ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಜನವರಿ 3ರಿಂದ ಎಲ್ಲ ಜಿಲ್ಲೆಗಳಲ್ಲಿ ಫ.ಗು.ಹಳಕಟ್ಟಿ ಜೀವನ-ಸಾಧನೆ ಅಭಿಯಾನ: ಸಚಿವ ಎಂ.ಬಿ. ಪಾಟೀಲ್‌

MB Patil: ವಚನ ಪಿತಾಮಹ ಫ.ಗು.ಹಳಕಟ್ಟಿ ಅವರ ಜೀವನ ಮತ್ತು ಸಾಧನೆ ಕುರಿತ ಅಭಿಯಾನದ ಕಾರ್ಯಕ್ರಮದ ಅಂಗವಾಗಿ ಎಲ್ಲ ಜಿಲ್ಲೆಗಳಲ್ಲಿ ವಿಚಾರ ಸಂಕಿರಣ ಮತ್ತು ಉಪನ್ಯಾಸಗಳು ನಡೆಯಲಿವೆ. ಏಪ್ರಿಲ್ 26ರಂದು ವಿಜಯಪುರದಲ್ಲಿ ಕೊನೆಯ ಜಿಲ್ಲಾ ಮಟ್ಟದ ಸಮಾರಂಭ ನಡೆಯಲಿದೆ. ಅಂತಿಮವಾಗಿ ರಾಜ್ಯ ಮಟ್ಟದ ಕಾರ್ಯಕ್ರಮವು 2027ರ ಮೇ 16ರಂದು ಬೆಂಗಳೂರಿನಲ್ಲಿ ಜರುಗಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

ಜನವರಿ 3ರಿಂದ ಎಲ್ಲ ಜಿಲ್ಲೆಗಳಲ್ಲಿ ಫ.ಗು.ಹಳಕಟ್ಟಿ ಜೀವನ-ಸಾಧನೆ ಅಭಿಯಾನ

-

Profile
Siddalinga Swamy Nov 18, 2026 10:53 PM

ಮೈಸೂರು, ನ.18: ವಚನ ಪಿತಾಮಹ ಫ.ಗು.ಹಳಕಟ್ಟಿ ಅವರ ಜೀವನ ಮತ್ತು ಸಾಧನೆಗಳನ್ನು ಸುತ್ತೂರು ಮಠದ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರಸಾರ ಮಾಡಲಾಗುವುದು. ಇದರ ಅಂಗವಾಗಿ ಮೈಸೂರಿನಲ್ಲಿ 2027ರ ಜ.3ರಂದು ಪ್ರಥಮ ಕಾರ್ಯಕ್ರಮ ನಡೆಯಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ (MB Patil) ತಿಳಿಸಿದ್ದಾರೆ. ಬುಧವಾರ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಚನ ಪಡೆದರು. ಈ ವೇಳೆ ಫ.ಗು.ಹಳಕಟ್ಟಿ ಸಂಪಾದಿತ "ಶಿವಾನುಭವ" ಪತ್ರಿಕೆಯ ಮರುಸಂಪಾದಿತ 6 ಸಂಪುಟಗಳನ್ನು ಶ್ರೀಗಳಿಗೆ ಅವರು ಸಮರ್ಪಿಸಿದರು.

Minister MB Patil

ಕಾರ್ಯಕ್ರಮದ ರೂಪುರೇಷೆಗಳನ್ನು ಸಚಿವರು ಸ್ವಾಮೀಜಿ ಜತೆ ಚರ್ಚೆ ನಡೆಸಿದರು. ಹಳಕಟ್ಟಿ ಅವರ ಜೀವನ ಮತ್ತು ಸಾಧನೆ ಕುರಿತ ಅಭಿಯಾನದ ಕಾರ್ಯಕ್ರಮದ ಅಂಗವಾಗಿ ಎಲ್ಲ ಜಿಲ್ಲೆಗಳಲ್ಲಿ ವಿಚಾರ ಸಂಕಿರಣ ಮತ್ತು ಉಪನ್ಯಾಸಗಳು ನಡೆಯಲಿವೆ. ಏಪ್ರಿಲ್ 26ರಂದು ವಿಜಯಪುರದಲ್ಲಿ ಕೊನೆಯ ಜಿಲ್ಲಾ ಮಟ್ಟದ ಸಮಾರಂಭ ನಡೆಯಲಿದೆ. ಅಂತಿಮವಾಗಿ ರಾಜ್ಯ ಮಟ್ಟದ ಕಾರ್ಯಕ್ರಮವು 2027ರ ಮೇ 16ರಂದು ಬೆಂಗಳೂರಿನಲ್ಲಿ ಜರುಗಲಿದೆ. ಅಂದು, "ಶಿವಾನುಭವ" ಪತ್ರಿಕೆಯ ಎಲ್ಲಾ 35 ಸಂಪುಟಗಳನ್ನು ಲೋಕಾರ್ಪಣೆ ಮಾಡಲಾಗುವುದು ಎಂದು ಅವರು ಮಾಹಿತಿ‌ ನೀಡಿದ್ದಾರೆ.‌

ಏರ್‌ಪೋರ್ಟ್‌ಗೆ ಹೆಬ್ಬಾಳ ಮಾದರಿಯಲ್ಲಿ ಹೊಸ ಫ್ಲೈಓವರ್ ಚಿಂತನೆ: ಸಿಎಂ ಡಿ.ಕೆ. ಶಿವಕುಮಾರ್

ಈ ಸಂದರ್ಭದಲ್ಲಿ ಹಿರಿಯ ವಿದ್ವಾಂಸ ಡಾ.ಕೃಷ್ಣ ಕೊಲ್ಹಾರ ಕುಲಕರ್ಣಿ ಹಾಗೂ ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಪದಾಧಿಕಾರಿಗಳು, ಬೆಂಗಳೂರು ನಗರದ ಮಾಜಿ ಉಪ ಮೇಯರ್ ಸಿ.ಎಸ್. ಪುಟ್ಟರಾಜು, ಮುಖಂಡರಾದ ಮಲ್ಲಿಕಾರ್ಜುನ, ಮಹಾಂತೇಶ ಬಿರಾದರ ಸೇರಿದಂತೆ ಇತರರು ಇದ್ದರು.