ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವಿಧಾನ ಪರಿಷತ್ ಸಭಾಪತಿ, ಉಪ ಸಭಾಪತಿ ಆಯ್ಕೆಗೆ ಆ.14ರಂದು ಚುನಾವಣೆ: ಸಿಎಂ ಮಾಹಿತಿ

Karnataka legislative council chairman: ಪ್ರಸಕ್ತ ರಾಜಕೀಯ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಬಸವರಾಜ ಹೊರಟ್ಟಿ ಅವರು ತಮ್ಮ ರಾಜೀನಾಮೆ ನೀಡಿದ್ದಾರೆ. ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಆಗಸ್ಟ್ 13ರಂದು ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, 14 ರಂದು ನೂತನ ಉಪಸಭಾಪತಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ನಂತರ ಉಪಸಭಾಪತಿಗಳ ಮೂಲಕ ಸಭಾಪತಿಗಳ ಚುನಾವಣೆ ನಡೆಯಲಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ವಿಧಾನ ಪರಿಷತ್ ಸಭಾಪತಿ, ಉಪ ಸಭಾಪತಿ ಆಯ್ಕೆಗೆ ಮುಹೂರ್ತ ನಿಗದಿ

-

Prabhakara R
Prabhakara R Aug 7, 2026 3:44 PM

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ (Karnataka legislative council chairman) ಸ್ಥಾನಕ್ಕೆ ಬಸವರಾಜ ಹೊರಟ್ಟಿ (Basavaraj horatti) ಅವರು ರಾಜೀನಾಮೆ ನೀಡಿದ್ದು, ಅದನ್ನು ಅಂಗೀಕರಿಸಲಾಗಿದೆ. ಬದಲಿ ವ್ಯವಸ್ಥೆ ಆಗುವವರೆಗೂ ಅವರನ್ನೇ ಈ ಸ್ಥಾನದಲ್ಲಿ ಮುಂದುವರಿಸಬೇಕು ಎಂದು ರಾಜ್ಯಪಾಲರಿಗೆ ಪತ್ರ ಬರೆದಿದ್ದೇನೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಮಾತನಾಡಿದ್ದಾರೆ. “ಪ್ರಸಕ್ತ ರಾಜಕೀಯ ಬೆಳವಣಿಗೆ ಗಮನದಲ್ಲಿಟ್ಟುಕೊಂಡು ಬಸವರಾಜ ಹೊರಟ್ಟಿ ಅವರು ತಮ್ಮ ರಾಜೀನಾಮೆ ನೀಡಿದ್ದಾರೆ. ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಹೊರಟ್ಟಿ ಅವರು ದೇಶದ ವಿಧಾನ ಪರಿಷತ್ ಇತಿಹಾಸದಲ್ಲೇ ಅತ್ಯಂತ ಹಿರಿಯ ನಾಯಕರು. ಅವರು ತಮ್ಮ ಹೃದಯ ವೈಶಾಲ್ಯತೆ ತೋರಿದ್ದಾರೆ. ಅದು ಮೆಚ್ಚುವಂತದ್ದು. ಆಗಸ್ಟ್ 13ರಂದು ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, 14 ರಂದು ನೂತನ ಉಪಸಭಾಪತಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ನಂತರ ಉಪಸಭಾಪತಿಗಳ ಮೂಲಕ ಸಭಾಪತಿಗಳ ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ ಬಸವರಾಜ ಹೊರಟ್ಟಿ ಅವರೊಂದಿಗೆ ವಿಧಾನಸೌಧದಲ್ಲಿ ಚರ್ಚೆ ನಡೆಸಿದ್ದ ಶಿವಕುಮಾರ್ ಅವರು, “ವಿಧಾನ ಪರಿಷತ್ತಿನ ಅಧ್ಯಕ್ಷ, ಉಪಾಧ್ಯಕ್ಷರನ್ನ ಆಯ್ಕೆ ಮಾಡಿ ನಂತರ ನಮ್ಮ ಸದಸ್ಯರೆಲ್ಲರಿಗೂ ಕೃತಜ್ಞತೆ ಸಲ್ಲಿಸುವ ಆಸೆಯನ್ನು ಬಸವರಾಜ ಹೊರಟ್ಟಿಯವರು ಇಟ್ಟುಕೊಂಡಿದ್ದಾರೆ. ಅವರ ಭಾವನೆಗಳನ್ನು ನಾವು ಒಪ್ಪಿಕೊಂಡಿದ್ದೇವೆ, ಗೌರವಿಸುತ್ತೇವೆ” ಎಂದರು.

ವಿಧಾನ ಪರಿಷತ್‌ ಸ್ಪೀಕರ್‌ ಸ್ಥಾನಕ್ಕೆ ಬಸವರಾಜ ಹೊರಟ್ಟಿ ದಿಢೀರ್‌ ರಾಜೀನಾಮೆ; ಸಿಎಂ ಭೇಟಿ ವೇಳೆ ಆಗಿದ್ದೇನು?

ಹೊರಟ್ಟಿ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ವಿಚಾರ ಇತ್ತಲ್ಲ ಎಂದು ಕೇಳಿದಾಗ, "ನಾವುಗಳೇ ಒಂದು ಒಪ್ಪಂದಕ್ಕೆ ಬಂದ ಮೇಲೆ ಮುಂದೇನಿದೆ? ಅವಿಶ್ವಾಸ ನಿರ್ಣಯ ಮಂಡನೆ ಅಪ್ರಸ್ತುತ. ಈಗ ಅವರೇ ರಾಜೀನಾಮೆ ನೀಡಿದ್ದಾರೆ. ಈಗ ರಾಜೀನಾಮೆ ಅಂಗೀಕರಿಸಿದರೂ ಅವರನ್ನೇ ಹಂಗಾಮಿ‌ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕಿದೆ" ಎಂದರು.