ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಜಕೀಯ

Bus Fare Hike: ರಾಜ್ಯದ ಜನತೆಗೆ ಶೀಘ್ರದಲ್ಲೇ ಬಸ್ ಟಿಕೆಟ್‌ ದರ ಏರಿಕೆ ಶಾಕ್‌; ಸಾರಿಗೆ ಸಚಿವ ಬೈರತಿ ಸುರೇಶ್ ಸುಳಿವು!

ರಾಜ್ಯದ ಜನತೆಗೆ ಬಸ್ ಟಿಕೆಟ್‌ ದರ ಏರಿಕೆ ಶಾಕ್‌; ಸಾರಿಗೆ ಸಚಿವ ಸುಳಿವು!

Bus ticket price Hike: ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ನಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಬಸ್ ದರ ಏರಿಕೆ ಮಾಡುವ ಅನಿವಾರ್ಯತೆ ಎದುರಾಗಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಅಲ್ಪ ಪ್ರಮಾಣದಲ್ಲಿ ದರ ಏರಿಕೆ ಮಾಡುವ ಕುರಿತು ಸಚಿವರು ಸುಳಿವು ನೀಡಿದ್ದಾರೆ.

ಪಿಎಂ ಸೇತು ಯೋಜನೆಯಲ್ಲಿ ಉದ್ಯಮಗಳ ಸಹಭಾಗಿತ್ವ ಮುಖ್ಯ: ಎಂ.ಬಿ. ಪಾಟೀಲ

ಪಿಎಂ ಸೇತು ಯೋಜನೆಯಲ್ಲಿ ಉದ್ಯಮಗಳ ಸಹಭಾಗಿತ್ವ ಮುಖ್ಯ: ಎಂ.ಬಿ. ಪಾಟೀಲ

MB Patil: ಪಿಎಂ ಸೇತು ಯೋಜನೆಯು ಹಬ್ & ಸ್ಪೋಕ್ ಸ್ವರೂಪ ಹೊಂದಿದೆ. ಇದರಲ್ಲಿ ಒಂದು ಹಬ್ ಅಡಿಯಲ್ಲಿ 4 ಐಟಿಐ ಬರುತ್ತವೆ. ಇದರಲ್ಲಿ ರಾಜ್ಯದಲ್ಲಿ 12 ಹಬ್ ಇದ್ದು, 48 ಐಟಿಐ ಇವೆ. ಈಗ ಬೆಂಗಳೂರು ನಗರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಒಂದೊಂದು ಹಬ್ ಆಯ್ಕೆ ಮಾಡಿಕೊಳ್ಳಲಾಗಿದೆ. ಇದರಲ್ಲಿ ಆಯಾ ಭಾಗಗಳ ಉದ್ಯಮಿಗಳು ಸಕ್ರಿಯವಾಗಿ ತೊಡಗಿಸಿ‌ಕೊಳ್ಳಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಕರೆ ನೀಡಿದ್ದಾರೆ.

