ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Aarogya Setu Mobile Health Unit: ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಳಗಾವಿಯಲ್ಲಿ ‘ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕʼ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಸಮಾಜದ ಪ್ರತಿಯೊಬ್ಬ ನಾಗರಿಕರಿಗೂ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ಜಾರಿಗೊಳಿಸಲಾಗಿದೆ. ಆರೋಗ್ಯ ಸೇವೆಗಳಿಂದ ವಂಚಿತರಾಗಿರುವ ಜನರಿಗೆ ಈ ಯೋಜನೆಯಿಂದ ಲಾಭವಾಗಲಿದೆ ಎಂದು ತಿಳಿಸಿದ್ದಾರೆ.

ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

‘ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕʼ ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು -

Profile
Siddalinga Swamy Dec 19, 2025 5:23 PM

ಬೆಳಗಾವಿ, ಡಿ.19: ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾಡಳಿತ ಬೆಳಗಾವಿ ಜಿಲ್ಲಾ ಪಂಚಾಯತ್ ವತಿಯಿಂದ ಶುಕ್ರವಾರ ಸುವರ್ಣ ಸೌಧದ ಭವ್ಯ ಮೆಟ್ಟಲುಗಳ ಮೇಲೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ‘ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕʼ ಗಳಿಗೆ ಚಾಲನೆ ನೀಡಿ ಸಿಎಂ ಅವರು ಮಾತನಾಡಿದರು.

ಸಂಪರ್ಕ ರಹಿತ, ದುರ್ಗಮ ಮತ್ತು ಗುಡ್ಡಗಾಡು ಪ್ರದೇಶಗಳ ಜನರ ಮನೆಯ ಬಾಗಿಲಲ್ಲೆ ಆರೋಗ್ಯ ಸೇವೆ ನೀಡುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಹಿಂದೆ ಆ್ಯಂಬುಲೆನ್ಸ್‌ಗಳ ಸೇವೆಗೆ 2.90 ಲಕ್ಷ ರೂ.ಗಳ ವೆಚ್ಚವಾಗುತ್ತಿತ್ತು. ಪ್ರಸ್ತುತ ಆರೋಗ್ಯ ಸೇತುವಿನ ಪ್ರತಿ ಘಟಕಕ್ಕೆ 1.60 ಲಕ್ಷ ರೂ. ವೆಚ್ಚವಾಗಲಿದ್ದು, ಪ್ರತಿ ಘಟಕದಲ್ಲಿ ವೈದ್ಯರು, ಶುಶ್ರೂಷಿಕಿಯರು, ತಂತ್ರಜ್ಞರ ಸೇವೆ ಇರಲಿದ್ದು, ರೋಗಿಗಳ ತಪಾಸಣೆ ಮತ್ತು ಚಿಕಿತ್ಸೆಗೆ ನೆರವಾಗಲಿದೆ ಎಂದು ಹೇಳಿದರು.

ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಸೇವೆ ಸರ್ಕಾರದ ಗುರಿ

ಸಮಾಜದ ಪ್ರತಿಯೊಬ್ಬ ನಾಗರಿಕರಿಗೂ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ಜಾರಿಗೊಳಿಸಲಾಗಿದೆ. ಆರೋಗ್ಯ ಸೇವೆಗಳಿಂದ ವಂಚಿತರಾಗಿರುವ ಜನರಿಗೆ ಈ ಯೋಜನೆಯಿಂದ ಲಾಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ತಲಾದಾಯದಲ್ಲಿ ಬೆಂಗಳೂರು ನಗರ ಜಿಲ್ಲೆ ಪ್ರಥಮ, ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ

ಹಾಲಿನ ಪ್ರೋತ್ಸಾಹಧನ 7 ರೂ.ಗೆ ಹೆಚ್ಚಳ: ಸಿಎಂ ಘೋಷಣೆ

ಬೆಳಗಾವಿ, ಡಿ.19: ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್‌ನ್ಯೂಸ್‌ ನೀಡಿದ್ದಾರೆ. ಹಾಲಿನ ಪ್ರೋತ್ಸಾಹಧನ ಹೆಚ್ಚಿಸುವುದಾಗಿ ಚಳಿಗಾಲದ ಅಧಿವೇಶನದಲ್ಲಿ ಸಿಎಂ ಘೋಷಿಸಿದ್ದು, ಸದ್ಯ ಪ್ರತಿ ಲೀಟರ್‌ ಹಾಲಿಗೆ ನೀಡುತ್ತಿರುವ 5 ರೂ. ಪ್ರೋತ್ಸಾಹ ಧನವನ್ನು (Milk Incentive) ಈ ಅವಧಿಯಲ್ಲಿ 7 ರೂ.ಗೆ ಹೆಚ್ಚಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ರೈತರಿಗೆ ಪ್ರೋತ್ಸಾಹಧನ ಸಂಪೂರ್ಣವಾಗಿ ತಲುಪುತ್ತಿಲ್ಲ ಎಂಬ ಆರೋಪಕ್ಕೆ ಸ್ಪಷ್ಟನೆ ನೀಡಿದ ಸಿಎಂ ಅವರು, ಬೆಲೆ ಏರಿಕೆಯ ಹೊರತಾಗಿಯೂ ಸರ್ಕಾರದಿಂದ ನೆರವು ಮುಂದುವರಿಯುತ್ತಲೇ ಇರುತ್ತದೆ ಎಂದು ಭರವಸೆ ನೀಡಿದ್ದಾರೆ.

