CM Siddaramaiah: ರಾಜ್ಯದಿಂದ ಪಾಕಿಸ್ತಾನದ ಪ್ರಜೆಗಳು ಗಡಿಪಾರು- ಸಿದ್ದರಾಮಯ್ಯ
CM Siddaramaiah: ಪಾಕಿಸ್ತಾನದ ಪ್ರಜೆಗಳನ್ನು ಗಡಿಪಾರು ಮಾಡಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗಡಿಪಾರು ಮಾಡಲಾಗಿದೆ. ಮೈಸೂರಿನಲ್ಲಿ ಇರುವವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಂಥವರು ಮಾತ್ರ ಉಳಿದುಕೊಂಡಿರುವುದು ಬಿಟ್ಟರೆ ಬಹುತೇಕ ಎಲ್ಲರೂ ಗಡೀಪಾರು ಆಗಿದ್ದಾರೆ. ಎಷ್ಟು ಜನ ಉಳಿದಿದ್ದಾರೆ ಎಂಬ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.


ಮಂಡ್ಯ: ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ದಾಳಿ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಮದ್ದೂರು ಕಾಫಿ ಡೇ ಹತ್ತಿರದ ಗೆಜ್ಜಲಗೆರೆ ಹೆಲಿಪ್ಯಾಡ್ ಬಳಿ ಇಂದು ಮಾಧ್ಯಮವದರೊಂದಿಗೆ ಮಾತನಾಡಿದ ಅವರು, ಅಣೆಕಟ್ಟುಗಳ ಸುರಕ್ಷತೆಯ ದೃಷ್ಟಿಯಲ್ಲಿ ಎಲ್ಲೆಡೆ ಎಚ್ಚರಿಕೆ ನೀಡಲಾಗಿದ್ದು, ಯಾವ ಘಳಿಗೆಯಲ್ಲಿ ಏನಾದರೂ ಆಗಬಹುದು ಎಂದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಪೂಜೆ ಮಾಡುವ ಬಗ್ಗೆ ಸಚಿವ ರಾಮಲಿಂಗಾರೆಡ್ಡಿಯವರೊಂದಿಗೆ ಮಾತನಾಡಿ ಕ್ರಮ ತೆಗೆದುಕೊಂಡಿದ್ದಾರೆ ಎಂದು ಅವರು ತಿಳಿಸಿದರು.
ಮೈಸೂರಿನಲ್ಲಿ ಇರುವವರು ನ್ಯಾಯಾಲಯದ ಮೊರೆ ಹೋಗಿದ್ದಾರೆ
ಪಾಕಿಸ್ತಾನದ ಪ್ರಜೆಗಳನ್ನು ಗಡಿಪಾರು ಮಾಡಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗಡಿಪಾರು ಮಾಡಲಾಗಿದೆ. ಮೈಸೂರಿನಲ್ಲಿ ಇರುವವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಂಥವರು ಮಾತ್ರ ಉಳಿದುಕೊಂಡಿರುವುದು ಬಿಟ್ಟರೆ ಬಹುತೇಕ ಎಲ್ಲರೂ ಗಡೀಪಾರು ಆಗಿದ್ದಾರೆ. ಎಷ್ಟು ಜನ ಉಳಿದಿದ್ದಾರೆ ಎಂಬ ಮಾಹಿತಿ ಇಲ್ಲ ಎಂದು ಹೇಳಿದರು.
ಈ ಸುದ್ದಿಯನ್ನೂ ಓದಿ | Operation Sindoor: 'ಸಿಂದೂರʼದ ಸಂದೇಶ ದೇಶದ ಮುಂದಿಟ್ಟ ಸೇನಾಧಿಕಾರಿ ಸೋಫಿಯಾ ಖುರೇಷಿ ಕರ್ನಾಟಕದ ಸೊಸೆ!