ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Actor Chetan Ahimsa: ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ನಟ ಚೇತನ್‌ ಅಹಿಂಸಾ ಘೋಷಣೆ; ಪ್ರಣಾಳಿಕೆಯಲ್ಲಿ ಏನಿದೆ?

ವಿವಿಧ ಸಮಾಜ ಪರ ಕೆಲಸ ಮಾಡುವ ಸಂಘಟನೆಗಳು, ದಲಿತ, ಬಹುಜನ ಪರ ಹೋರಾಟಗಾರರನ್ನು ಒಗ್ಗಟ್ಟಾಗಿಸಿ ಹೊಸ ಪಕ್ಷ ಕಟ್ಟುತ್ತೇವೆ. 2027ರ ಜನವರಿಯಲ್ಲಿ ಪಕ್ಷವನ್ನು ಅಧಿಕೃತವಾಗಿ ಸ್ಥಾಪನೆ ಮಾಡುವುದಾಗಿ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಘೋಷಿಸಿದ್ದಾರೆ.

ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ನಟ ಚೇತನ್‌ ಅಹಿಂಸಾ ಘೋಷಣೆ

ನಟ ಚೇತನ್‌ ಅಹಿಂಸಾ. -

Prabhakara R
Prabhakara R Jun 21, 2026 9:23 PM

ಬಾಗಲಕೋಟೆ: ತಮಿಳುನಾಡಿನಲ್ಲಿ ನಟ ವಿಜಯ್‌ ಅವರು ಹೊಸ ಪಕ್ಷ ಕಟ್ಟಿ, ಅಧಿಕಾರಕ್ಕೇರುವ ಮೂಲಕ ರಾಜಕೀಯ ಪಂಡಿತರ ಲೆಕ್ಕಾಚಾರಗಳನ್ನು ತಲೆಕೆಳಗೆ ಮಾಡಿದ್ದಾರೆ. ಅದೇ ರೀತಿಯಲ್ಲಿ ಕರ್ನಾಟಕದಲ್ಲಿ ಕನ್ನಡದ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ (Actor Chetan Ahimsa) ಅವರು ನೂತನ ರಾಜಕೀಯ ಪಕ್ಷ ಸ್ಥಾಪನೆ ಮೂಲಕ, ರಾಜಕೀಯಕ್ಕೆ ಎಂಟ್ರಿ ನೀಡಲು ಮುಂದಾಗಿದ್ದಾರೆ.

ಈ ಬಗ್ಗೆ ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ನಟ ಚೇತನ್‌ ಅವರು, ವಿವಿಧ ಸಮಾಜ ಪರ ಕೆಲಸ ಮಾಡುವ ಸಂಘಟನೆಗಳು, ದಲಿತ, ಬಹುಜನ ಪರ ಹೋರಾಟಗಾರರನ್ನು ಒಗ್ಗಟ್ಟಾಗಿಸಿ ಹೊಸ ಪಕ್ಷ ಕಟ್ಟುತ್ತೇವೆ. 2027ರ ಜನವರಿಯಲ್ಲಿ ಪಕ್ಷವನ್ನು ಅಧಿಕೃತವಾಗಿ ಸ್ಥಾಪನೆ ಮಾಡುವುದಾಗಿ ತಿಳಿಸಿದ್ದಾರೆ.

ನಮ್ಮ ಪಕ್ಷದ ಹೆಸರಿನಲ್ಲಿ ಸಂವಿಧಾನದ ಆಶಯಗಳ ಪದಗಳಿರಲಿವೆ ಎಂದಿರುವ ಅವರು, ಪ್ರಸ್ತುತ ಪಕ್ಷದ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ ಸಂಘಟನೆ ಮಾಡುವ ಗುರಿ ಹೊಂದಿದ್ದೇವೆ.

2027ರ ಜನವರಿ ತಿಂಗಳಲ್ಲಿ ಹುಬ್ಬಳ್ಳಿಯಲ್ಲಿ 25,000ಕ್ಕೂ ಅಧಿಕ ಜನರನ್ನು ಸೇರಿಸಿ ಬೃಹತ್ ಸಮಾವೇಶ ನಡೆಸಲಾಗುವುದು. ಅಂದು ಪಕ್ಷದ ಹೆಸರು, ಚಿಹ್ನೆ, ಪ್ರಣಾಳಿಕೆ, ಧ್ವಜ ಹಾಗೂ ರಾಜ್ಯ ಸಮಿತಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಸಮ ಸಮಾಜ ಕಟ್ಟುವ ಉದ್ದೇಶದೊಂದಿಗೆ ಸ್ಥಾಪನೆಯಾಗುತ್ತಿರುವ ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಏನೆಲ್ಲಾ ಅಂಶಗಳು ಇವೆ ಎಂಬ ಬಗ್ಗೆ ನಟ ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರಣಾಳಿಕೆಯ ಪ್ರಮುಖ ಅಂಶಗಳು:

  • ಲಿಂಗ ಸಮಾನತೆ
  • ಜಾತಿಯ ಸಮಾನತೆ
  • ಆರ್ಥಿಕ ಸಮಾನತೆ
  • ಭದ್ರತೆ
  • ಧರ್ಮ ನಿರಪೇಕ್ಷತೆ
  • ಪ್ರಾದೇಶಿಕತೆ ಮತ್ತು ಭಾಷೆ-ಸಾಂಸ್ಕೃತಿಕ ಸಮಾನತೆ
  • ಪರಿವರ್ತನಾ ಪರಿಸರವಾದ
  • ಭ್ರಷ್ಟಾಚಾರ ವಿರೋಧಿ
  • ಅಭಿವ್ಯಕ್ತಿ ಮತ್ತು ಮಾಧ್ಯಮ ಸ್ವಾತಂತ್ರ್ಯ
  • ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ. ಪೊಲೀಸ್ ಮತ್ತು ಜೈಲು ಸುಧಾರಣೆ ಹಾಗೂ ತಂತ್ರಜ್ಞಾನದ ಸದ್ಬಳಕೆ