ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: ಹೆಣದ ಮೇಲೆ ರಾಜಕೀಯ ಮಾಡೋದು ಬಿಜೆಪಿ, ಜೆಡಿಎಸ್ ಕೆಲಸ: ಡಿ.ಕೆ.ಶಿವಕುಮಾರ್

DK Shivakumar: ಅಹಮದಾಬಾದ್ ವಿಮಾನ ಅಪಘಾತದಂತಹ ದುರಂತ ದೇಶದಲ್ಲಿ ಮಾತ್ರವಲ್ಲ ಪ್ರಪಂಚದಲ್ಲಿ ಎಲ್ಲಿಯೂ ನಡೆಯಬಾರದು. ಈ ದುರಂತದಲ್ಲಿ ಅನೇಕರು ಸುಟ್ಟು ಹೋಗಿದ್ದಾರೆ. ಆ ದುರಂತದ ಸ್ಥಳ ನೋಡಿದರೆ ಆಘಾತವಾಗುತ್ತದೆ. ಅಕಸ್ಮಾತ್ 500 ಮೀಟರ್ ಮುಂದಕ್ಕೆ ಹೋಗಿ ವಿಮಾನ ಅಪ್ಪಳಿಸಿದ್ದರೂ ಸಾವಿರಾರು ಮಂದಿಯ ಜೀವಹಾನಿಯಾಗುತ್ತಿತ್ತು. ಈಗ ವೈದ್ಯಕೀಯ ಹಾಸ್ಟೆಲ್ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೆಲವು ವಿದ್ಯಾರ್ಥಿಗಳಿಗೆ ಮಾನಸಿಕ ಆಘಾತವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಾವು ಕೆಲವರನ್ನು ಭೇಟಿ ಮಾಡಿ ಮಾತನಾಡಿದೆವು. ಈ ಅಪಘಾತ ಕುರಿತು ಬ್ಲಾಕ್ ಬಾಕ್ಸ್ ತನಿಖೆ ವರದಿ ಬರಬೇಕಾಗಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಅಲ್ಲಿ ಹೋಗಿ ಸಾಂತ್ವನ ಹೇಳಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಹೆಣದ ಮೇಲೆ ರಾಜಕೀಯ ಮಾಡೋದು ಬಿಜೆಪಿ, ಜೆಡಿಎಸ್ ಕೆಲಸ: ಡಿ.ಕೆ.ಶಿವಕುಮಾರ್

ಡಿಸಿಎಂ ಡಿ.ಕೆ. ಶಿವಕುಮಾರ್.

Profile Siddalinga Swamy Jun 16, 2025 4:26 PM

ಬೆಂಗಳೂರು: ನಾವು ಅಹಮದಾಬಾದ್ ವಿಮಾನ ದುರಂತದ ಬಗ್ಗೆ ರಾಜಕೀಯ ಮಾಡೋದಿಲ್ಲ. ಹೆಣದ ಮೇಲೆ ರಾಜಕೀಯ ಮಾಡುವುದು ಏನಿದ್ದರೂ ಬಿಜೆಪಿ ಹಾಗೂ ಜೆಡಿಎಸ್ ಕೆಲಸ. ನಾವು ಅವರಂತೆ ನೀಚ ರಾಜಕೀಯ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ವಾಗ್ದಾಳಿ ನಡೆಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಅಹಮದಾಬಾದ್ ವಿಮಾನ ದುರಂತದ ಬಗ್ಗೆ ಕೇಳಿದಾಗ, ʼಅಹಮದಾಬಾದ್ ವಿಮಾನ ಅಪಘಾತದಂತಹ ದುರಂತ ದೇಶದಲ್ಲಿ ಮಾತ್ರವಲ್ಲ ಪ್ರಪಂಚದಲ್ಲಿ ಎಲ್ಲಿಯೂ ನಡೆಯಬಾರದು. ಈ ದುರಂತದಲ್ಲಿ ಅನೇಕರು ಸುಟ್ಟು ಹೋಗಿದ್ದಾರೆ. ಆ ದುರಂತದ ಸ್ಥಳ ನೋಡಿದರೆ ಆಘಾತವಾಗುತ್ತದೆ.