ನವೋದ್ಯಮ ಬಲವರ್ಧನೆ: ಐಎನ್‌ಕ್ಯೂ ಇನ್ನೊವೇಷನ್‌ ಗ್ಲೋಬಲ್‌ ಜತೆ ರಾಜ್ಯ ಸರ್ಕಾರದ ಒಪ್ಪಂದ

ಐಎನ್‌ಕ್ಯೂ ಇನ್ನೊವೇಷನ್‌ ಗ್ಲೋಬಲ್‌ ಜತೆ ರಾಜ್ಯ ಸರ್ಕಾರದ ಒಪ್ಪಂದ

Priyank Kharge: ರಾಜ್ಯದಲ್ಲಿನ ನವೋದ್ಯಮ ವ್ಯವಸ್ಥೆಯು ದೇಶದಲ್ಲೇ ಅತ್ಯುತ್ತಮವಾದವುಗಳಲ್ಲಿ ಒಂದಾಗಿರುವುದಷ್ಟೇ ಅಲ್ಲದೆ, ಜಾಗತಿಕ ಮಟ್ಟದ ಪ್ರಮುಖ ನವೋದ್ಯಮ ಪರಿಸರ ವ್ಯವಸ್ಥೆಗಳ ಜತೆಗೆ ಗಾಢ ಸಂಪರ್ಕ ಹೊಂದಿರಬೇಕು ಎಂಬುದು ನಮ್ಮ ಉದ್ದೇಶ. ಈ ಸಹಭಾಗಿತ್ವಗಳು ನಮ್ಮ ಸ್ಟಾರ್ಟ್‌ಅಪ್‌ಗಳಿಗೆ ವಾಸ್ತವಿಕ ಅವಕಾಶಗಳನ್ನು ಮತ್ತು ಸಮಾಜದ ನೈಜ ಸಮಸ್ಯೆಗಳಿಗೆ ಪರಿಹಾರಗಳನ್ನು ಒದಗಿಸುವಂತಾಗಬೇಕು ಎಂದು ಐಟಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಸಿಎಂ ಡಿ.ಕೆ. ಶಿವಕುಮಾರ್

ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಸಿಎಂ

CM DK Shivakumar: ಬರಗಾಲ ಎಂದು ಪ್ರಧಾನಮಂತ್ರಿಗಳೇ ಹೇಳಿದ್ದು, ಕೇಂದ್ರ ಸರ್ಕಾರ ಸಾಲಮನ್ನಾ ಮಾಡಿಸುವ ಜವಾಬ್ದಾರಿ ಹೊರಬೇಕು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಇತರೆ ನಾಯಕರು ತಮ್ಮೊಂದಿಗೆ ದೆಹಲಿಗೆ ಬಂದು ಕೇಂದ್ರ ಸರ್ಕಾರದಿಂದ ಅನುದಾನ ಹಾಗೂ ರೈತರ ಸಾಲ ಮನ್ನಾಕ್ಕೆ ಆಗ್ರಹಿಸಬೇಕು. ಬರಗಾಲಕ್ಕೆ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್‌ ಆಗ್ರಹಿಸಿದ್ದಾರೆ.

2 ದಿನಗಳಲ್ಲಿ ಕಬಿನಿ ಕಟ್ಟು ನೀರು ಸಮಸ್ಯೆ ಇತ್ಯರ್ಥ ಎಂದ ಸಚಿವ ಎನ್.ಚಲುವರಾಯಸ್ವಾಮಿ; ರೈತರ ಬೇಡಿಕೆಗೆ ಸ್ಪಂದನೆ

2 ದಿನಗಳಲ್ಲಿ ಕಬಿನಿ ಕಟ್ಟು ನೀರು ಸಮಸ್ಯೆ ಇತ್ಯರ್ಥ: ಸಚಿವ ಚಲುವರಾಯಸ್ವಾಮಿ

N Chaluvarayaswamy: ಕೃಷಿಗೆ ಅನುಕೂಲವಾಗಲು ನಾಲ್ಕು ತಿಂಗಳವರೆಗೂ ನಾಲ್ಕು ಕಟ್ಟು ನೀರು ನೀಡಬೇಕಾಗುತ್ತದೆ. ಮೈಸೂರು ಉಸ್ತುವಾರಿ ಸಚಿವರೊಂದಿಗೂ ಈ ಬಗ್ಗೆ ಚರ್ಚಿಸಲಾಗಿದೆ. ನದಿಗೆ ನೀರು ಬಿಡದಿದ್ದರೆ ವನ್ಯಪ್ರಾಣಿಗಳಿಗೂ ಕಷ್ಟವಾಗಲಿದೆ. ಹೀಗಾಗಿ, ಇಂದು ರಾತ್ರಿಯೇ ಮುಖ್ಯ ಎಂಜಿನಿಯರ್ ಜತೆ ಚರ್ಚಿಸಿ, ಎರಡು ಅಥವಾ ನಾಲ್ಕು ಕಟ್ಟು ನೀರು ನೀಡುವ ಬಗ್ಗೆ ಕೇವಲ ಎರಡೇ ದಿನದಲ್ಲಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಭರವಸೆ ನೀಡಿದರು.

ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ತವರು ಜಿಲ್ಲೆ ಕಲಬುರಗಿಗೆ ರಾಜ್ಯ ಸರ್ಕಾರದಿಂದ ಬಂಪರ್‌ ಕೊಡುಗೆ; 105 ಕೋಟಿ ರುಪಾಯಿ ಮೊತ್ತದ ನೀರಾವರಿ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ

ಕಲಬುರಗಿಯ 2 ಮಹತ್ವದ ನೀರಾವರಿ ಯೋಜನೆಗಳಿಗೆ ಸಂಪುಟ ಅನುಮೋದನೆ

Priyank Kharge: ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಎರಡು ಪ್ರತ್ಯೇಕ ಮಹತ್ವದ ನೀರಾವರಿ ಯೋಜನೆಗಳಿಗೆ ಗುರುವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗೃಹ, ಮಾಹಿತಿ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

BJP Padayatra: ಬರಗಾಲ; 5 ಲಕ್ಷದವರೆಗೆ ಕೃಷಿ ಸಾಲ ಮನ್ನಾ ಮಾಡಿ: ಬಿ.ವೈ.ವಿಜಯೇಂದ್ರ ಆಗ್ರಹ

ಬರಗಾಲ; 5 ಲಕ್ಷದವರೆಗೆ ಕೃಷಿ ಸಾಲ ಮನ್ನಾ ಮಾಡಿ: ಬಿವೈ ವಿಜಯೇಂದ್ರ

BY Vijayendra: ನಾಡಿನ ರೈತರ ಜ್ವಲಂತ ಸಮಸ್ಯೆ ಬಗ್ಗೆ ಚರ್ಚಿಸಲು, ಬರಗಾಲದ ಪರಿಸ್ಥಿತಿ ಕುರಿತು ಚರ್ಚೆ ಮಾಡಲು ವಿಶೇಷ ಅಧಿವೇಶನ ಕರೆಯಬೇಕು. ಬರಗಾಲದ ಕಾರಣ 5 ಲಕ್ಷದವರೆಗಿನ ಕೃಷಿ ಸಾಲ ಮನ್ನಾ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.

ನೀತಿ ಆಯೋಗದ ಉಪಾಧ್ಯಕ್ಷರ ಜತೆ ಸಿಎಂ ಡಿಕೆಶಿ ಸಭೆ; ರಾಜ್ಯದ ಪಾಲಿನ ಅನುದಾನ ಹಂಚಿಕೆಗೆ ಮನವಿ

ನೀತಿ ಆಯೋಗದ ಉಪಾಧ್ಯಕ್ಷರ ಜತೆ ಸಿಎಂ ಡಿ.ಕೆ. ಶಿವಕುಮಾರ್‌ ಮಹತ್ವದ ಸಭೆ

CM DK Shivakumar: ನೀತಿ ಆಯೋಗದ ಉಪಾಧ್ಯಕ್ಷ ಡಾ. ಅಶೋಕ್ ಕುಮಾರ್ ಲಾಹಿರಿ ಅವರೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಸಭೆ ನಡೆಸಿ, ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್‌, ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಈ ಹಿಂದೆ ಘೋಷಿಸಿದ್ದ ಅನುದಾನ ಸೇರಿದಂತೆ ಕರ್ನಾಟಕ ರಾಜ್ಯಕ್ಕೆ ನೀಡಬೇಕಾಗಿರುವ ಅನುದಾನ ಹಂಚಿಕೆಯ ಪಾಲನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

BJP Padayatra: ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ: ಸಿಎಂ ಡಿಕೆಶಿಗೆ ಬಿ.ವೈ. ವಿಜಯೇಂದ್ರ ಸವಾಲು

ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ: ಬಿ.ವೈ. ವಿಜಯೇಂದ್ರ ಸವಾಲು

BY Vijayendra: ಡಿಕೆಶಿ ಸರ್ಕಾರದ ಇನ್ನೂ ಎರಡು ಮೂರು ವಿಕೆಟ್‍ಗಳು ಬೀಳಲು ತಯಾರು ಆದಂತೆ ಇದೆ. ಈ ಎಲ್ಲರಿಗೂ ಭ್ರಷ್ಟಾಚಾರ ಉರುಳಾಗಲಿದೆ. ಲಜ್ಜೆಗೆಟ್ಟ ಕಾಂಗ್ರೆಸ್‍ನವರಿಗೆ ಮಾನ, ಮರ್ಯಾದೆ ಏನೂ ಇಲ್ಲ. ಆನೆ ನಡೆದಿದ್ದೇ ದಾರಿ ಎಂದುಕೊಂಡಿದ್ದವರ ವಿರುದ್ಧ ಬಿಜೆಪಿ ಬೀದಿಗಿಳಿದು ಹೋರಾಟ ಮಾಡಲಾರಂಭಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ದೂರಿದ್ದಾರೆ.

