ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

MLC Elections: ವಿಧಾನ ಪರಿಷತ್‌ ಚುನಾವಣೆ; ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟ

ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‌ನ 7 ಸದಸ್ಯ ಸ್ಥಾನಕ್ಕೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಇತ್ತೀಚೆಗೆ ಅಧಿಸೂಚನೆ ಹೊರಡಿಸಲಾಗಿತ್ತು. ಜೂನ್ 1 ಜೂ.8ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಜೂನ್ 18ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಅಂದು ಸಂಜೆ 5 ಗಂಟೆಯಿಂದ ಮತ ಎಣಿಕೆ ನಡೆಯಲಿದೆ.

ವಿಧಾನ ಪರಿಷತ್‌ ಚುನಾವಣೆ; ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬಿ.ಕೆ. ಹರಿ ಪ್ರಸಾದ್‌, ತಿಮಣ್ಣಪ್ಪ ಕಮಕನೂರ್‌, ಪಿ.ವಿ.ಮೋಹನ್‌, ಶಿವಣ್ಣ ಮಳವಳ್ಳಿ -

Prabhakara R
Prabhakara R Jun 3, 2026 10:18 PM

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ (MLC Elections) ಕಾಂಗ್ರೆಸ್‌ನ ನಾಲ್ಕು ಅಭ್ಯರ್ಥಿಗಳನ್ನು ಹೈಕಮಾಂಡ್‌ ಪ್ರಕಟಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಾಲ್ವರು ಅಭ್ಯರ್ಥಿಗಳ ಹೆಸರನ್ನು ಅನುಮೋದಿಸಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್‌, ಉತ್ತರ ಕರ್ನಾಟಕ ಭಾಗದ ಪ್ರಭಾವಿ ನಾಯಕ ತಿಪ್ಪಣ್ಣಪ್ಪ ಕಮಕನೂರ್, ಪಿ.ವಿ. ಮೋಹನ್, ಶಿವಣ್ಣ ಮಳವಳ್ಳಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗಿದೆ.

ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‌ನ 7 ಸದಸ್ಯ ಸ್ಥಾನಕ್ಕೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಇತ್ತೀಚೆಗೆ ಅಧಿಸೂಚನೆ ಹೊರಡಿಸಲಾಗಿತ್ತು. ಜೂನ್ 1 ಜೂ.8ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಚುನಾವಣಾ ಸ್ಪರ್ಧೆಯಲ್ಲಿ 7ಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದರೆ ಜೂನ್ 18ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಅಂದು ಸಂಜೆ 5 ಗಂಟೆಯಿಂದ ಮತ ಎಣಿಕೆ ನಡೆಯಲಿದೆ.

ಜೂ.9 ರಂದು ನಾಮಪತ್ರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಂದು ಸಂಜೆ ವೇಳೆಗೆ ಸಿಂಧುವಾದ ನಾಮಪತ್ರಗಳ ಪ್ರಕಟಣೆ ಹೊರಡಿಸಲಾಗುತ್ತದೆ. ಜೂನ್ 11 ರವರೆಗೆ ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಅವಕಾಶ ನೀಡಲಾಗಿಎ.

7 ಎಂಎಲ್‌ಸಿಗಳ ಅವಧಿ ಅಂತ್ಯ

ವಿಧಾನಪರಿಷತ್‌ ಸದಸ್ಯರಾದ ಗೋವಿಂದರಾಜು (ಕಾಂಗ್ರೆಸ್), ನಾಸಿರ್‌ ಅಹಮದ್‌ (ಕಾಂಗ್ರೆಸ್), ಎಂಟಿಬಿ ನಾಗರಾಜ್‌ (ಬಿಜೆಪಿ), ಪ್ರತಾಪ್‌ ಸಿಂಹ ನಾಯಕ್‌ ಕೆ(ಬಿಜೆಪಿ)., ತಿಪ್ಪಣ್ಣಪ್ಪ (ಕಾಂಗ್ರೆಸ್), ಸುನೀಲ್‌ ವಲ್ಯಾಪುರೆ (ಬಿಜೆಪಿ), ಬಿ.ಕೆ.ಹರಿಪ್ರಸಾದ್‌ (ಕಾಂಗ್ರೆಸ್) ಅವರ ಅವಧಿ ಜೂ. 30 ಮುಗಿಯಲಿದೆ.