ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ರಾಮನಗರ ರಹೀಂ ನಗರ ಆಗುತ್ತೆ; ಮುಸ್ಲಿಂ ವಾರ್ಡ್‌ಗಳಲ್ಲಿ ಕಾನೂನುಬಾಹಿರ SIR ಆಗ್ತಿದೆ ಎಂದು ನಿಖಿಲ್‌ ಕುಮಾರಸ್ವಾಮಿ ಕಿಡಿ

BJP-JDS Protest: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ನಿಯಮಗಳನ್ನು ಗಾಳಿಗೆ ತೂರಿ, ಕಲ್ಯಾಣ ಮಂಟಪದಲ್ಲಿ ಅಕ್ರಮವಾಗಿ ದಾಖಲೆ ಸೃಷ್ಟಿ ಮಾಡಲಾಗುತ್ತಿದೆ ಎಂದು ಆರೋಪಿಸಿ, ಶುಕ್ರವಾರ ರಾಮನಗರ ಜಿಲ್ಲಾಧಿಕಾರಿ ಕಚೇರಿ ಎದುರು ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಮುಸ್ಲಿಂ ವಾರ್ಡ್‌ಗಳಲ್ಲಿ ಕಾನೂನುಬಾಹಿರ SIR: ನಿಖಿಲ್‌ ಆರೋಪ

ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. -

Profile
Siddalinga Swamy Jul 3, 2026 7:05 PM

ರಾಮನಗರ (ಬೆಂಗಳೂರು ದಕ್ಷಿಣ), ಜು.3: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ನಿಯಮಗಳನ್ನು ಗಾಳಿಗೆ ತೂರಿ, ಕಲ್ಯಾಣ ಮಂಟಪದಲ್ಲಿ ಅಕ್ರಮವಾಗಿ ದಾಖಲೆ ಸೃಷ್ಟಿ ಮಾಡಲಾಗುತ್ತಿದೆ ಎಂದು ಆರೋಪಿಸಿ, ಶುಕ್ರವಾರ ರಾಮನಗರ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Nikhil Kumaraswamy

ರಾಹುಲ್ ಗಾಂಧಿಗೆ ನಿಖಿಲ್ ಕುಮಾರಸ್ವಾಮಿ ನೇರ ಸವಾಲು

ದೆಹಲಿಯಲ್ಲಿ ಕುಳಿತು ವೋಟ್ ಚೋರಿ ಬಗ್ಗೆ ಮಾತನಾಡುವ ರಾಹುಲ್ ಗಾಂಧಿ ಅವರೇ, ಕರ್ನಾಟಕದಲ್ಲಿ ನಿಮ್ಮದೇ ಸರ್ಕಾರ ಏನು ಮಾಡುತ್ತಿದೆ ಎಂಬುದನ್ನು ಬಂದು ನೋಡಲಿ. ಈ ವಿಚಾರವನ್ನು ದೆಹಲಿಗೆ ತೆಗೆದುಕೊಂಡು ಹೋಗಿ, ರಾಹುಲ್ ಗಾಂಧಿಗೆ ಅರ್ಥವಾಗುವಂತೆ ಇಂಗ್ಲಿಷ್‌ನಲ್ಲೇ ಪ್ರೆಸ್‌ಮೀಟ್ ಮಾಡುತ್ತೇನೆ ಎಂದು ಅವರು ಸವಾಲು ಹಾಕಿದರು.

ಮೂರು ದಿನಗಳ ಹಿಂದೆ ನಮ್ಮ ಬಿಎಲ್‌ಎ-2 ಗಳನ್ನು ಕರೆಸಿ ತಹಸೀಲ್ದಾರ್ ದಾರಿ ತಪ್ಪಿಸಿದ್ದಾರೆ. ಮುಸ್ಲಿಮರ ವಾರ್ಡ್‌ಗಳಾದ ಟಿಪ್ಪು ನಗರ, ಯಾರಬ್ ನಗರ, ಮೆಹಬೂಬ್ ನಗರಗಳಲ್ಲಿ ಅಕ್ರಮವಾಗಿ ಎಸ್‌ಐಆರ್ ನಡೆಯುತ್ತಿದೆ. ಅಲ್ಲಿಗೆ ಹೋಗಲು ಭಯದ ವಾತಾವರಣ ಸೃಷ್ಟಿಸಲಾಗಿದೆ. ಆದರೂ ನಮ್ಮ ಕಾರ್ಯಕರ್ತರು ಧೈರ್ಯ ಮಾಡಿ ಒಳಗೆ ಹೋಗಿ ವಿಡಿಯೋ ಸಾಕ್ಷ್ಯ ತಂದಿದ್ದಾರೆ. ಇದನ್ನು ನೋಡಿದರೆ ರಾಮನಗರ ಮುಂದೆ ‘ರಹೀಂ ನಗರʼ ಆಗುತ್ತೋ ಏನೋ ಎಂದು ನಿಖಿಲ್‌ ಕುಮಾರಸ್ವಾಮಿ ಟೀಕಿಸಿದರು.

