ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಆದಿವಾಸಿ ಮತ್ತು ಅಲೆಮಾರಿ ಆಯೋಗ ರಚನೆಗೆ ಸಿಎಂ ಡಿ.ಕೆ. ಶಿವಕುಮಾರ್ ಆದೇಶ

Adivasi and Nomadic Commission: ಅಲೆಮಾರಿ ಮತ್ತು ಆದಿವಾಸಿ ಆಯೋಗ ರಚನೆ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಬಂದಿದ್ದು, ಒಂದು ತಿಂಗಳಲ್ಲಿ ರಚನೆ ಮಾಡಲಾಗುವುದು ಎಂದು ಆ.11ರಂದು ನಡೆದ ವಿಶ್ವ ಆದಿವಾಸಿ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದರು. ಈ ಘೋಷಣೆ ಮಾಡಿದ ಎರಡು ದಿನಗಳಲ್ಲೇ ಈ ಸಂಬಂಧ ಸಿಎಂ ಆದೇಶ ಹೊರಡಿಸಿದ್ದಾರೆ.

ಆದಿವಾಸಿ ಮತ್ತು ಅಲೆಮಾರಿ ಆಯೋಗ ರಚನೆಗೆ ಸಿಎಂ ಡಿ.ಕೆ. ಶಿವಕುಮಾರ್ ಆದೇಶ

ಸಿಎಂ ಡಿ.ಕೆ.ಶಿವಕುಮಾರ್‌. -

Prabhakara R
Prabhakara R Aug 13, 2026 8:59 PM

ಬೆಂಗಳೂರು, ಆ. 13: ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಆಯೋಗ (Adivasi and nomadic communities Commission) ರಚನೆಗೆ ಸಿಎಂ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಇತ್ತೀಚೆಗಷ್ಟೇ ವಿಶ್ವ ಆದಿವಾಸಿ ದಿನಾಚಾರಣೆ ಕಾರ್ಯಕ್ರಮದಲ್ಲಿ ಈ ವಿಶೇಷ ಆಯೋಗ ರಚನೆಗೆ ಬೇಡಿಕೆ ನೀಡಲಾಗಿತ್ತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಒಂದು ತಿಂಗಳಲ್ಲಿ ಆಯೋಗ ರಚಿಸುವ ವಾಗ್ದಾನ ನೀಡಿದ್ದರು. ಈಗ ಎರಡೇ ದಿನದಲ್ಲಿ ಈ ಆದೇಶ ಹೊರಬಿದ್ದಿದೆ.

ಕರ್ನಾಟಕದಲ್ಲಿ ವಾಸಿಸುತ್ತಿರುವ ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳು ಇಂದಿಗೂ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಲವು ಸವಾಲುಗಳನ್ನು ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಅವರ ಅಭಿವೃದ್ಧಿ, ಹಕ್ಕುಗಳ ರಕ್ಷಣೆ ಹಾಗೂ ಸಾಮಾಜಿಕ ನ್ಯಾಯವನ್ನು ಒದಗಿಸುವ ಸಲುವಾಗಿ ವಿಶೇಷ ಆಯೋಗವನ್ನು ರಚಿಸಲು ಸರ್ಕಾರ ನಿರ್ಧರಿಸಿದೆ.

Gutkha, Pan masala Ban: ಗುಟ್ಕಾ ನಿಷೇಧದಿಂದ ರಾಜ್ಯದ ಅಡಿಕೆ ಬೆಳೆಗಾರರಿಗೆ ತೀವ್ರ ಸಂಕಷ್ಟ; ಆದೇಶ ಹಿಂಪಡೆಯಲು ಶಾಸಕ ಆರಗ ಜ್ಞಾನೇಂದ್ರ ಆಗ್ರಹ

ಉತ್ತಮ ಶಿಕ್ಷಣ, ಪೌಷ್ಟಿಕ ಆಹಾರ, ಗುಣಮಟ್ಟದ ಆರೋಗ್ಯ ಸೇವೆ, ವಸತಿ, ಕುಡಿಯುವ ನೀರು, ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವುದರ ಜೊತೆಗೆ, ಯುವಜನರಿಗೆ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗಾವಕಾಶಗಳನ್ನು ಕಲ್ಪಿಸುವುದೇ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಬದುಕಿನಲ್ಲಿ ಹೊಸ ಭರವಸೆ ಮೂಡಿಸುವುದರ ಜೊತೆಗೆ ಸಮಾನ ಅವಕಾಶಗಳನ್ನು ಒದಗಿಸಲು ಬದ್ಧವಾಗಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.