About Us Advertise with us Be a Reporter E-Paper

Breaking Newsಪ್ರಚಲಿತರಾಜ್ಯ

ಕುಗ್ಗುತ್ತಿರುವ ಜನಪ್ರಿಯತೆ ಹೆಚ್ಚಿಸಿಕೊಳ್ಳಲು ಮೇಲ್ವರ್ಗದವರಿಗೆ ಮೀಸಲಾತಿ: ದೇವೇಗೌಡ

ಹಾಸನ: ಮೇಲ್ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇ. 10 ಮೀಸಲನ್ನು ಕೇಂದ್ರ ಸರ್ಕಾರವು ಕುಗ್ಗುತ್ತಿರುವ ತನ್ನ ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳಲು ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಹೇಳಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಮನೋಭಾವದಿಂದ  ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶೇ.10 ರಷ್ಟು ಮೀಸಲಾತಿಗೆ ಕೇಂದ್ರಸರ್ಕಾರ ನಿರ್ಧರಿಸಿದೆ. ಇದಕ್ಕೆ ಎಲ್ಲಾ ಪಕ್ಷದವರು ಬೆಂಬಲ ನೀಡಿದ್ದಾರೆ. ಇದು ಸುಪ್ರೀಂಕೋರ್ಟ್ ಗೂ ಹೋಗಿದೆ ಅಲ್ಲಿ ಏನಾಗುತ್ತೋ ಎಂಬುದನ್ನು ನೋಡೋಣ ಎಂದರು.

ಲೋಕಸ‌ಭೆ ಚುನಾವಣೆಯಲ್ಲೂ ಕಾಂಗ್ರೆಸ್​ನೊಂದಿಗೆ ಮೈತ್ರಿ ಮುಂದುವರಿಯಲಿದೆ. ನಮಗೆ ಎಷ್ಟು ಸೀಟು ಕೊಡುತ್ತಾರೋ ಗೊತ್ತಿಲ್ಲ. ಈ ಬಗ್ಗೆ ರಾಹುಲ್ ಗಾಂಧಿ, ವೇಣುಗೋಪಾಲ್, ಸಿದ್ದರಾಮಯ್ಯ ಜತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ತೀರ್ಮಾನ ಮಾಡಿಲ್ಲ ಎಂದರು.

 

 

Tags

Related Articles

Leave a Reply

Your email address will not be published. Required fields are marked *

Language
Close