Congress Protest: ರಾಹುಲ್ ಗಾಂಧಿ ಹುಟ್ಟು ಹೋರಾಟಗಾರ, ನೂರು ಕೇಸ್ ದಾಖಲಿಸಿದ್ರೂ ಹೆದರಲ್ಲ: ಸಿಎಂ ಡಿ.ಕೆ. ಶಿವಕುಮಾರ್

ನೂರು ಕೇಸ್ ದಾಖಲಿಸಿದರೂ ರಾಹುಲ್ ಗಾಂಧಿ ಹೆದರಲ್ಲ: ಸಿಎಂ ಡಿಕೆಶಿ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಉತ್ತರಾಖಂಡದಲ್ಲಿ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಡಿ.ಕೆ.ಶಿವಕುಮಾರ್ ಅವರು ಆಕ್ರೋಶ ಹೊರಹಾಕಿದ್ದಾರೆ.

ಕೇಂದ್ರ ಜಲ ಆಯೋಗದ ಅಧ್ಯಕ್ಷರೊಂದಿಗೆ ಸಚಿವ ಎನ್. ಚಲುವರಾಯಸ್ವಾಮಿ ಮಹತ್ವದ ಸಭೆ; ಮೇಕೆದಾಟು ಯೋಜನೆಗೆ ಶೀಘ್ರ ಅನುಮೋದನೆ ನೀಡಲು ಆಗ್ರಹ

ಮೇಕೆದಾಟು ಯೋಜನೆಗೆ ಅನುಮೋದನೆ ನೀಡಲು ಚಲುವರಾಯಸ್ವಾಮಿ ಆಗ್ರಹ

ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಅಗತ್ಯವಿರುವ ಶಾಸನಬದ್ಧ ತಾಂತ್ರಿಕ ಅನುಮೋದನೆಗಳನ್ನು ಶೀಘ್ರವಾಗಿ ಒದಗಿಸುವಂತೆ ಒತ್ತಾಯಿಸಿ, ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರ ನೇತೃತ್ವದ ಉನ್ನತ ಮಟ್ಟದ ನಿಯೋಗವು ಬುಧವಾರ ನವದೆಹಲಿಯಲ್ಲಿ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿ CWC ಅಧ್ಯಕ್ಷ ಅನುಪಮ್ ಪ್ರಸಾದ್ ಅವರೊಂದಿಗೆ ಮಹತ್ವದ ಸಭೆ ನಡೆಸಿತು.

ಶುದ್ಧೀಕರಣ ಗದ್ದಲದ ಮಧ್ಯೆ ರಾಹುಲ್ ಗಾಂಧಿಗೆ ಬುದ್ಧಿ ಶುದ್ಧಿ ಯಜ್ಞ ಮಾಡಿದ ಬಿಜೆಪಿ; ಏನಿದು ಆಚರಣೆ? ಯಾಕಾಗಿ?

ರಾಹುಲ್ ಗಾಂಧಿಗೆ ಬುದ್ಧಿ ಶುದ್ಧಿ ಯಜ್ಞ ಮಾಡಿದ ಬಿಜೆಪಿ

BJP Performs Buddhi Shuddhi Yagna: ಬಿಜೆಪಿಯ ಪರಿಶಿಷ್ಟ ಜಾತಿ ಮೋರ್ಚಾವು ಉತ್ತರಾಖಂಡದ ಡೆಹ್ರಾಡೂನ್‌ನ ದೇವಸ್ಥಾನವೊಂದರಲ್ಲಿ ಬುದ್ಧಿ ಶುದ್ಧಿ ಯಜ್ಞವನ್ನು ಆಯೋಜಿಸಿದ್ದು, ಈ ಧಾರ್ಮಿಕ ಆಚರಣೆಯ ಸಮಯದಲ್ಲಿ ರಾಹುಲ್ ಗಾಂಧಿ ಅವರ ಭಾವಚಿತ್ರವನ್ನು ಇರಿಸಲಾಗಿತ್ತು.

