ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Cabinet Meeting: ನೈಸರ್ಗಿಕ ವಿಕೋಪಗಳು, ತುರ್ತು ಪರಿಸ್ಥಿತಿ ಎದುರಿಸಲು ಸ್ವಯಂಸೇವಕರಿಗೆ ‘ಎಮರ್ಜೆನ್ಸಿ ರೆಸ್ಪಾಂಡರ್ ಕಿಟ್ʼ; ಸಂಪುಟ ಒಪ್ಪಿಗೆ

Priyank Kharge: ಕೇಂದ್ರ ಪುರಸ್ಕೃತ "ಯುವ ಆಪದ್ ಮಿತ್ರ" ಯೋಜನೆಯಡಿ ಆಯ್ಕೆಯಾದ ಸ್ವಯಂಸೇವಕರಿಗೆ ರಕ್ಷಣಾ ಸಾಮಗ್ರಿಗಳನ್ನೊಳಗೊಂಡ ‘ಎಮರ್ಜೆನ್ಸಿ ರೆಸ್ಪಾಂಡರ್ ಕಿಟ್ʼ ಖರೀದಿಸಲು ಸಚಿವ ಸಂಪುಟ ಸಭೆಯು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸ್ವಯಂಸೇವಕರಿಗೆ ‘ಎಮರ್ಜೆನ್ಸಿ ರೆಸ್ಪಾಂಡರ್ ಕಿಟ್ʼ; ಸಂಪುಟ ಒಪ್ಪಿಗೆ

ಗೃಹ ಸಚಿವ ಪ್ರಿಯಾಂಕ್ ಖರ್ಗೆ (ಸಂಗ್ರಹ ಚಿತ್ರ) -

Profile
Siddalinga Swamy Oct 6, 2026 7:00 PM

ಬೆಂಗಳೂರು, ಅ.06: ರಾಜ್ಯದಲ್ಲಿ ನೈಸರ್ಗಿಕ ವಿಕೋಪಗಳು ಮತ್ತು ತುರ್ತು ಪರಿಸ್ಥಿತಿಗಳನ್ನು ಪರಿಣಾಮಕಾರಿಯಾಗಿ ಎದುರಿಸುವ ನಿಟ್ಟಿನಲ್ಲಿ ಕೇಂದ್ರ ಪುರಸ್ಕೃತ "ಯುವ ಆಪದ್ ಮಿತ್ರ" ಯೋಜನೆಯಡಿ ಆಯ್ಕೆಯಾದ ಸ್ವಯಂಸೇವಕರಿಗೆ ರಕ್ಷಣಾ ಸಾಮಗ್ರಿಗಳನ್ನೊಳಗೊಂಡ ‘ಎಮರ್ಜೆನ್ಸಿ ರೆಸ್ಪಾಂಡರ್ ಕಿಟ್ʼ (Emergency Responder Kit) ಖರೀದಿಸಲು ಸಚಿವ ಸಂಪುಟ ಸಭೆಯು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ.

ಈ ಯೋಜನೆಯಡಿ ರಾಜ್ಯದ 11 ಜಿಲ್ಲೆಗಳಾದ ಬಾಗಲಕೋಟೆ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಬೆಂಗಳೂರು ನಗರ, ಕಲಬುರಗಿ, ಕೊಡಗು, ರಾಯಚೂರು, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸ್ಕೌಟ್ಸ್‌ ಮತ್ತು ಎನ್.ಎಸ್.ಎಸ್‌ ಹಾಗೂ 'ಮೇರಾ ಯುವ ಭಾರತ್' ಏಜೆನ್ಸಿಗಳ ಮೂಲಕ ಒಟ್ಟು 10,350 ಸ್ವಯಂಸೇವಕರಿಗೆ ತರಬೇತಿ ನೀಡಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ. ‌

ರಾಹುಲ್ ಗಾಂಧಿ ಹಾಗೂ ನನ್ನ ಧ್ವನಿ ಹತ್ತಿಕ್ಕಲು ಸಾಧ್ಯವಿಲ್ಲ: ಸಿಎಂ ಡಿ.ಕೆ. ಶಿವಕುಮಾರ್

ತರಬೇತಿ ಪಡೆದ ಪ್ರತಿಯೊಬ್ಬ ಸ್ವಯಂಸೇವಕರಿಗೆ ತಲಾ ₹10,000 ವೆಚ್ಚದಲ್ಲಿ ರಕ್ಷಣಾ ಉಪಕರಣಗಳನ್ನೊಳಗೊಂಡ 'ಎಮರ್ಜೆನ್ಸಿ ರೆಸ್ಪಾಂಡರ್ ಕಿಟ್' ಒದಗಿಸಲಾಗುತ್ತದೆ. ಇದರ ಒಟ್ಟು ಅನುದಾನ ವೆಚ್ಚ ₹10.35 ಕೋಟಿಗಳಾಗಿರುತ್ತದೆ. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ (KTPP Act) 1999 ರನ್ವಯ ಟೆಂಡರ್ ಪ್ರಕ್ರಿಯೆಯ ಮೂಲಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಈ ಕಿಟ್‌ಗಳನ್ನು ಖರೀದಿಸಿ, ಸಂಬಂಧಪಟ್ಟ 11 ಜಿಲ್ಲೆಗಳ 'ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಪ್ರಾಧಿಕಾರ'ಗಳಿಗೆ (DDMA) ತಲುಪಿಸಲಿದೆ ಎಂದೂ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.