ರಾಜಕೀಯ ವಿರೋಧಿಗಳ ಮಣಿಸಲು ಇಡಿ, ಸಿಬಿಐ ಬಿಜೆಪಿಯ ಅಸ್ತ್ರ; ಜರ್ಮನಿಯಲ್ಲಿ ಮೋದಿ ವಿರುದ್ಧ ರಾಹುಲ್ ಗುಡುಗು
ಬಿಜೆಪಿಯು ರಾಜಕೀಯ ವಿರೋಧಿಗಳನ್ನು ಮಣಿಸಲು ಜಾರಿ ನಿರ್ದೇಶನಾಲಯ ಮತ್ತು ಕೇಂದ್ರ ತನಿಖಾ ದಳವನ್ನು ಬಳಸಿಕೊಳ್ಳುತ್ತಿದೆ ಎಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜರ್ಮನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
-
ಬರ್ಲಿನ್: ರಾಜಕೀಯ ವಿರೋಧಿಗಳನ್ನು ಮಣಿಸಲು ಮತ್ತು ಆಡಳಿತ ಪಕ್ಷದವರನ್ನು ರಕ್ಷಿಸಲು ಬಿಜೆಪಿಯು ಜಾರಿ ನಿರ್ದೇಶನಾಲಯ (Enforcement Directorate) ಮತ್ತು ಕೇಂದ್ರ ತನಿಖಾ ದಳಗಳನ್ನು (Central Bureau of Investigation) ಬಳಸುತ್ತಿದೆ ಎಂದು ಕಾಂಗ್ರೆಸ್ ನಾಯಕ (Congress leader) ರಾಹುಲ್ ಗಾಂಧಿ (Rahul Gandhi) ಆರೋಪಿಸಿದರು. ಜರ್ಮನಿಯ (Germany) ಬರ್ಲಿನ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಭಾರತದ ಚುನಾವಣಾ ಯಂತ್ರೋಪಕರಣಗಳು ದೋಷಪೂರಿತವಾಗಿವೆ ಎಂದರು. ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಬಿಜೆಪಿ ಖಂಡಿಸಿದ್ದು, ಅವರು ದೇಶ ವಿರೋಧಿ ಹೇಳಿಕೆಗಳನ್ನು ನೀಡುತ್ತಿದೆ ಎಂದು ಆರೋಪಿಸಿದೆ.
ಐದು ದಿನಗಳ ಜರ್ಮನಿ ಪ್ರವಾಸದಲ್ಲಿ ಹರ್ಟೀ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ದೇಶದ ಸಾಂಸ್ಥಿಕ ಚೌಕಟ್ಟನ್ನು ಬಿಜೆಪಿಯು ಆಯುಧವಾಗಿ ಬಳಸುತ್ತಿದೆ. ಗುಪ್ತಚರ ಸಂಸ್ಥೆಗಳು, ಇಡಿ ಮತ್ತು ಸಿಬಿಐ ಅನ್ನು ಶಸ್ತ್ರಾಸ್ತ್ರಗಳಾಗಿ ಬಳಸಲಾಗಿದೆ. ಇಡಿ ಮತ್ತು ಸಿಬಿಐಯಲ್ಲಿ ಬಿಜೆಪಿ ವಿರುದ್ಧ ಯಾವುದೇ ಪ್ರಕರಣಗಳಿಲ್ಲ. ಹೆಚ್ಚಿನ ರಾಜಕೀಯ ಪ್ರಕರಣಗಳು ಅವರನ್ನು ವಿರೋಧಿಸುವ ಜನರ ವಿರುದ್ಧ ದಾಖಲಾಗಿವೆ ಎಂದು ತಿಳಿಸಿದರು.
Lokayukta Raid: ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್, ನಾಲ್ಕು ಜಿಲ್ಲೆಗಳಲ್ಲಿ ದಾಳಿ
ಯಾವುದೇ ಉದ್ಯಮಿ ಕಾಂಗ್ರೆಸ್ ಅನ್ನು ಬೆಂಬಲಿಸಿದರೆ ಅವರಿಗೆ ಬೆದರಿಕೆ ಹಾಕಲಾಗುತ್ತದೆ ಎಂದು ದೂರಿದ ಅವರು, ಜಾರಿ ನಿರ್ದೇಶನಾಲಯ ಮತ್ತು ಕೇಂದ್ರ ತನಿಖಾ ದಳ ಇನ್ನು ಮುಂದೆ ಕಾರ್ಯನಿರ್ವಹಿಸಬೇಕಾಗಿಲ್ಲ. ಇದನ್ನು ನಿರ್ಮಿಸಲು ಕಾಂಗ್ರೆಸ್ ಸಹಾಯ ಮಾಡಿತು. ಆದರೆ ಎಂದಿಗೂ ಅದು ಇವುಗಳನ್ನು ತನ್ನ ಸ್ವಂತ ಸಂಸ್ಥೆ ಎಂದು ನೋಡಲಿಲ್ಲ. ಅದು ದೇಶದ ಸಂಸ್ಥೆ ಎನ್ನುವಂತೆ ನೋಡಿತ್ತು. ಆದರೆ ಬಿಜೆಪಿ ಇವುಗಳನ್ನು ತಮ್ಮದು ಎಂದು ತಿಳಿದುಕೊಂಡಿದ್ದಾರೆ. ತಮ್ಮ ರಾಜಕೀಯ ಶಕ್ತಿಯನ್ನು ನಿರ್ಮಿಸಲು ಒಂದು ಸಾಧನವಾಗಿ ಬಳಸುತ್ತಿದ್ದಾರೆ ಎಂದರು.
