂಟು ವರ್ಷಗಳ ಬಳಿಕ ಕರುಣ್ ನಾಯರ್ ಭಾರತ ತಂಡಕ್ಕೆ ಮರಳಿದ್ದಾರೆ. ಈ ಇಬ್ಬರ ನಡುವೆ ಒಬ್ಬರು ಮೂರನೇ ಕ್ರಮಾಂಕದಲ್ಲಿ ಆಡಬಹುದು. ಅತ್ಯುತ್ತಮ ಫಾರ್ಮ್ನಲ್ಲಿರುವ ಕಾರಣ ಸುದರ್ಶನ್ ಮೂರನೇ ಕ್ರಮಾಂಕದಲ್ಲಿ ಆಡಬಹುದು. ಶುಭಮನ್ ಗಿಲ್ ನಾಲ್ಕನೇ ಕ್ರಮಾಂಕದಲ್ಲಿ ಆಡಬಹುದು.

ವಿಕೆಟ್ ಕೀಪರ್ ರಿಷಭ್ ಪಂತ್
ಮೊದಲ ಆಯ್ಕೆಯ ವಿಕೆಟ್ ಆಗಿ ರಿಷಭ್ ಪಂತ್ ಆಡಲಿದ್ದಾರೆ. ಅಲ್ಲದೆ ಅವರು ಭಾರತ ಟೆಸ್ಟ್ ತಂಡಕ್ಕೆ ಉಪ ನಾಯಕನಾಗಿದ್ದಾರೆ. ಈ ಕಾರಣದಿಂದ ಅವರು ಮುಂದುವರಿಲಿದ್ದಾರೆ. ಇವರು ಐದನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ರಿಷಭ್ ಪಂತ್ ಇಂಗ್ಲೆಂಡ್ನಲ್ಲಿ ಆಡಿದ ಅತ್ಯುತ್ತಮ ಅನುಭವವನ್ನು ಹೊಂದಿದ್ದಾರೆ.

ಆಲ್ರೌಂಡರ್ಗಳು
ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಮೂವರು ಆಲ್ರೌಂಡರ್ಗಳು ಆಡಲಿದ್ದಾರೆ. ರವೀಂದ್ರ ಜಡೇಜಾ ಆರನೇ ಕ್ರಮಾಂಕದಲ್ಲಿ ಆಡಿದರೆ, ನಿತೀಶ್ ಕುಮಾರ್ ರೆಡ್ಡಿ ಏಳನೇ ಕ್ರಮಾಂಕದಲ್ಲಿ ಆಡಬಹುದು. ಇನ್ನು ಸೀಮ್ ಬೌಲಿಂಗ್ ಆಲ್ರೌಂಡರ್ ಶಾರ್ದುಲ್ ಠಾಕೂರ್ ಅವರು ಎಂಟನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಬಹುದು.

ವೇಗದ ಬೌಲರ್ಗಳು
ವಿಶ್ವದ ನಂ.1 ಟೆಸ್ಟ್ ಬೌಲರ್ ಜಸ್ಪ್ರೀತ್ ಬುಮ್ರಾ ವೇಗದ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ. ಮೊಹಮ್ಮದ್ ಶಮಿ ಅನುಪಸ್ಥಿತಿಯಲ್ಲಿ ಬುಮ್ರಾ ಜೊತೆ ಮೊಹಮ್ಮದ್ ಸಿರಾಜ್ ಹೊಸ ಚೆಂಡನ್ನು ಹಂಚಿಕೊಳ್ಳಲಿದ್ದಾರೆ. ಇನ್ನುಳಿದ ಒಂದು ವೇಗದ ಬೌಲಿಂಗ್ ಸ್ಥಾನಕ್ಕೆ ಆಕಾಶ ದೀಪ್, ಪ್ರಸಿಧ್ ಕೃಷ್ಣ ಹಾಗೂ ಅರ್ಷದೀಪ್ ಸಿಂಗ್ ನಡುವೆ ಪೈಪೋಟಿ ನಡೆಯುತ್ತಿದೆ. ಆದರೆ, ಆಕಾಶ್ ದೀಪ್ ಸ್ಥಾನವನ್ನು ಪಡೆಯಬಹುದು.

ಭಾರತ ತಂಡದ ಬಲಿಷ್ಠ ಆಡುವ ಬಳಗ
ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪ ನಾಯಕ), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ಶಾರ್ದುಲ್ ಠಾಕೂರ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್