ಅಕಸ್ಮಾತ್ 500 ಮೀಟರ್ ಮುಂದಕ್ಕೆ ಹೋಗಿ ವಿಮಾನ ಅಪ್ಪಳಿಸಿದ್ದರೂ ಸಾವಿರಾರು ಮಂದಿಯ ಜೀವಹಾನಿಯಾಗುತ್ತಿತ್ತು. ಈಗ ವೈದ್ಯಕೀಯ ಹಾಸ್ಟೆಲ್ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೆಲವು ವಿದ್ಯಾರ್ಥಿಗಳಿಗೆ ಮಾನಸಿಕ ಆಘಾತವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಾವು ಕೆಲವರನ್ನು ಭೇಟಿ ಮಾಡಿ ಮಾತನಾಡಿದೆವು. ಈ ಅಪಘಾತ ಕುರಿತು ಬ್ಲಾಕ್ ಬಾಕ್ಸ್ ತನಿಖೆ ವರದಿ ಬರಬೇಕಾಗಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಅಲ್ಲಿ ಹೋಗಿ ಸಾಂತ್ವನ ಹೇಳಿದ್ದೇವೆʼ ಎಂದು ಮಾಹಿತಿ ನೀಡಿದರು.

ಬಿಜೆಪಿ ಹಾಗೂ ಜೆಡಿಎಸ್ ನವರಿಗೆ ಹೆಣದ ಮೇಲೆ ರಾಜಕೀಯ ಮಾಡುವುದೇ ಕೆಲಸ. ನಾವು ಹಳೇ ಪ್ರಕರಣ ಹಾಗೂ ಈ ಪ್ರಕರಣವನ್ನು ಮುಂದಿಟ್ಟುಕೊಂಡು ಟೀಕೆ ಮಾಡಬಹುದು. ಆದರೆ ನಾವು ಅವರ ಮಟ್ಟಕ್ಕೆ ಇಳಿಯುವುದಿಲ್ಲ. ಈ ವಿಚಾರದಲ್ಲಿ ಅನೇಕ ತಾಂತ್ರಿಕ ಅಂಶಗಳಿವೆ. ನಾನು ಅವುಗಳ ತಜ್ಞನಲ್ಲ. ಈ ಎಲ್ಲಾ ವಿಚಾರವಾಗಿ ಚರ್ಚೆ ಆಗುತ್ತಿದೆ. ಆದರೆ ಈ ವಿಚಾರವನ್ನು ರಾಜಕೀಯಗೊಳಿಸುವ ವ್ಯಕ್ತಿ ನಾನಲ್ಲ. ಈ ಸಮಯದಲ್ಲಿ ಕೇಂದ್ರ ಸಚಿವರ ಬಗ್ಗೆ ಟೀಕೆ ಮಾಡುವುದಿಲ್ಲ. ಇದು ದೇಶದ ಗಂಭೀರ ವಿಚಾರ ಎಂದು ತಿಳಿಸಿದರು.‌

ಈ ಸುದ್ದಿಯನ್ನೂ ಓದಿ | Bike Taxi : ಇಂದಿನಿಂದ ರಾಜ್ಯದಲ್ಲಿ ಓಲಾ, ಉಬರ್‌, ರ‍್ಯಾಪಿಡೊ ಬೈಕ್‌ ಟ್ಯಾಕ್ಸಿ ಸಿಗಲ್ಲ

ರಾಜ್ಯ ಸರ್ಕಾರ ವಸೂಲಿ ಮಾಡುತ್ತಿರುವ ತೆರಿಗೆ ನೋಡಿದರೆ ನನ್ನ ಸರ್ಕಾರ ಇದ್ದಿದ್ದರೆ ಗೃಹಲಕ್ಷ್ಮಿಗೆ 5 ಸಾವಿರ ಕೊಡುತ್ತಿದ್ದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ʼಬಹಳ ಸಂತೋಷ. ಅವರು ಚೆನ್ನಾಗಿ ಆರೋಗ್ಯಕರವಾಗಿರಲಿʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.