ಮತಪತ್ರಕ್ಕೆ ಮಣೆ; ರಾಜ್ಯ ಸರ್ಕಾರದ್ದು ತಂತ್ರಜ್ಞಾನ ವಿರುದ್ಧದ ನಡೆ: ಜೋಶಿ ಕಿಡಿ
Pralhad Joshi: ಇಡೀ ದೇಶವೇ ಆಧುನಿಕ ತಂತ್ರಜ್ಞಾನ ಮತ್ತು ಪ್ರಗತಿಯತ್ತ ಸಾಗುತ್ತಿದೆ. ಆದರೆ ರಾಜ್ಯ ಸರ್ಕಾರ ಚುನಾವಣೆಯಲ್ಲಿ ಮತಪತ್ರ ಬಳಕೆ ಮೂಲಕ ಆಧುನಿಕತೆಯ ವಿರುದ್ಧ ಕಾರ್ಯ ನಿರ್ವಹಿಸುತ್ತಿರುವದು ವಿಷಾದನೀಯ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (ಸಂಗ್ರಹ ಚಿತ್ರ) -
ನವದೆಹಲಿ, ಫೆ. 6: ಚುನಾವಣೆಗಳಲ್ಲಿ ಇವಿಎಂ ಬದಲು ಮತಪತ್ರಕ್ಕೆ ಮಣೆ ಹಾಕುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಆಧುನಿಕತೆ, ತಂತ್ರಜ್ಞಾನ ವಿರುದ್ಧದ ನಡೆ ಅನುಸರಿಸುತ್ತಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಕಿಡಿಕಾರಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸಹ ಮತಪತ್ರಗಳ ಬಳಕೆಗೆ ನಿರ್ಧರಿಸಿರುವುದು ಪ್ರಗತಿ ವಿರುದ್ಧದ ನಿಲುವು ಎಂದು ಅವರು ಖಂಡಿಸಿದ್ದಾರೆ.
ಇಡೀ ದೇಶವೇ ಆಧುನಿಕ ತಂತ್ರಜ್ಞಾನ ಮತ್ತು ಪ್ರಗತಿಯತ್ತ ಸಾಗುತ್ತಿದೆ. ಆದರೆ, ರಾಜ್ಯ ಸರ್ಕಾರ ಚುನಾವಣೆಯಲ್ಲಿ ಮತಪತ್ರ ಬಳಕೆ ಮೂಲಕ ಆಧುನಿಕತೆಯ ವಿರುದ್ಧ ಕಾರ್ಯ ನಿರ್ವಹಿಸುತ್ತಿರುವದು ವಿಷಾದನೀಯ ಎಂದು ಹೇಳಿದ್ದಾರೆ.
ದೇಶಾದ್ಯಂತ ಇವಿಎಂ ಪರಿಚಯದ ಬಳಿಕ ಚುನಾವಣಾ ಅಕ್ರಮಗಳಿಗೆ ಬ್ರೇಕ್ ಬಿದ್ದಿದೆ. ಅದಾಗ್ಯೂ ರಾಜ್ಯ ಕಾಂಗ್ರೆಸ್ ಸರ್ಕಾರ, ತನ್ನ ಹೈಕಮಾಂಡ್ ಅನ್ನು ಮೆಚ್ಚಿಸಲು ಈ ರೀತಿ ವಿರೋಧಿ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಎಂದರೆ 3 ಸಿ: ಕೈ ಪಕ್ಷಕ್ಕೆ ಹೊಸ ವ್ಯಾಖ್ಯಾನ ನೀಡಿದ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ
ರಾಜ್ಯಕ್ಕೆ ಕೇಂದ್ರದಿಂದ ಬಂಪರ್ ಕೊಡುಗೆ; ಕರ್ನಾಟಕಕ್ಕೆ ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್ ಸಾಧ್ಯತೆ
ನವದೆಹಲಿ: ಇತ್ತೀಚೆಗೆ ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ ದೇಶದಲ್ಲಿ ಒಟ್ಟು ಏಳು ಹೈ ಸ್ಪೀಡ್ ರೈಲು ಕಾರಿಡಾರ್ ನಿರ್ಮಿಸುವುದಾಗಿ ಘೋಷಿಸಲಾಗಿದೆ. ಈ ಮಧ್ಯೆ ಕೇಂದ್ರ ಸರ್ಕಾರದಿಂದ ಇದೀಗ ಕರ್ನಾಟಕಕ್ಕೆ ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್ ಕೊಡುಗೆಯ ಶುಭ ಸೂಚನೆ ಸಿಕ್ಕಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಅವರ ಒತ್ತಾಸೆ ಮೇರೆಗೆ ಕರ್ನಾಟಕದಲ್ಲಿ ಬೆಂಗಳೂರು ಮತ್ತು ಪುಣೆ ನಡುವೆ ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್‌ಗೆ ಚಿಂತನೆ ನಡೆದಿದ್ದು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಪ್ರಲ್ಹಾದ್ ಜೋಶಿ ಭೇಟಿ, ಮನವಿ
ಬೆಂಗಳೂರು ಮತ್ತು ಪುಣೆ ನಡುವೆ ಹೈ ಸ್ಪೀಡ್ ರೈಲು ಕಾರಿಡಾರ್ ನಿರ್ಮಾಣಕ್ಕಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಬುಧವಾರ ಬೆಳಗ್ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದು, ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಜೋಶಿ ತಿಳಿಸಿದ್ದಾರೆ.
ಬೆಂಗಳೂರು-ಪುಣೆ ಮಧ್ಯೆ ಹೈ ಸ್ಪೀಡ್ ರೈಲು ಕಾರಿಡಾರ್ ನಿರ್ಮಾಣವಾದಲ್ಲಿ ಕರ್ನಾಟಕದ ಬಹುತೇಕ ಪ್ರದೇಶದ ಒಟ್ಟಾರೆ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಅವರು ರೈಲ್ವೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಹಾಸನ ಮೆಗಾ ಡೇರಿ ವಿಸ್ತರಣೆಗೆ 150 ಕೋಟಿ ಸಾಲ ನೀಡಲು ಕೇಂದ್ರ ಸಮ್ಮತಿ
ಈ ರೈಲು ಕಾರಿಡಾರ್ ನಿರ್ಮಾಣದಿಂದ ಮಧ್ಯ ಕರ್ನಾಟಕ ಮತ್ತು ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನ ಆಗಲಿದೆ. ರಾಜ್ಯದ ಬೆಳಗಾವಿ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಅಲ್ಲದೇ ಪುಣೆಯಿಂದ ಕರ್ನಾಟಕದ ಆರೇಳು ಜಿಲ್ಲೆಗಳಿಗೆ ತ್ವರಿತ ಪ್ರಯಾಣ, ಸಂಪರ್ಕ ಸಾಧ್ಯವಾಗಲಿದೆ. ಹಾಗಾಗಿ ಇದೊಂದು ಹೊಸ ಹೈ ಸ್ಪೀಡ್ ರೈಲು ಕಾರಿಡಾರ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಸಚಿವ ಪ್ರಲ್ಹಾದ್ ಜೋಶಿ ಒತ್ತಾಯಿಸಿದ್ದಾರೆ. ಜೋಶಿ ಅವರ ಮನವಿಗೆ ರೈಲ್ವೆ ಸಚಿವರೂ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು, ಭರವಸೆ ನೀಡಿದ್ದಾರೆ.