ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

SC Internal Reservation: ಒಳ ಮೀಸಲಾತಿಯಡಿ ಹುದ್ದೆಗಳ ಭರ್ತಿ ಮಾಡಿ: ಬಿ.ವೈ. ವಿಜಯೇಂದ್ರ ಆಗ್ರಹ

BY Vijayendra: ಶೇ.56 ಒಳ ಮೀಸಲಾತಿ ನೀಡಿ ಬಿಜೆಪಿ ಸರ್ಕಾರವು ಎಲ್ಲ ಸಮುದಾಯಗಳಿಗೆ ನ್ಯಾಯ ಕೊಡುವ ಕೆಲಸ ಮಾಡಿದೆ. ಅದರ ಆಧಾರದಡಿ ಶೋಷಿತ- ಪೀಡಿತ ಸಮುದಾಯಗಳಿಗೆ ಒಳ ಮೀಸಲಾತಿ ಪರಿಗಣಿಸಿ ಈ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.

ಒಳ ಮೀಸಲಾತಿಯಡಿ ಹುದ್ದೆಗಳ ಭರ್ತಿ ಮಾಡಿ: ವಿಜಯೇಂದ್ರ ಆಗ್ರಹ

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಮಾತನಾಡಿದರು. -

Profile
Siddalinga Swamy Mar 4, 2026 4:34 PM

ಬೆಂಗಳೂರು, ಮಾ.4: ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಎಚ್ಚರಿಕೆ ನೀಡಿದ್ದಾರೆ. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಮಾಧ್ಯಮಗಳ ಜತೆ ಅವರು ಮಾತನಾಡಿದರು.

ಮೀಸಲಾತಿ ಪ್ರಮಾಣವನ್ನು ಶೇ .50ರಿಂದ ಶೇ. 56ಕ್ಕೆ ಏರಿಸಿದ್ದಾರೆ. ನೀವು 50 ಸಾವಿರ ಖಾಲಿ ಹುದ್ದೆ ಭರ್ತಿ ಮಾಡುತ್ತೀರಾ ಅಥವಾ 1 ಲಕ್ಷ ಹುದ್ದೆ ಭರ್ತಿ ಮಾಡುವಿರಾ ಎಂಬುದು ನಿಮಗೆ ಬಿಟ್ಟದ್ದು. ಎಲ್ಲ ಖಾಲಿ ಹುದ್ದೆ ಭರ್ತಿ ಮಾಡಿ ಎಂಬ ಆಗ್ರಹ ನಮ್ಮದು. ಶೇ.56 ಒಳ ಮೀಸಲಾತಿ ನೀಡಿ ಬಿಜೆಪಿ ಸರ್ಕಾರವು ಎಲ್ಲ ಸಮುದಾಯಗಳಿಗೆ ನ್ಯಾಯ ಕೊಡುವ ಕೆಲಸ ಮಾಡಿದೆ. ಅದರ ಆಧಾರದಡಿ ಶೋಷಿತ- ಪೀಡಿತ ಸಮುದಾಯಗಳಿಗೆ ಒಳ ಮೀಸಲಾತಿ ಪರಿಗಣಿಸಿ ಈ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಆಗ್ರಹಿಸಿದರು.