BJP Padayatra: ಬರಪೀಡಿತ ಪ್ರದೇಶ ಘೋಷಿಸಲು ಲಂಚ ಬಯಸುವ ಸರ್ಕಾರ: ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬರಪೀಡಿತ ಪ್ರದೇಶ ಘೋಷಿಸಲು ಲಂಚ ಬಯಸುವ ಸರ್ಕಾರ: ವಿಜಯೇಂದ್ರ

BY Vijayendra: ಮಸ್ಕಿಯಲ್ಲಿ ಭೀಕರ ಬರ ಇದೆ. ಆದರೂ ಇದನ್ನು ಬರಪೀಡಿತ ಎಂದು ಘೋಷಿಸಿಲ್ಲ. ಈ ಕಾಂಗ್ರೆಸ್ ಸರ್ಕಾರದಲ್ಲಿ ಲಂಚ ಕೊಡದಿದ್ದರೆ ಏನೂ ಆಗುವುದಿಲ್ಲ. ಮಸ್ಕಿಯ ರೈತರು 10 ಲಕ್ಷವೋ 50 ಲಕ್ಷವೋ ಲಂಚ ಕೊಟ್ಟರೆ ಮುಖ್ಯಮಂತ್ರಿಗಳು ಈ ಪ್ರದೇಶವನ್ನು ಬರಪೀಡಿತ ಪ್ರದೇಶವಾಗಿ ಘೋಷಿಸಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.

ಎಐ ತಂತ್ರಜ್ಞಾನ, ಸಂಶೋಧನೆಗೆ NCERT ಒತ್ತು ನೀಡಲಿ: ಸಚಿವ ಪ್ರಲ್ಹಾದ್‌ ಜೋಶಿ ಕರೆ

ಎಐ ತಂತ್ರಜ್ಞಾನ, ಸಂಶೋಧನೆಗೆ NCERT ಒತ್ತು ನೀಡಲಿ: ಜೋಶಿ ಕರೆ

Minister Pralhad Joshi: ನವದೆಹಲಿಯಲ್ಲಿ ನಡೆದ NCERT 66ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್‌ ಜೋಶಿ ಅವರು ಮಾತನಾಡಿದ್ದು, NCERTಯನ್ನು ಮತ್ತಷ್ಟು ನವೀನಗೊಳಿಸಿ ಸಂಶೋಧನೆ ಆಧಾರಿತವಾಗಿ ಭವಿಷ್ಯಕ್ಕೆ ಸಿದ್ಧವಾಗಿಸೋಣ ಎಂದು ಅಧಿಕಾರಿಗಳಿಗೆ ಕರೆ ನೀಡಿದ್ದಾರೆ.

ಶೀಘ್ರವೇ ಬರ ಪೀಡಿತ ತಾಲೂಕುಗಳ ಎರಡನೇ ಪಟ್ಟಿ ಪ್ರಕಟ: ಸಿಎಂ ಡಿ.ಕೆ. ಶಿವಕುಮಾರ್

ಶೀಘ್ರವೇ ಬರ ಪೀಡಿತ ತಾಲೂಕುಗಳ ಎರಡನೇ ಪಟ್ಟಿ ಪ್ರಕಟ: ಸಿಎಂ

CM DK Shivakumar: ಜಿಲ್ಲಾ ಸಚಿವರು ಪ್ರತಿ ತಾಲೂಕಿಗೆ ಭೇಟಿ ನೀಡಿ, ವಾಸ್ತವಾಂಶದ ವರದಿ ನೀಡಿದ್ದಾರೆ. ಅದರ ಜತೆಗೆ ಅಧಿಕಾರಿಗಳು ಅಧ್ಯಯನ ಮಾಡುತ್ತಿದ್ದಾರೆ. ಎರಡೂ ವರದಿ ಪರಿಶೀಲಿಸಿ ಕೇಂದ್ರಕ್ಕೆ ವರದಿ ಸಲ್ಲಿಸಬೇಕಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Sugar Prices: ಗಣೇಶ ಹಬ್ಬದ ವೇಳೆ ಸಕ್ಕರೆ ಲಭ್ಯತೆ, ಬೆಲೆ ಸ್ಥಿರತೆಗೆ ಕೇಂದ್ರ ಕಟ್ಟುನಿಟ್ಟಿನ ಕ್ರಮ

ಸಕ್ಕರೆ ಲಭ್ಯತೆ, ಬೆಲೆ ಸ್ಥಿರತೆಗೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮ

Pralhad Joshi: ಹಬ್ಬದ ಋತುವಿನಲ್ಲಿ ದೇಶಾದ್ಯಂತ ಸಕ್ಕರೆ ಕೃತಕ ಅಭಾವ, ಅಕ್ರಮ ದಾಸ್ತಾನು ತಪ್ಪಿಸಲು ಮತ್ತು ಬೆಲೆ ಸ್ಥಿರತೆ ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದ್ದು, ಎರಡೂವರೆ ತಿಂಗಳ ಕಾಲ ಸಕ್ಕರೆ ದಾಸ್ತಾನು ಮಿತಿಯನ್ನು 2000 ಕ್ವಿಂಟಲ್‌ಗೆ ನಿಗದಿಪಡಿಸಿದೆ. ಸೆಪ್ಟೆಂಬರ್ 15 ರಿಂದ ಜಾರಿಗೆ ಬರುವಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಕೊಲೆ ಬೆದರಿಕೆ: ಭದ್ರತೆ ಹೆಚ್ಚಿಸಲು ಗೃಹ ಸಚಿವಾಲಯಕ್ಕೆ ಮನವಿ

ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಜೀವ ಬೆದರಿಕೆ

Chirag Paswan: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಭಯೋತ್ಪಾದಕರು ಶೀಘ್ರದಲ್ಲೇ ಹತ್ಯೆ ಮಾಡಲಿದ್ದಾರೆ ಎಂಬ ಸಂದೇಶ ಬಂದಿದ್ದು, ಅವರ ಕಚೇರಿ ಭದ್ರತೆ ಹೆಚ್ಚಿಸುವಂತೆ ಗೃಹ ಸಚಿವಾಲಯಕ್ಕೆ ಮನವಿ ಮಾಡಿದೆ. ಈ ನಡುವೆ ಮೀಸಲಾತಿ ವಿಚಾರದಲ್ಲಿ ಎನ್‌ಡಿಎ ಮಿತ್ರ ಪಕ್ಷದೊಂದಿಗೆ ಅವರ ಭಿನ್ನಾಭಿಪ್ರಾಯವೂ ಚರ್ಚೆಗೆ ಗ್ರಾಸವಾಗಿದೆ.

BJP Padayatra: ಪಾದಯಾತ್ರೆಯಿಂದ ಜನರ ಸಮಸ್ಯೆಗಳು ಪರಿಹಾರವಾಗಲ್ಲ: ಬಿಜೆಪಿಯ ಬಳ್ಳಾರಿ ಚಲೋ ಬಗ್ಗೆ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ

ಪಾದಯಾತ್ರೆಯಿಂದ ಜನರ ಸಮಸ್ಯೆಗಳು ಪರಿಹಾರವಾಗಲ್ಲ: ಪ್ರಿಯಾಂಕ್‌ ಖರ್ಗೆ

ಜನರ ನೈಜ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವುದು, ಸರ್ಕಾರದೊಂದಿಗೆ ಸಂವಾದ ನಡೆಸುವುದು ಹಾಗೂ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುವುದು ಪ್ರತಿಪಕ್ಷದ ಜವಾಬ್ದಾರಿಯಾಗಿದೆ. ಕೇವಲ ರಾಜಕೀಯ ಘೋಷಣೆಗಳೊಂದಿಗೆ ಪಾದಯಾತ್ರೆ ನಡೆಸುವುದರಿಂದ ಜನರ ಸಮಸ್ಯೆಗಳು ಪರಿಹಾರವಾಗುವುದಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಸ್ಮರಣೀಯವಾಗಿಸಲು ಬಿಜೆಪಿ ಯೋಜನೆ; 1 ತಿಂಗಳ ಜನಸಂಪರ್ಕ ಯಾತ್ರೆಗೆ ಸಿದ್ಧತೆ

