Amit Shah: ಹುಬ್ಬಳ್ಳಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ಬಿ.ವೈ. ವಿಜಯೇಂದ್ರ
BY Vijayendra: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಶನಿವಾರ ಹುಬ್ಬಳ್ಳಿಯಲ್ಲಿ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಬರುವ ದಿನಗಳಲ್ಲಿ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಲು, ನಮ್ಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಅಮಿತ್ ಶಾ ಮಾರ್ಗದರ್ಶನ ನೀಡಿದರು ಎಂದು ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಬಿ.ವೈ.ವಿಜಯೇಂದ್ರ. -
ಹುಬ್ಬಳ್ಳಿ, ಸೆ.19: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಶನಿವಾರ ಹುಬ್ಬಳ್ಳಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು (Amit Shah) ಭೇಟಿ ಮಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ಜನವಿರೋಧಿ ನೀತಿಗಳ ವಿರುದ್ಧ ಅಭೂತಪೂರ್ವ ಯಶಸ್ಸು ಕಂಡ ಬಳ್ಳಾರಿ ಚಲೋ ಪಾದಯಾತ್ರೆಯ ಸಂಪೂರ್ಣ ವಿವರಗಳನ್ನು ಇದೇ ಸಂದರ್ಭದಲ್ಲಿ ಅಮಿತ್ ಶಾ ಅವರಿಗೆ ವಿಜಯೇಂದ್ರ ಸಲ್ಲಿಸಿದರು.
ಬಳ್ಳಾರಿ ಚಲೋ ಯಾತ್ರೆಯುದ್ದಕ್ಕೂ ಅಸಂಖ್ಯಾತ ಕಾರ್ಯಕರ್ತರು ಹಾಗೂ ಸಾರ್ವಜನಿಕರು ತೋರಿದ ಅಭೂತಪೂರ್ವ ಬೆಂಬಲದ ಚಿತ್ರಣವನ್ನು ವಿವರಿಸಲಾಯಿತು. ಬರುವ ದಿನಗಳಲ್ಲಿ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಲು, ನಮ್ಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಅಮಿತ್ ಶಾ ಮಾರ್ಗದರ್ಶನ ನೀಡಿದರು ಎಂದು ಅವರು ಹೇಳಿದರು.
ಬಳ್ಳಾರಿ ಚಲೋ ಸೇರಿದಂತೆ ರಾಜ್ಯದಲ್ಲಿ ಪಕ್ಷ ಸಂಘಟನೆಯ ಚಟುವಟಿಗಳ ಕುರಿತು ಅಮಿತ್ ಶಾ ಮೆಚ್ಚುಗೆ ವ್ಯಕ್ತಪಡಿಸಿದರು. 2028ರಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿಯ ಜನಪರ ಸರ್ಕಾರವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಸಂಘಟಿತ ಹೋರಾಟ ಹಾಗೂ ಜನಜಾಗೃತಿ ಮೂಡಿಸಲು ತಿಳಿಸಿದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.