ಕಳೆದ ಚುನಾವಣೆಯಲ್ಲೂ ನನ್ನ ವಿರುದ್ಧ ಹೊರರಾಜ್ಯದ ಜನರನ್ನು ತಂದು ಕಳ್ಳ ಮತದಾನ ಮಾಡಿಸಿ ಇವರು ಗೆದ್ದಿದ್ದರು ಎಂದು ಆರೋಪಿಸಿದ ನಿಖಿಲ್‌ ಕುಮಾರಸ್ವಾಮಿ, ರಾಮನಗರದ ಜನತೆ ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ನಿಮ್ಮ ಮಕ್ಕಳ ಭವಿಷ್ಯ ಹಾಳಾಗಲಿದೆ. ಎಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಒಂದು ದಿನವೂ ಅಧಿಕಾರ ದುರುಪಯೋಗಪಡಿಸಿಕೊಂಡಿರಲಿಲ್ಲ ಎಂದು ತಿಳಿಸಿದರು.

ನಿಯಮ ಉಲ್ಲಂಘಿಸಿದ ಬಿಎಲ್‌ಒಗಳನ್ನು ತಕ್ಷಣವೇ ಸಸ್ಪೆಂಡ್ ಮಾಡಿ

ನಿನ್ನೆ ಕಲ್ಯಾಣ ಮಂಟಪದಲ್ಲಿ ನಡೆದ ಎಸ್‌ಐಆರ್ ಪ್ರಕ್ರಿಯೆಯನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು. ನಿಯಮ ಉಲ್ಲಂಘಿಸಿದ ಬಿಎಲ್‌ಒಗಳನ್ನು ತಕ್ಷಣವೇ ಸಸ್ಪೆಂಡ್ ಮಾಡಬೇಕು. ರಾಮನಗರದ 35 ಸೂಕ್ಷ್ಮ ಮತಗಟ್ಟೆಗಳ ಎಸ್‌ಐಆರ್ ಪ್ರಕ್ರಿಯೆಯನ್ನು ರಾಜ್ಯ ಚುನಾವಣಾ ಆಯೋಗವೇ ಖುದ್ದಾಗಿ ಬಂದು ನಡೆಸಬೇಕು ಎಂದು ಅವರು ಒತ್ತಾಯಿಸಿದರು.

ರಾಮನಗರದಲ್ಲಿ 'SIR ಸ್ಕ್ಯಾಮ್', ಮತದಾರರ ಪಟ್ಟಿಯಲ್ಲಿ ಬಾಂಗ್ಲಾ ವಲಸಿಗರಿಗೆ ಮಣೆ: ಎಚ್‌ಡಿಕೆ ಆರೋಪ

ಎಲ್ಲಾ ವಿಡಿಯೋ ಸಾಕ್ಷ್ಯಗಳನ್ನು ಪೆನ್‌ಡ್ರೈವ್‌ನಲ್ಲಿ ಹಾಕಿ ರಾಜ್ಯ ಚುನಾವಣಾ ಆಯೋಗ ಹಾಗೂ ದೆಹಲಿಯ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಲಾಗುವುದು ಎಂದು ತಿಳಿಸಿದ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಅಗತ್ಯಬಿದ್ದರೆ ಪಶ್ಚಿಮ ಬಂಗಾಳದಂತೆ ಸೆಂಟ್ರಲ್ ಫೋರ್ಸ್ ತಂದು ಎಸ್‌ಐಆರ್ ನಡೆಸಲು ಒತ್ತಾಯಿಸುತ್ತೇವೆ ಎಂದು ಹೇಳಿದರು.