ಮೋದಿ ಜನ್ಮದಿನದಂದು ಜನಸಂಪರ್ಕ ಯಾತ್ರೆ ನಡೆಸಲು ಬಿಜೆಪಿ ಸಿದ್ಧತೆ

BJP Plans Outreach Yatra: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದು ದೇಶಾದ್ಯಂತ ಜನಸಂಪರ್ಕ ಯಾತ್ರೆ ನಡೆಸಲು ಬಿಜೆಪಿ ಮುಂದಾಗಿದೆ. ಗುಜರಾತ್‌ನ ವಡ್ನಗರದಿಂದ ಉತ್ತರ ಪ್ರದೇಶದ ವಾರಣಾಸಿ ತನಕ ನಡೆಯುವ ಈ ಯಾತ್ರೆ ಪ್ರಧಾನಿ ಮೋದಿ ಅವರ ಜನ್ಮದಿನವಾದ ಸೆಪ್ಟೆಂಬರ್ 17ರಂದು ಪ್ರಾರಂಭವಾಗುವ ಸಾಧ್ಯತೆಯಿದೆ.

BJP Padayatra: ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ

ಬಿಜೆಪಿ ಯಾಕೆ ಪಾದಯಾತ್ರೆ ಮಾಡುತ್ತಿದೆ ಎಂದು ಡಿಕೆಶಿ ಕೇಳುತ್ತಾರೆ; ನಿಮ್ಮ ಸರ್ಕಾರದ ವೈಫಲ್ಯಗಳೇ ನಮ್ಮ ಪಾದಯಾತ್ರೆಗೆ ಕಾರಣ. ರಾಜ್ಯದ ಜನರ ಹಕ್ಕು, ನ್ಯಾಯ ಮತ್ತು ಭವಿಷ್ಯಕ್ಕಾಗಿ ನಾವು ಬೀದಿಗಿಳಿದಿದ್ದೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

SCO ಶೃಂಗಸಭೆಯಲ್ಲಿ ವಿಶ್ವ ನಾಯಕರ ಸಮಾಗಮ: ಒಂದೇ ಫ್ರೇಮ್‌ನಲ್ಲಿ ನರೇಂದ್ರ ಮೋದಿ, ವ್ಲಾಡಿಮಿರ್‌ ಪುಟಿನ್, ಷಿ ಜಿನ್‌ಪಿಂಗ್,  ಶೆಹಬಾಜ್ ಶರೀಫ್

ಒಂದೇ ಫ್ರೇಮ್‌ನಲ್ಲಿ ಮೋದಿ, ಷಿ ಜಿನ್‌ಪಿಂಗ್, ಪುಟಿನ್, ಶೆಹಬಾಜ್ ಶರೀಫ್

SCO Summit: ಕಿರ್ಗಿಸ್ತಾನದ ಬಿಷ್ಕೆಕ್‌ನಲ್ಲಿ ನಡೆದ 26ನೇ SCO ಶೃಂಗಸಭೆಯ ಅಧಿಕೃತ ಫ್ಯಾಮಿಲಿ ಫೋಟೊದಲ್ಲಿ ಪ್ರಧಾನಿ ನರೇಂದ್ರ ಮೋದಿ, ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಒಂದೇ ಫ್ರೇಮ್‌ನಲ್ಲಿ ಕಾಣಿಸಿಕೊಂಡರು. ಆ ಮೂಲಕ ಅಪರೂಪದ ಕ್ಷಣಕ್ಕೆ ಶೃಂಗಸಭೆ ಸಾಕ್ಷಿಯಾಯಿತು.

