About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಬೆಳಗಾವಿ ಪಿಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ ಯಾವುದೇ ಬಣಗಳು ಗೆದ್ದಿಲ್ಲ..!

ಸರಕಾರ ಸುಮಧುರವಾಗಿ ನಡೆಯುತ್ತಿದೆ: ಸಿಎಂ ಕುಮಾರಸ್ವಾಮಿ

ಉಡುಪಿ: ಬೆಳಗಾವಿಯಲ್ಲಿ ನಡೆದ ಪಿಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ ಯಾವುದೇ ಬಣಗಳು ಗೆಲುವು ಸಾಧಿಸಿಲ್ಲ. ಕಾಂಗ್ರೆಸ್ ಗೆಲುವು ಸಾಧಿಸಿದೆ ಅಷ್ಟೇ ಎಂದು ಸಿಎಂ ಕುಮಾರಸ್ವಾಮಿ ಹೇಳಿದರು.

ಮಣಿಪಾಲದ ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ನಡೆದ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಮಾಜಿ ಸಿಎಂ ಸಿದ್ದರಾಮಯ್ಯನವರು ವಿದೇಶ ಪ್ರವಾಸ ಮಾಡಿದರೆ ಏನೂ ತಪ್ಪು?. ಅವರು ಒಬ್ಬರೆ ಪ್ರವಾಸ ಮಾಡಿಲ್ಲ, ಅವರ ಜತೆ ಇತರ ನಾಯಕರೂ ಹೋಗಿದ್ದಾರೆ. ಸರಕಾರ ಸುಮಧುರವಾಗಿ ನಡೆಯುತ್ತಿದೆ. ನಾನು ಯಾವುದೇ ಒತ್ತಡದಲ್ಲಿ ಇಲ್ಲ. ಮಾಧ್ಯಮಗಳು ತಮಗೆ ಬೇಕಾದ ಹಾಗೆ ವರದಿ ಮಾಡುತ್ತಿವೆ. ಇದರಿಂದ ಸರಕಾರಕ್ಕೆ ಯಾವುದೇ ತೊಂದರೆ ಇಲ್ಲ. ನಿಮಗೆ ಇಷ್ಟ ಬಂದಂತೆ ವರದಿ ಮಾಡಬಹುದು ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ಬಿಪಿಎಲ್ ತೋರಿಸಿದರೂ ಆರೋಗ್ಯ ವಿಮೆ: ರಾಜ್ಯ ಸರಕಾರವು ಎಲ್ಲ ಆರೋಗ್ಯ ವಿಮಾ ಯೋಜನೆಗಳನ್ನು ವಿಲೀನಗೊಳಿಸಿ ಆರೋಗ್ಯ ಕಾರ್ಡ್ ಯೋಜನೆ ಜಾರಿಗೆ ತಂದಿದೆ. ಆದರೂ ಈ ಕಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುವಲ್ಲಿ ಕೆಲವು ಗೊಂದಲಗಳುಂಟಾಗಿರುವುದು ಸರಕಾರದ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಆರೋಗ್ಯ ಕಾರ್ಡ್ ಇಲ್ಲದಿದ್ದರೆ, ಬಿಪಿಎಲ್ ಕಾರ್ಡ್ ತೋರಿಸಿದರೂ ಚಿಕಿತ್ಸೆ ಕೊಡಲು ಖಾಸಗಿ ಆಸ್ಪತ್ರೆಗಳಿಗೆ ಸರಕಾರ ಸೂಚನೆ ನೀಡಿದೆ. ಇದಕ್ಕೆ ಸೂಕ್ತ ಪ್ರಚಾರ ನೀಡಬೇಕು ಎಂದರು.

Tags

Related Articles

Leave a Reply

Your email address will not be published. Required fields are marked *

Language
Close