#WATCH | Berlin, Germany | Lok Sabha LoP Rahul Gandhi says, "There is a wholesale capture of our institutional framework. Our intelligence agencies, ED and CBI have been weaponised. ED and CBI have zero cases against BJP and most of the political cases are against the people who… pic.twitter.com/ffaoEamAPI
— ANI (@ANI) December 22, 2025
ಪ್ರಜಾಪ್ರಭುತ್ವದ ಮೇಲೆ ದಾಳಿಯಾಗುತ್ತಿದೆ. ಅದನ್ನು ಎದುರಿಸುವ ಅಗತ್ಯವಿದೆ. ನಾವು ಬಿಜೆಪಿ ವಿರುದ್ಧ ಹೋರಾಡುತ್ತಿಲ್ಲ, ಬದಲಾಗಿ ಭಾರತೀಯ ಸಾಂಸ್ಥಿಕ ರಚನೆಯನ್ನು ವಶಪಡಿಸಿಕೊಳ್ಳುವುದಕ್ಕಾಗಿ ಹೋರಾಡುತ್ತಿದ್ದೇವೆ ಎಂದು ತಿಳಿಸಿದರು.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಬಗ್ಗೆ ವಾಗ್ದಾಳಿ ನಡೆಸಿದ ಅವರು, 2024 ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಅಕ್ರಮ ನಡೆದಿದೆ. ಮಹಾರಾಷ್ಟ್ರ ಚುನಾವಣೆಗಳು ನ್ಯಾಯಯುತವಾಗಿ ನಡೆದಿಲ್ಲ. ಹರಿಯಾಣದಲ್ಲಿ ಕಾಂಗ್ರೆಸ್ ಗೆದ್ದಿತ್ತು. ಇದಕ್ಕೆ ಪುರಾವೆಗಳಿವೆ ಎಂದು ಅವರು, ಮತದಾರರ ಪಟ್ಟಿಗಳಲ್ಲಿನ ಅಕ್ರಮಗಳ ಕುರಿತು ಚುನಾವಣಾ ಆಯೋಗದಿಂದ ಉತ್ತರಗಳನ್ನು ಕೇಳಿದ್ದೇನೆ. ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.ಭಾರತದಲ್ಲಿ ಚುನಾವಣಾ ಯಂತ್ರೋಪಕರಣಗಳಲ್ಲಿ ಸಮಸ್ಯೆ ಇದೆ ಎಂದು ದೂರಿದರು.
ಪ್ರಧಾನಿ ನರೇಂದ್ರ ಮೋದಿಯವರ ಆರ್ಥಿಕ ಮಾದರಿ ವಿರುದ್ದವೂ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನೀತಿಗಳನ್ನು ಬಿಜೆಪಿ ವಿಸ್ತರಿಸುತ್ತಿವೆ ಎಂದು ತಿಳಿಸಿದರು.
Shivraj Singh Chouhan Column: ಗ್ರಾಮೀಣ ಭಾರತದ ಸಬಲೀಕರಣಕ್ಕಾಗಿ ಉದ್ಯೋಗ ಖಾತರಿ
ರಾಹುಲ್ ಗಾಂಧಿ ಹೇಳಿಕೆಗೆ ಮಂಗಳವಾರ ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ಪ್ರತಿಕ್ರಿಯಿಸಿದ್ದು, ಈ ಕುರಿತು ಸಾಮಾಜಿಕ ಮಾಧ್ಯಮವಾದ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಭಾರತವನ್ನು ನಿಜವಾಗಿಯೂ ಪ್ರೀತಿಸುವ ಯಾರಾದರೂ ದೇಶ ವಿಫಲವಾಗಬೇಕೆಂದು ಬಯಸುತ್ತಾರೆಯೇ ಎಂದು ಪ್ರಶ್ನಿಸಿದರು. ರಾಹುಲ್ ಗಾಂಧಿ ಅವರು ಭಾರತ ವಿರೋಧಿ ಶಕ್ತಿಗಳನ್ನು ಒಗ್ಗೂಡಿಸಲು ವಿದೇಶಗಳಿಗೆ ಪ್ರಯಾಣಿಸುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿ, ವಿದೇಶಕ್ಕೆ ಹೋಗಿ ರಾಷ್ಟ್ರದ ವಿರುದ್ಧ ಮಾತನಾಡುವ ಭಾರತ ವಿರೋಧಿ ನಾಯಕ ರಾಹುಲ್ ಗಾಂಧಿ ಎಂದರು.