BJP Padayatra: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಣಕಹಳೆ; ಬಳ್ಳಾರಿ ಚಲೋ ಪಾದಯಾತ್ರೆಗೆ ಲಿಂಗಸುಗೂರಿನಲ್ಲಿ ಚಾಲನೆ

ಬಳ್ಳಾರಿ ಚಲೋ; ರಾಯಚೂರಿನ ಲಿಂಗಸುಗೂರಿನಲ್ಲಿ ಬಿಜೆಪಿ ಪಾದಯಾತ್ರೆಗೆ ಚಾಲನೆ

Ballari Chalo padayatra: ರಾಜ್ಯ ಸರ್ಕಾರದ ವಿರುದ್ಧ ಲಿಂಗಸುಗೂರಿನಲ್ಲಿ ಬಳ್ಳಾರಿವರೆಗೆ ಬಿಜೆಪಿ ಪಾದಯಾತ್ರೆ ನಡೆಯಲಿದೆ. ದುಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳ ವಿರುದ್ಧ ಬಳ್ಳಾರಿ ಚಲೋ ಪಾದಯಾತ್ರೆ ಆರಂಭವಾಗಿದೆ. ತುಘಲಕ್‌ ಸರ್ಕಾರ ತೊಲಗುವವರೆಗೂ ಹೋರಾಟ ನಿರಂತರವಾಗಿರಲಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.

SIR: ಮಹಾರಾಷ್ಟ್ರದಲ್ಲಿ ಮತದಾರರ ಪಟ್ಟಿಯಿಂದ 2 ಕೋಟಿಗೂ ಹೆಚ್ಚು ಹೆಸರು ಡಿಲೀಟ್‌: ಕಾಂಗ್ರೆಸ್ ವಾಗ್ದಾಳಿ

ಮಹಾರಾಷ್ಟ್ರದಲ್ಲಿ 2 ಕೋಟಿಗೂ ಹೆಚ್ಚು ಮತದಾರರ ಹೆಸರು ಡಿಲೀಟ್‌

Voter Deletions in Maharashtra: ಮಹಾರಾಷ್ಟ್ರದಲ್ಲಿ ಮತದಾರರ ಪಟ್ಟಿಯಿಂದ ಸುಮಾರು 2 ಕೋಟಿ ಹೆಸರನ್ನು ಡಿಲೀಟ್‌ ಮಾಡಲಾಗಿದೆ. ಮತದಾರರು ತಮ್ಮ ನೋಂದಾಯಿತ ವಿಳಾಸಗಳಲ್ಲಿ ಗೈರಾಗಿರುವುದು, ಪತ್ತೆಯಾಗದಿರುವುದು, ನಿವಾಸಗಳನ್ನು ಬದಲಾಯಿಸಿರುವುದು, ಮರಣ ಹೊಂದಿರುವುದು, ನಕಲಿ, ಬಹು ನೋಂದಣಿಗಳನ್ನು ಹೊಂದಿರುವುದು ಅಥವಾ ಬೇರೆಡೆ ನೋಂದಾಯಿಸಲ್ಪಟ್ಟಿರುವುದು ಇದಕ್ಕೆ ಕಾರಣ.

‘ʼಮಹಿಳೆಯರು ಮನೆಗೇ ಸೀಮಿತವಾಗಿರಬೇಕು’ʼ: ವಿವಾದದ ಕಿಡಿ ಹೊತ್ತಿಸಿದ ಮುಸ್ಲಿಂ ಮುಖಂಡ ಅಬೂಬಕರ್ ಮುಸ್ಲಿಯಾರ್

ವಿವಾದಕ್ಕೆ ತಿರುಗಿದ ಮಹಿಳೆಯರ ಕುರಿತ ಮುಸ್ಲಿಯಾರ್ ಹೇಳಿಕೆ

AP Aboobacker Musliyar: ಮಹಿಳೆಯರು ಸಾರ್ವಜನಿಕವಾಗಿ ಕಾಣಿಸಿಕೊಳ್ಳದೆ ಮನೆಗೇ ಸೀಮಿತರಾಗಬೇಕು ಎಂದು ಕೇರಳಂನ ಹಿರಿಯ ಮುಸ್ಲಿಮ್‌ ಮುಖಂಡ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಹೇಳಿಕೆಯನ್ನು ಸಿಪಿಐ(ಎಂ) ಹಾಗೂ ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದ್ದು, ಮಹಿಳೆಯರ ಸ್ವಾತಂತ್ರ್ಯ ಮತ್ತು ಹಕ್ಕುಗಳನ್ನು ನಿರ್ಬಂಧಿಸುವ ಪ್ರಯತ್ನವನ್ನು ವಿರೋಧಿಸಿದ್ದಾರೆ.

Loading...