Chalukya Utsava: ಬಜೆಟ್ ಘೋಷಣೆಯಂತೆ ಚಾಲುಕ್ಯ ಉತ್ಸವ ಆಯೋಜಿಸಲಾಗಿದೆ: ಸಿಎಂ ಸಿದ್ದರಾಮಯ್ಯ
ಬಾದಾಮಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಕೈಗೊಳ್ಳಲಾಗಿತ್ತು. ಇದೇ ಅಭಿವೃದ್ಧಿಯನ್ನು ಈಗಿನ ಶಾಸಕರು ಮುಂದುವರಿಸಿದ್ದಾರೆ ಎಂದು ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
ಬಾದಾಮಿಯಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ. -
ಬಾದಾಮಿ, ಜ.19: 2025-26ರ ಬಜೆಟ್‌ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ (Chalukya Utsav) ಚಾಲನೆ ನೀಡಲು ಸಂತೋಷವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಬಾದಾಮಿಯಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವ ಕಳೆದು ಹತ್ತು ವರ್ಷಗಳಿಂದ ನಡೆದಿರಲಿಲ್ಲ. ಬಜೆಟ್ ಘೋಷಣೆಯಂತೆ ಚಾಲುಕ್ಯ ಉತ್ಸವವನ್ನು ಆಯೋಜಿಸಲಾಗಿದ್ದು, ಸಂತೋಷದಿಂದ ಭಾಗವಹಿಸುತ್ತಿರುವುದು ಎಂದು ಹೇಳಿದರು.
ಈ ಸರ್ಕಾರದ ಅವಧಿಯಲ್ಲಿಯೇ ಬಾದಾಮಿಯ ಆಭಿವೃದ್ಧಿ
ಬಾದಾಮಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಕೈಗೊಳ್ಳಲಾಗಿತ್ತು. ಇದೇ ಅಭಿವೃದ್ಧಿಯನ್ನು ಈಗಿನ ಶಾಸಕರು ಮುಂದುವರಿಸಿದ್ದಾರೆ. ಬಾದಾಮಿ ಕ್ಷೇತ್ರದಲ್ಲಿ ಮೇಣದಬಸದಿಗೆ ಹೋಗುವ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಸಚಿವರು ಕ್ಲಿಯರೆನ್ಸ್ ನೀಡಿದ್ದು, ಯೋಜನೆಯನ್ನು ಶೀಘ್ರದಲ್ಲಿ ಕೈಗೆತ್ತಿಕೊಳ್ಳಲಾಗುವುದು. ನಮ್ಮ ಸರ್ಕಾರದ ಅವಧಿಯಲ್ಲಿಯೇ ಇಲ್ಲಿನ ಆಭಿವೃದ್ಧಿ ಕಾರ್ಯಗಳು ನಡೆಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಕೇಸ್; ವರದಿ ನೀಡುವಂತೆ ಸಿಎಂ ಸೂಚನೆ
ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣಕ್ಕೆ (DGP Ramachandra Rao Case) ಸಂಬಂಧಿಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರಾಮಚಂದ್ರರಾವ್ ತನ್ನ ಕಚೇರಿಯಲ್ಲೇ ಮಹಿಳೆಯರ ಜತೆ ಸರಸವಾಡಿರುವ ವಿಡಿಯೊ ವೈರಲ್ ಆದ ಬೆನ್ನಲ್ಲೇ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.
ಇನ್ನು ಪ್ರಕರಣದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ ಅವರು, ನನಗೆ ಈ ವಿಚಾರ ಬೆಳಗ್ಗೆ ಗೊತ್ತಾಯಿತು. ನಾವು ಈ ಪ್ರಕರಣದ ಬಗ್ಗೆ ತನಿಖೆ ಮಾಡಿಸಿ, ಶಿಸ್ತು ಕ್ರಮ ಕೈಗೊಳ್ಳುತ್ತೇವೆ. ಎಷ್ಟೇ ಉನ್ನತ ಅಧಿಕಾರಿಯಾದರೂ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಿಎಂ ಸೇರಿ 140 ಶಾಸಕರ ಬೆಂಬಲ ನನಗಿದೆ ಎಂದ ಡಿ.ಕೆ. ಶಿವಕುಮಾರ್
ಇನ್ನು ವಿಡಿಯೊ ವೈರಲ್ ಆದ ಬೆನ್ನಲ್ಲೇ ಐಜಿಪಿ ರಾಮಚಂದ್ರ ರಾವ್ ಅವರು ಮಾಧ್ಯಮಗಳ ಮುಂದೆ ಪ್ರತ್ಯಕ್ಷವಾಗಿ, ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಇದು ನನ್ನ ತೇಜೋವಧೆ ಮಾಡಲು ನಡೆಸಿರುವ ವ್ಯವಸ್ಥಿತ ಷಡ್ಯಂತ್ರ ಎಂದು ಅವರು ಆರೋಪಿಸಿದ್ದಾರೆ. ನಾನು ಕೂಡ ಇಂದು ಆ ವಿಡಿಯೋವನ್ನು ನೋಡಿದ್ದೇನೆ. ಅದು ಎಐ ಬಳಸಿ ಸೃಷ್ಟಿಸಿದ ಅಥವಾ ಎಡಿಟ್ ಮಾಡಿದ ವಿಡಿಯೊ ಆಗಿದೆ. ನನ್ನ ವೃತ್ತಿಜೀವನಕ್ಕೆ ಕಪ್ಪುಚುಕ್ಕೆ ತರಲು ಷಡ್ಯಂತ್ರ ನಡೆದಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.