ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಶೃಂಗೇರಿ ಕ್ಷೇತ್ರದ ಮರುಎಣಿಕೆ: ಕಾನೂನು ಹೋರಾಟ ಮಾಡುತ್ತೇವೆ ಎಂದ ಡಿ.ಕೆ. ಶಿವಕುಮಾರ್

DK Shivakumar: ಶೃಂಗೇರಿ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದಿರುವ ಅಂಚೆ ಮತಗಳನ್ನು ತಿದ್ದುವ ಮೂಲಕ ಮರುಎಣಿಕೆಯಲ್ಲಿ ಅಸಿಂಧುಗೊಳಿಸಲಾಗಿದೆ. ಇಡೀ ದೇಶದಲ್ಲಿ ಇಂತಹ ಅಪರಾಧ ನಡೆದಿಲ್ಲ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಶೃಂಗೇರಿ ಮರುಎಣಿಕೆ: ಕಾನೂನು ಹೋರಾಟ ಮಾಡುತ್ತೇವೆ: ಡಿಕೆಶಿ

ಡಿಸಿಎಂ ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ) -

Profile
Siddalinga Swamy May 5, 2026 3:48 PM

ಬೆಂಗಳೂರು, ಮೇ 5: ಶೃಂಗೇರಿ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದಿರುವ ಅಂಚೆ ಮತಗಳನ್ನು ತಿದ್ದುವ ಮೂಲಕ ಮರುಎಣಿಕೆಯಲ್ಲಿ ಅಸಿಂಧುಗೊಳಿಸಲಾಗಿದೆ. ಇಡೀ ದೇಶದಲ್ಲಿ ಇಂತಹ ಅಪರಾಧ ನಡೆದಿಲ್ಲ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಅವರು ಪ್ರತಿಕ್ರಿಯೆ ನೀಡಿದರು.

ಶೃಂಗೇರಿ ಕ್ಷೇತ್ರದ ಮರುಎಣಿಕೆಯ ಬಗ್ಗೆ ಕೇಳಿದಾಗ, ‘ಚುನಾವಣೆ ಮತ ಎಣಿಕೆ ಸಮಯದಲ್ಲಿ ಪ್ರತಿ ಅಂಚೆ ಮತವನ್ನು ತೆರೆದು ಎರಡೂ ಪಕ್ಷಗಳ ಏಜೆಂಟರು ಹಾಗೂ ಅಧಿಕಾರಿಗಳಿಗೆ ತೋರಿಸಿ ಅದನ್ನು ಮಾನ್ಯ ಮಾಡಿ ಎಣಿಕೆ ಮಾಡಲಾಗಿರುತ್ತದೆ. ಈ ರೀತಿ ಮತ ಎಣಿಕೆ ಮಾಡಿದ ಬಳಿಕ ಬಿಜೆಪಿ ಅಭ್ಯರ್ಥಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಅಂಚೆ ಮತಗಳನ್ನು ತಿದ್ದಲಾಗಿದೆ. ಹೀಗಾಗಿಯೇ ಅವರು ನಿರ್ದಿಷ್ಟ ಮತಗಳ ಬಂಡಲ್ ಅನ್ನೇ ಮರು ಎಣಿಕೆ ಮಾಡಿ ಎಂದು ಪಟ್ಟು ಹಿಡಿದಿದ್ದರು.

ಅಧಿಕಾರಿಗಳು ಹಾಗೂ ಬಿಜೆಪಿ ಅಭ್ಯರ್ಥಿ ಈ ಅಕ್ರಮದಲ್ಲಿ ಭಾಗಿಯಾಗಿದ್ದು, ಗಂಭೀರವಾದ ತನಿಖೆ ನಡೆಯಬೇಕಿದೆ. ಚುನಾವಣಾ ಆಯೋಗವು ಈ ವಿಚಾರದಲ್ಲಿ ನ್ಯಾಯ ಒದಗಿಸಬೇಕಿದೆ. ಇದು ದೇಶದಲ್ಲೇ ಅತಿ ದೊಡ್ಡ ಷಡ್ಯಂತ್ರವಾಗಿದೆ ಎಂದು ಆರೋಪಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಕರ್ನಾಟಕದಲ್ಲಿ ಬಿಜೆಪಿ ಇಂತಹ ಕೆಲಸದಲ್ಲಿ ಭಾಗಿಯಾಗಿದ್ದು, ನಾವು ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ರಾಜಕೀಯ ಹೇಗೆ ಮಾಡಬೇಕು ಎಂದು ನಮಗೆ ಗೊತ್ತಿದೆʼ ಎಂದು ಅವರು ಕಿಡಿಕಾರಿದರು.