ತಮ್ಮ ಸರ್ಕಾರದ ಹಿಂದಿನ ಅವಧಿ (2013-18) ಪ್ರಣಾಳಿಕೆಯ ಭರವಸೆಗಳನ್ನು ಪ್ರಸ್ತಾಪಿಸಿ, 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಲಾಗಿದೆ. ಬಜೆಟ್‌ನಲ್ಲಿ ಘೋಷಿಸದ 30 ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂಬುದನ್ನು ಕೂಡ ವಿವರಿಸಿದರು. ಪ್ರಸ್ತುತ (2023ರ ನಂತರ) ಪ್ರಣಾಳಿಕೆಯಲ್ಲಿನ 593 ಭರವಸೆಗಳಲ್ಲಿ 293 ಭರವಸೆಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ. ಉಳಿದ ಭರವಸೆಗಳನ್ನು ಮುಂದಿನ ಮೂರು ಬಜೆಟ್‌ಗಳಲ್ಲಿ ಜಾರಿಗೆ ತರಲು ತಂತ್ರ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

ಬಾಕಿ ಪ್ರೋತ್ಸಾಹ ಧನ ಶೀಘ್ರ ಬಿಡುಗಡೆ

ಆರ್. ಅಶೋಕ್ ಅವರು ಹಾಲು ಉತ್ಪಾದಕರಿಗೆ ಹಾಲಿನ ಪ್ರೋತ್ಸಾಹ ಧನ ಕೊಟ್ಟಿಲ್ಲ ಎಂದು ಹೇಳಿದ್ದಾರೆ. ಇದು ಪೂರ್ತಿ ನಿಜವಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೈತರ ಹಾಲಿನ ದರವನ್ನು ಎರಡು ಬಾರಿ ಹೆಚ್ಚಿಸಿದ್ದೇವೆ. ಒಮ್ಮೆ ಮೂರು ರೂಪಾಯಿ, ಮತ್ತೊಮ್ಮೆ 4 ರೂಪಾಯಿ. ಇದರ ಜತೆಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಾಕಿಯಿದ್ದ 630 ಕೋಟಿ ರೂಪಾಯಿಗಳನ್ನೂ ರೈತರಿಗೆ ನೀಡಿದ್ದೇವೆ. 2023-24 ರಿಂದ 2025-26 ರವರೆಗೆ 4048 ಕೋಟಿ ರೂಪಾಯಿಗಳನ್ನು ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಿದ್ದೇವೆ. ಅಕ್ಟೋಬರ್ ಮತ್ತು ನವೆಂಬರ್ ತಿಂಗಳ ಪ್ರೋತ್ಸಾಹಧನ ಮಾತ್ರ ಬಾಕಿ ಇದೆ. ಬಾಕಿ ಇರುವ ಶೀಘ್ರವಾಗಿ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದರು.

2013-14 ರಲ್ಲಿ ನಮ್ಮ ಸರ್ಕಾರ ಕ್ಷೀರಧಾರೆ ಯೋಜನೆಯನ್ನು ಜಾರಿಗೆ ತಂದು, 3 ರೂ. ಇದ್ದ ಪ್ರೋತ್ಸಾಹ ಧನವನ್ನು 5 ರೂ.ಗೆ ಹೆಚ್ಚಿಸಿತ್ತು. ಅದನ್ನು 7 ರೂಗಳಿಗೆ ಹೆಚ್ಚಿಸುತ್ತೇವೆ ಎಂದು ಹೇಳಿದ್ದೇವೆ. ಮುಂದಿನ ದಿನಗಳಲ್ಲಿ ಅದನ್ನೂ ಮಾಡುತ್ತೇವೆ. ನಾವು ಇದನ್ನೆಲ್ಲ ಮಾಡಿದ ಕಾರಣಕ್ಕಾಗಿಯೇ ಹಾಲಿನ ಉತ್ಪಾದನೆ ಬಿಜೆಪಿ ಸರ್ಕಾರದ ಅವಧಿಗಿಂತ ಸುಮಾರು 25-30 ಲಕ್ಷ ಲೀಟರುಗಳಷ್ಟು ಹಾಲನ್ನು ಪ್ರತಿ ದಿನ ರೈತರು ನಮ್ಮ ಡೈರಿಗಳಿಗೆ ಕೊಡುತ್ತಿದ್ದಾರೆ. ಬಿಜೆಪಿ ಅವಧಿಯಲ್ಲಿ 75 ಲಕ್ಷ ಲೀಟರುಗಳಿಗೆ ಇಳಿದಿದ್ದ ಹಾಲಿನ ಸಂಗ್ರಹ ಈಗ 1.05 ಕೋಟಿ ಲೀಟರುಗಳ ವರೆಗೆ ಏರಿಕೆಯಾಗಿದೆ.