ಮುಖ್ಯಮಂತ್ರಿಗಳೇ ಪದೇಪದೇ ಈ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದ್ದೀರಿ. ಪರಿಶಿಷ್ಟ ಜಾತಿ- ಪಂಗಡಗಳ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ ರಾಜ್ಯ ನ್ಯಾಯಾಲಯದ ಕುಂಟುನೆಪ ಹೇಳದೇ ಈ ಸಮುದಾಯಗಳಿಗೆ ಉದ್ಯೋಗ ನೀಡಿ ನ್ಯಾಯ ಕೊಡಿ ಎಂದು ಒತ್ತಾಯಿಸಿದರು. ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ- ಪಂಗಡಗಳ ಯುವಜನತೆ ಸೇರಿ ಎಲ್ಲ ವರ್ಗಗಳ ಜನರಿಗೆ ನ್ಯಾಯ ಕೊಡುವ ಕೆಲಸ ಮಾಡಿ. ಅದನ್ನು ಬಿಟ್ಟು ಈ ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿಗಳು ತೊಟ್ಟಿಲು ತೂಗುವ ಜತೆಗೇ ಮಗುವನ್ನು ಚಿವುಟುವ ಕೆಲಸ ಮಾಡುತ್ತಿದ್ದು, ಇದು ಅಕ್ಷಮ್ಯ ಅಪರಾಧ ಎಂದು ಟೀಕಿಸಿದರು. ಹಳೆಯ ಮೀಸಲಾತಿ ಪ್ರಮಾಣದಡಿ ನೇಮಕಾತಿ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರವು ರಾಜ್ಯದಲ್ಲಿ ಬೆಂಕಿ ಹಚ್ಚಲು ಹೊರಟಂತಿದೆ ಎಂದು ಆರೋಪಿಸಿದರು.

ಒಳ ಮೀಸಲಾತಿ ಜಾರಿ ಮಾಡದೇ ಖಾಲಿ ಹುದ್ದೆ ಭರ್ತಿ ಮಾಡುವ ಕೆಲಸ ಮಾಡಿದರೆ, ರಾಜ್ಯದಲ್ಲಿ ಮುಂದೆ ಆಗುವ ಘಟನೆಗಳಿಗೆ ತಾವೇ ಹೊಣೆ ಹೊರಬೇಕಾಗುತ್ತದೆ. ಇದೆಲ್ಲವನ್ನು ಪರಿಗಣಿಸಿ ಸಮರ್ಪಕ ನಿರ್ಧಾರವನ್ನು ಮುಖ್ಯಮಂತ್ರಿಗಳು ಮಾಡಬೇಕು ಎಂದು ಮನವಿ ಮಾಡಿದರು. ಯುವಜನತೆ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ವಯೋಮಿತಿ ಮೀರುತ್ತಿದೆ. ಅವರ ಸಹನೆಯ ಕಟ್ಟೆ ಒಡೆದು ಹೋಗಿದೆ. ಇದನ್ನು ಕೂಡ ಪರಿಗಣಿಸಿ ನ್ಯಾಯ ಕೊಡುವ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ತಮ್ಮ ಗೌರವ ಉಳಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

2030ಕ್ಕೆ 5 ಟ್ರಿಲಿಯನ್ ಮೀರಲಿದೆ ಭಾರತದ ಆರ್ಥಿಕತೆ: ಪ್ರಹ್ಲಾದ್‌ ಜೋಶಿ

ಆಡಳಿತ ಪಕ್ಷವಾದ ಕಾಂಗ್ರೆಸ್ಸಿನ ಶಾಸಕರನ್ನು ಸಮಾಧಾನಪಡಿಸಲು ನೀವು ವಿದೇಶ ಪ್ರವಾಸ ಕಲ್ಪಿಸಿ ಕೊಟ್ಟಿದ್ದೀರೆಂದರೆ, ರಾಜ್ಯದ ಆಡಳಿತ ಸಂಪೂರ್ಣ ಕುಸಿದಿದೆ, ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಅಭಿವೃದ್ಧಿಯಿಂದ ಕರ್ನಾಟಕವು ವಂಚಿತವಾಗಿದೆ. ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ. ಇದು ವಾಸ್ತವಿಕ ಸತ್ಯ. ಆದ್ದರಿಂದ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರವನ್ನು ದೂರುವುದನ್ನು ಬಿಟ್ಟು ಇವೆಲ್ಲ ವಿಚಾರಗಳನ್ನು ಪರಿಗಣಿಸಿ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.‌ ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು, ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ್ ಉಪಸ್ಥಿತರಿದ್ದರು.