ಶೃಂಗೇರಿ ಮರು ಎಣಿಕೆ ಫಲಿತಾಂಶ ಇಡೀ ದೇಶಕ್ಕೇ ಮಾರಕ: ಡಿ.ಕೆ. ಶಿವಕುಮಾರ್

ಬೆಂಗಳೂರು: ಶೃಂಗೇರಿ ಮರು ಎಣಿಕೆ ಫಲಿತಾಂಶವು ಇಡೀ ದೇಶಕ್ಕೇ ಮಾರಕ. ಬಿಜೆಪಿಯಲ್ಲಿ ಇಷ್ಟರಮಟ್ಟಿಗಿನ ಕ್ರಿಮಿನಲ್‌ಗಳಿದ್ದಾರೆ ಎಂದು ನಾನು ಎಣಿಸಿರಲಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಸೋಮವಾರ ಅವರು ಪ್ರತಿಕ್ರಿಯೆ ನೀಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು, ಗೆಲುವು ಸಾಮಾನ್ಯ. ಆದರೆ ಇಲ್ಲಿ ನಡೆದಿರುವುದು ಷಡ್ಯಂತ್ರ. ಅತ್ಯಂತ ಆಘಾತಕಾರಿ ವಿಚಾರ. ನಾವು ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ತನಿಖೆ ಮಾಡಿಸುತ್ತೇವೆ. ಕಾನೂನಾತ್ಮಕವಾಗಿಯೂ ಹೋರಾಟ ಮಾಡುತ್ತೇವೆ ಎಂದು ಹೇಳಿದರು.

ಇದೊಂದು ಅಂತಾರಾಷ್ಟ್ರೀಯ ಸಂಚಿನ ರೀತಿ ನಡೆದಿದೆ. ನಮಗೆ ಅನುಮಾನ ಇದ್ದರೆ ಸುಪ್ರೀಂ ಕೋರ್ಟಿಗೆ ಹೋಗುತ್ತಿದ್ದೆವು. ಇಲ್ಲಿ ಮತ ಎಣಿಕೆ ಬಾಕ್ಸ್‌ಗಳನ್ನು ತೆರೆಯಲಾಗಿದೆ. ಕೆಲವರನ್ನು ಉಪಯೋಗಿಸಿಕೊಂಡು ನಮಗೆ ಮತ ಬಿದ್ದ ಬ್ಯಾಲೆಟ್ ಪೇಪರ್‌ಗಳ ಮೇಲೆ ಮತ್ತೊಂದು ಗುರುತು ಹಾಕಲಾಗಿದೆ. ಎಲ್ಲಾ ಬಂಡಲ್‌ಗಳು ಮಾನ್ಯ ಎಂದು ತೀರ್ಮಾನ ಆದ ಮೇಲೆ ಈ ತಿದ್ದುಪಡಿ ಹೇಗಾಯಿತು ಎಂದರು.

ಇಂತಹವರಿಗೆ ಮತ ಬಿದ್ದಿದೆ ಎಂದು ಪ್ರತಿ ಮತಗಳನ್ನು ಎಲ್ಲರಿಗೂ ತೋರಿಸಿರುತ್ತಾರೆ. ಇದನ್ನು ಕ್ಯಾಮೆರಾದಲ್ಲಿಯೂ ದಾಖಲೀಕರಣ ಮಾಡಿಕೊಳ್ಳಲಾಗಿರುತ್ತದೆ. ಎಲ್ಲಾ ಎಣಿಕೆಯಾದ ಮೇಲೆ ಬಂಡಲ್‌ಗಳನ್ನು ಒಳಗೆ ಹಾಕಿ ಸೀಲ್ ಮಾಡಲಾಗಿರುತ್ತದೆ. ಇದಾದ ನಂತರ ಬಂಡಲ್ ತೆಗೆದು ಮತ್ತೊಂದು ಗುರುತು ಮಾಡಲಾಗಿದೆ. ಈಗ ಅದು ಮಾತ್ರ ಎಣಿಕೆಯಾಗಬೇಕು ಎಂದು ನ್ಯಾಯಲಯದ ಮೂಲಕ ಆದೇಶ ತಂದು ಈ ರೀತಿ ಮಾಡಲಾಗಿದೆ ಎಂದು ದೂರಿದರು.

ಇದರ ಬಗ್ಗೆ ದೊಡ್ಡ ತನಿಖೆ ಅವಶ್ಯಕತೆಯಿದೆ. ಈ ಹಿಂದೆ ಫಲಿತಾಂಶ ಸರಿಯಾಗಿತ್ತು ಎಂದು ಎಲ್ಲರೂ ಸಹಿ ಮಾಡಿದ್ದಾರೆ. ಚುನಾವಣಾ ಆಯೋಗದ ಬಳಿಯೂ ದಾಖಲೆಯಿದೆ. ಆದರೆ ಮರುಎಣಿಕೆಯಲ್ಲಿ ಬದಲಾವಣೆಯಾಗಿದೆ. ಒಬ್ಬರಿಗೆ ಮತ ಬಿದ್ದ ಕಡೆ ಇನ್ನೊಬ್ಬರಿಗೂ ಗುರುತು ಹಾಕಲಾಗಿದೆ. ಇದರ ಬಗ್ಗೆ ದೂರನ್ನು ಸಹ ನೀಡಲಾಗಿದೆ ಎಂದರು.

Election results 2026: ಕರ್ನಾಟಕದಲ್ಲಿ ಗ್ಯಾರಂಟಿಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿ.ಕೆ. ಶಿವಕುಮಾರ್

ಫಲಿತಾಂಶದ ಬಗ್ಗೆ ರಿಟರ್ನಿಂಗ್ ಆಫೀಸರ್ ನ್ಯಾಯಲಯಕ್ಕೆ ಕಳುಹಿಸಬೇಕಿತ್ತು. ಸಂಬಂಧಿಸಿದ ಅಧಿಕಾರಿ ಇದನ್ನೆಲ್ಲಾ ಗಮನಿಸಿದ್ದಾರೆ. ಇದು ಇಡೀ ರಾಜ್ಯಕ್ಕೆ ಕಳಂಕದ ಪ್ರಕರಣ ಎಂದರು.