Dinesh Gundu Rao: ಮೇ 16ರಂದು ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ: ಅಗತ್ಯ ಸಿದ್ಧತೆ ಕೈಗೊಳ್ಳಿ: ದಿನೇಶ್ ಗುಂಡೂರಾವ್ ಸೂಚನೆ
ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಗುರುವಾರ ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ. ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ಜಿಲ್ಲಾಧಿಕಾರಿ ಸೇರಿದಂತೆ ಪೊಲೀಸ್ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆಯನ್ನು ನಡೆಸಿದರು. ಈ ಕುರಿತ ವಿವರ ಇಲ್ಲಿದೆ.


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಗುರುವಾರ ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ. ಖಾದರ್ (UT Khader) ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರು, ಜಿಲ್ಲಾಧಿಕಾರಿ ಸೇರಿದಂತೆ ಪೊಲೀಸ್ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆಯನ್ನು ನಡೆಸಿದರು. ಜಿಲ್ಲೆಯಲ್ಲಿ ಇತ್ತಿಚೆಗೆ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಪೊಲೀಸರ ಕಾರ್ಯಾಚರಣೆ ಬಗ್ಗೆ ಚರ್ಚೆ ನಡೆಸಿದ ಸಚಿವರು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಯಾವುದೇ ಒತ್ತಡಕ್ಕೆ ಮಣಿಯುವ ಅವಶ್ಯಕತೆ ಇಲ್ಲ. ಸರ್ಕಾರ ನಿಮ್ಮ ಜತೆ ಇದೆ. ಕಾನೂನು ಬಾಹಿರ ಚಟುವಟಿಕೆ ನಡೆಸುವವರು ಹಾಗೂ ಅದಕ್ಕೆ ಉತ್ತೇಜನ ನೀಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು, ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಗಳೂರಿನಲ್ಲಿ ನೂತನ ಜಿಲ್ಲಾಧಿಕಾರಿಗಳ ಕಟ್ಟಡ ಉದ್ಘಾಟನೆ ಕುರಿತಂತೆ ಇದೇ ವೇಳೆ ಚರ್ಚೆ ನಡೆಸಲಾಯಿತು. ಇದೇ ತಿಂಗಳ 16 ರಂದು ನೂತನ ಜಿಲ್ಲಾಧಿಕಾರಿ ಕಚೇರಿಯನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಅಗತ್ಯ ತಯಾರಿಗಳನ್ನು ನಡೆಸುವಂತೆ ಜಿಲ್ಲಾಡಳಿತಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.
ಈ ಸುದ್ದಿಯನ್ನೂ ಓದಿ | Operation Sindoor: 'ಸಿಂದೂರʼದ ಸಂದೇಶ ದೇಶದ ಮುಂದಿಟ್ಟ ಸೇನಾಧಿಕಾರಿ ಸೋಫಿಯಾ ಖುರೇಷಿ ಕರ್ನಾಟಕದ ಸೊಸೆ!
ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮಂಗಳೂರು ಪೊಲೀಸ್ ಕಮಿಷನರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಾಗವಹಿಸಿದ್ದರು.