CM Siddaramaiah: ಭಯೋತ್ಪಾದನೆ ಮೂಲದಿಂದಲೇ ನಾಶವಾಗಬೇಕು: ಸಿದ್ದರಾಮಯ್ಯ
CM Siddaramaiah: ಅನಿವಾರ್ಯವಾದರೆ ಪಾಕಿಸ್ತಾನದ ಮೇಲೆ ಯುದ್ಧ ಮಾಡಬೇಕು. ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಭಯೋತ್ಪಾದನೆ ಮೂಲದಿಂದಲೇ ನಾಶವಾಗಬೇಕು. ಎಲ್ಲರಿಗೂ ಭದ್ರತೆಯನ್ನು ಕೇಂದ್ರ ಸರ್ಕಾರ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಾಗಲಕೋಟೆಯ ಕೂಡಲ ಸಂಗಮ ಸಭಾಭವನದ ಬಳಿ ಅವರು ಮಾತನಾಡಿದರು.


ಬಾಗಲಕೋಟೆ: ಅನಿವಾರ್ಯವಾದರೆ ಪಾಕಿಸ್ತಾನದ ಮೇಲೆ ಯುದ್ಧ ಮಾಡಬೇಕು. ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಭಯೋತ್ಪಾದನೆ ಮೂಲದಿಂದಲೇ ನಾಶವಾಗಬೇಕು. ಎಲ್ಲರಿಗೂ ಭದ್ರತೆಯನ್ನು ಕೇಂದ್ರ ಸರ್ಕಾರ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಕೂಡಲ ಸಂಗಮ ಸಭಾಭವನದ ಬಳಿ ಬುಧವಾರ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಹಿಂದೆ ಇಂದಿರಾ ಗಾಂಧಿ ಅವರು 1971ರಲ್ಲಿ ಯುದ್ಧ ಮಾಡಿ ಪಾಕಿಸ್ತಾನವನ್ನು ಬಗ್ಗು ಬಡಿದಿದ್ದರು. ಪಾಕಿಸ್ತಾನದ ಸುಮಾರು 80 ಸಾವಿರ ಸೈನಿಕರು ಶರಣಾಗಿದ್ದರು ಎಂದು ಹೇಳಿದರು.
ಸಾಮಾಜಿಕ ನ್ಯಾಯ ಒದಗಿಸಲು ಸಾಮಾಜಿಕ, ಆರ್ಥಿಕ ಸಮೀಕ್ಷೆ ಮುಖ್ಯ
ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಜಾತಿ ಗಣತಿ ಆಗಬೇಕೆಂದು ಹೇಳಿದ್ದು, ಕೇಂದ್ರ ಸರ್ಕಾರ ಜಾತಿ ಗಣತಿ ಮಾಡುತ್ತಾರೋ ಅಥವಾ ಸಾಮಾಜಿಕ, ಆರ್ಥಿಕ ಸಮೀಕ್ಷೆ ಮಾಡುತ್ತಾರೋ ತಿಳಿದಿಲ್ಲ. ಕೇಂದ್ರ ಸರ್ಕಾರ ಜಾತಿ ಮತ್ತು ಜನಗಣತಿ ಮಾಡುವುದಾಗಿ ಹೇಳಿದೆ. ಸಾಮಾಜಿಕ ನ್ಯಾಯ ಒದಗಿಸಲು ಸಾಮಾಜಿಕ, ಆರ್ಥಿಕ ಸಮೀಕ್ಷೆಯಾಗಬೇಕಿರುವುದು ಬಹಳ ಮುಖ್ಯ ಎಂದರು.
ಈ ಸುದ್ದಿಯನ್ನೂ ಓದಿ | Karnataka Weather: ರಾಜ್ಯಾದ್ಯಂತ ಮುಂದಿನ 5 ದಿನ ಅಬ್ಬರಿಸಲಿದೆ ಗುಡುಗು ಸಹಿತ ಮಳೆ
ಸಾಮಾಜಿಕ, ಶೈಕ್ಷಣಿಕ ಆರ್ಥಿಕ ಸಮೀಕ್ಷೆಯನ್ನು ಸಚಿವ ಸಂಪುಟದಲ್ಲಿ ಮಂಡಿಸಲಾಗಿದ್ದು, ಈ ಬಗ್ಗೆ ಸಚಿವರು ಲಿಖಿತವಾಗಿ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದು, ಅದು ಸಲ್ಲಿಕೆಯಾದ ನಂತರ ಪುನಃ ಸಚಿವ ಸಂಪುಟ ಕರೆದು ಚರ್ಚೆ ಮಾಡುತ್ತೇವೆ ಎಂದರು.