ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

BY Vijayendra: ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಪಕ್ಷ ಹುನ್ನಾರ: ಬಿ.ವೈ. ವಿಜಯೇಂದ್ರ ಆರೋಪ

BY Vijayendra: ನೀಟ್ ವಿಚಾರದಲ್ಲಿ ಯುವಕರನ್ನು ಬೀದಿಗೆ ತರುವುದನ್ನು ಬಿಟ್ಟು ಷಡ್ಯಂತ್ರ ಮಾಡದೇ ಸಂಸತ್ತಿನಲ್ಲಿ ಚರ್ಚೆಗೆ ಬರಬೇಕು ಎಂದು ಒತ್ತಾಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ದೇಶದಲ್ಲಿ ಅರಾಜಕತೆ ಸೃಷ್ಟಿ ಮಾಡಲು ಕಾಂಗ್ರೆಸ್ ಪಕ್ಷ ಹುನ್ನಾರ ನಡೆಸುತ್ತಿದೆ, ಇದು ಖಂಡಿತ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಪಕ್ಷ ಹುನ್ನಾರ: ವಿಜಯೇಂದ್ರ

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಮಾತನಾಡಿದರು. -

Profile
Siddalinga Swamy Jul 23, 2026 7:21 PM

ಬೆಂಗಳೂರು, ಜು.23: ನೀಟ್ ವಿಚಾರದಲ್ಲಿ ಚರ್ಚೆಗೆ ಸಿದ್ಧವೆಂದು ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ತಿಳಿಸಿದ್ದರೂ ಕಾಂಗ್ರೆಸ್ ಪಕ್ಷ ತನ್ನ ರಾಜಕೀಯ ಬೇಳೆ ಬೇಯಿಸಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಪ್ರತಿಭಟನೆಗೆ ಮುಂದಾಗಿದ್ದ ಬಿಜೆಪಿ ಶಾಸಕರ ಮೇಲೆ ನಿನ್ನೆ ನಡೆದ ಹಲ್ಲೆಯನ್ನು ಖಂಡಿಸಿ ಪಕ್ಷದ ವತಿಯಿಂದ ಗುರುವಾರ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ವೇಳೆ ಮಾತನಾಡಿದ ಅವರು, ನಿನ್ನೆ ಶಾಸಕರ ಮೇಲೆ ಹಲ್ಲೆ ನಡೆದಿದೆ. ಶಾಸಕರ ಮೇಲೆ ಹಲ್ಲೆ ಮಾಡಿಸಿದ ನಾಲಾಯಕ್ ಕಾಂಗ್ರೆಸ್ ಸರ್ಕಾರ ಇದು ಎಂದು ಟೀಕಿಸಿದರು.

ನೀಟ್ ವಿಚಾರದಲ್ಲಿ ಯುವಕರನ್ನು ಬೀದಿಗೆ ತರುವುದನ್ನು ಬಿಟ್ಟು ಷಡ್ಯಂತ್ರ ಮಾಡದೇ ಸಂಸತ್ತಿನಲ್ಲಿ ಚರ್ಚೆಗೆ ಬರಬೇಕು ಎಂದು ಅವರು ಒತ್ತಾಯಿಸಿದರು. ದೇಶದಲ್ಲಿ ಅರಾಜಕತೆ ಸೃಷ್ಟಿ ಮಾಡಲು ಕಾಂಗ್ರೆಸ್ ಪಕ್ಷ ಹುನ್ನಾರ ನಡೆಸುತ್ತಿದೆ; ಇದು ಖಂಡಿತ ಸಾಧ್ಯವಿಲ್ಲ ಎಂದು ಹೇಳಿದರು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಸಂಸತ್ತಿನಲ್ಲಿ 18 ಗಂಟೆಗಳ ಚರ್ಚೆಗೂ ಸಿದ್ಧ ಎಂದ ಕೇಂದ್ರ ಸರ್ಕಾರ

ಹಿಂಬಾಗಿಲಿನಿಂದ ಅಧಿಕಾರಕ್ಕೆ ಬರಲು ಪ್ರಯತ್ನಿಸುವ ಕಾಂಗ್ರೆಸ್ ಪಕ್ಷವು ಈ ರೀತಿ ಅರಾಜಕತೆ ಸೃಷ್ಟಿಸಿ ಹೇಗಾದರೂ ಆಡಳಿತಕ್ಕೆ ಬರಬೇಕೆಂಬ ಕಪಟ ನಾಟಕವನ್ನು ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದರು.