ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dinesh Gundu Rao: ಸುಹಾಸ್‌ನನ್ನು‌ ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗೇಕೆ ರೌಡಿ ಪಟ್ಟಿಗೆ ಸೇರಿಸಿದ್ದರು? ದಿನೇಶ್ ಗುಂಡೂರಾವ್

Dinesh Gundu Rao: ಕರಾವಳಿಯನ್ನು ಕೋಮು‌ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಬಿಜೆಪಿಯವರೇ ಕ್ರಿಮಿನಲ್‌ಗಳ ನಿಜವಾದ ಸೃಷ್ಟಿಕರ್ತರು. ಇವರು‌ ಅಧಿಕಾರದಲ್ಲಿದ್ದಾಗ ಕ್ರಿಮಿನಲ್‌ಗಳನ್ನು ಸೃಷ್ಟಿಸುತ್ತಾರೆ. ಅವರ ಮೇಲೆ ರೌಡಿ ಶೀಟರ್ ತೆರೆಯುತ್ತಾರೆ. ಹೆಣ ಬಿದ್ದ ಕೂಡಲೆ ಅದೇ ಕ್ರಿಮಿನಲ್‌ಗಳನ್ನು‌ ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ‌ ಮಾಡುತ್ತಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಎಂದು ಹೇಳಿದ್ದಾರೆ.

ಕರಾವಳಿಯ ಜನ ಬಿಜೆಪಿಯ ಹುನ್ನಾರ ಅರಿಯಬೇಕಿದೆ: ದಿನೇಶ್ ಗುಂಡೂರಾವ್

Profile Siddalinga Swamy May 6, 2025 3:42 PM

ಬೆಂಗಳೂರು: ಸುಹಾಸ್ ಶೆಟ್ಟಿ ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020 ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು ಬಿಜೆಪಿ ಸರ್ಕಾರ. ಗೃಹ ಸಚಿವರಾಗಿದ್ದ ಪುಣ್ಯಾತ್ಮ ಬಸವರಾಜ ಬೊಮ್ಮಾಯಿ ಇಂದು ಸುಹಾಸ್‌ನನ್ನು‌ ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ಸುಹಾಸ್‌ನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು.? ಎಂದು ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರು ಪ್ರಶ್ನಿಸಿದ್ದಾರೆ.‌ ಈ ಸಂಬಂಧ ತಮ್ಮ ಸಾಮಾಜಿಕ ಜಾಲತಾಣ ʼಎಕ್ಸ್ʼ ಖಾತೆಯಲ್ಲಿ ದಾಖಲೆ ಬಿಡುಗಡೆ ಮಾಡಿ, ಹೇಳಿಕೆ ನೀಡಿರುವ ಅವರು, ಸುಹಾಸ್‌ಶೆಟ್ಟಿ ಮೇಲೆ ರೌಡಿಶೀಟರ್ ಓಪನ್ ಮಾಡಿದ್ದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.



ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು‌ ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ BJP ನಾಯಕರ ಗಮನಕ್ಕೆ. ಇದು ಇತ್ತೀಚೆಗೆ ಹತ್ಯೆಯಾದ ಸುಹಾಶ್ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಪೊಲೀಸ್ ಇಲಾಖೆ ನೀಡಿದ್ದ ಆದೇಶದ ಪ್ರತಿ. ಸುಹಾಸ್ ಶೆಟ್ಟಿ ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020 ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು ಬಿಜೆಪಿ ಸರ್ಕಾರ. ಗೃಹ ಸಚಿವರಾಗಿದ್ದ ಪುಣ್ಯಾತ್ಮ ಬಸವರಾಜ ಬೊಮ್ಮಾಯಿ ಇಂದು ಸುಹಾಸ್‌ನನ್ನು‌ ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ಸುಹಾಸ್‌ನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು? ಕರಾವಳಿಯನ್ನು ಕೋಮು‌ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಬಿಜೆಪಿಯವರೇ ಕ್ರಿಮಿನಲ್‌ಗಳ ನಿಜವಾದ ಸೃಷ್ಟಿಕರ್ತರು. ಇವರು‌ ಅಧಿಕಾರದಲ್ಲಿದ್ದಾಗ ಕ್ರಿಮಿನಲ್‌ಗಳನ್ನು ಸೃಷ್ಟಿಸುತ್ತಾರೆ. ಅವರ ಮೇಲೆ ರೌಡಿ ಶೀಟರ್ ತೆರೆಯುತ್ತಾರೆ. ಹೆಣ ಬಿದ್ದ ಕೂಡಲೆ ಅದೇ ಕ್ರಿಮಿನಲ್‌ಗಳನ್ನು‌ ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ‌ ಮಾಡುತ್ತಾರೆ.

ಸುಹಾಸ್ ಹತ್ಯೆ ನಂತರ ಕೂಗುಮಾರಿಗಳಂತೆ ಅರಚುತ್ತಿರುವ ಬಿಜೆಪಿ ನಾಯಕರ‌ ಯಾರ ಮಕ್ಕಳಾದರೂ ಧರ್ಮದ ಅಮಲಿನಲ್ಲಿ ಬೀದಿ‌ ಕಾಳಗ ಮಾಡುತ್ತಿದ್ದಾರೆಯೆ.? ಅಥವಾ ಧರ್ಮಕ್ಕಾಗಿ ಬಡಿದಾಡುತ್ತಿದ್ದಾರೆಯೆ.? ಬಿಜೆಪಿ ನಾಯಕರ‌ ಧರ್ಮಾಂಧತೆಗೆ‌ ಬೀದಿ ಹೆಣವಾಗುತ್ತಿರುವುದು ಬಡವರ ಮಕ್ಕಳು. ಇದು ಸತ್ಯವಲ್ಲವೆ.?

ಬಿಜೆಪಿಯವರ ‌ಕೆಟ್ಟ ರಾಜಕೀಯಕ್ಕೆ ಕರಾವಳಿಯಲ್ಲಿ ಎಷ್ಟೋ ಜನರ‌ ಬಲಿಯಾಗಿದೆ. ಎಷ್ಟೋ ಮನೆಗಳ‌‌ ದೀಪ ಆರಿ ಹೋಗಿದೆ. ಇಷ್ಟಾದರೂ ಇವರ ರಕ್ತದಾಹ ನಿಂತಿಲ್ಲ. ಕರಾವಳಿಯಲ್ಲಿ ಇನ್ನಷ್ಟು ಹೆಣ ಬೀಳಬೇಕು ಎನ್ನುವ ಉದ್ದೇಶದಿಂದ ‌ದುಷ್ಟ ರಾಜಕಾರಣ ಮಾಡುತ್ತಿದ್ದಾರೆ. ದ.ಕನ್ನಡದ‌ ಜನ‌ ಪ್ರಜ್ಞಾವಂತಿಕೆಯ ಜೊತೆಗೆ ಸೂಕ್ಷ್ಮತೆಯನ್ನು ಅರಿತುಕೊಂಡವರು. ಇನ್ನಾದರೂ ಕರಾವಳಿಯ ಜನ ಬಿಜೆಪಿಯ ಹುನ್ನಾರ ಅರಿಯಬೇಕಿದೆ. ಇಲ್ಲದಿದ್ದರೆ‌ ಬಿಜೆಪಿಯವರ‌ ಕೆಟ್ಟ ರಾಜಕಾರಣಕ್ಕೆ ಜಿಲ್ಲೆಯ‌ ನೆಮ್ಮದಿಯೇ ಹಾಳಾಗಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

ಈ ಸುದ್ದಿಯನ್ನೂ ಓದಿ | MB Patil: ತುಮಕೂರಿನಲ್ಲಿ ಕ್ರಿಕೆಟ್ ಮೈದಾನ: 41ಎಕರೆ ಸ್ವಾಧೀನ ಪತ್ರ ಹಸ್ತಾಂತರಿಸಿದ ಎಂ.ಬಿ.ಪಾಟೀಲ್‌