About Us Advertise with us Be a Reporter E-Paper

Breaking Newsದೇಶಪ್ರಚಲಿತ

ಕರ್ನಾಟಕ ಸಿಎಂ ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್‌ ಕ್ಲರ್ಕ್​ ರೀತಿ ನಡೆಸಿಕೊಳ್ಳುತ್ತಿದೆ: ಪ್ರಧಾನಿ ನರೇಂದ್ರ ಮೋದಿ ಲೇವಡಿ

ದೆಹಲಿ: ಮೈತ್ರಿ ಸರ್ಕಾರದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್‌ ಕ್ಲರ್ಕ್​ ರೀತಿ ನಡೆಸಿಕೊಳ್ಳಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದರು.

ಕರ್ನಾಟಕದಲ್ಲಿ ಕಾಂಗ್ರೆಸ್​ ಹಾಗೂ ಜೆಡಿಎಸ್​ ಸೇರಿ ಮೈತ್ರಿ ಸರ್ಕಾರ ರಚಿಸಿವೆ. ಘಟಬಂಧನದ ಮೂಲಕ ಕರ್ನಾಟಕದಲ್ಲಿ ಮೊದಲ ಸರ್ಕಾರ ರಚಿತವಾಗಿದೆ. ಆದರೆ ಸಿಎಂರನ್ನು ಕ್ಲರ್ಕ್​ ರೀತಿಯಲ್ಲಿ ನಡೆಸಿಕೊಳ್ಳಲಾಗುತ್ತಿದೆ ಎಂದು ಟೀಕಿಸಿದ್ದಾರೆ.

ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್​ ವಿರುದ್ಧ ಹರಿಹಾಯ್ದರು. ಈ ವೇಳೆ ರಾಜ್ಯದಲ್ಲಿನ ಸರ್ಕಾರವನ್ನು ಉದಾಹರಣೆಯಾಗಿ ತೆಗೆದುಕೊಂಡು ಚಾಟಿ ಬೀಸಿದ್ದಾರೆ.

Tags

Related Articles

Leave a Reply

Your email address will not be published. Required fields are marked *

Language
Close