ಬೌರಿಂಗ್ ಆಸ್ಪತ್ರೆ ದುರಂತ: ಕಾಂಗ್ರೆಸ್ ಸರ್ಕಾರ ಬದುಕಿದೆಯೋ, ಸತ್ತಿದೆಯೋ ಗೊತ್ತಿಲ್ಲ ಎಂದ ಬೊಮ್ಮಾಯಿ
Basavaraj Bommai: ಮಳೆ ಬಂದರೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಹವಾಮಾನ ಇಲಾಖೆ ಹೇಳುತ್ತಲೇ ಬಂದಿದೆ ಆದರೂ ಯಾವುದೇ ತಯಾರಿ ಕೂಡ ಮಾಡಿಕೊಂಡಿಲ್ಲ. ಒಂದು ರೀತಿಯಲ್ಲಿ ಈ ಸರ್ಕಾರ ಜನರ ಪಾಲಿಗೆ ಸತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
Siddalinga Swamy
May 1, 2026 7:01 PM
ಹಾವೇರಿ, ಮೇ 1: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬದುಕಿದೆಯೋ, ಸತ್ತಿದೆಯೋ ಗೊತ್ತಿಲ್ಲ. ಮಳೆಗಾಲಕ್ಕೂ ಮುನ್ನ ತಯಾರಿಯನ್ನೂ ಮಾಡಿಲ್ಲ. ಕುಡಿಯುವ ನೀರಿನ ವ್ಯವಸ್ಥೆಯನ್ನೂ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಅವಘಡ ಕುರಿತು ಹಾವೇರಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಇನ್ನು ಪಂಚರಾಜ್ಯ ಚುನಾವಣೆಗಳ ಎಕ್ಸಿಟ್ ಪೋಲ್ ಕುರಿತು ಪ್ರತಿಕ್ರಿಯೆ ನೀಡಿ, ಅಸ್ಸಾಂನಲ್ಲಿ ಮೂರನೇ ಎರಡರಷ್ಟು ಬಹುಮತ ನಮಗೆ ಬರಲಿದೆ. ನಮ್ಮ ನಿರೀಕ್ಷೆಯಂತೆ ಎಕ್ಸಿಟ್ ಪೋಲ್ ಬಂದಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯವರು ಅವರು ಎಷ್ಟೆ ಸಮಸ್ಯೆ ಮಾಡಲಿ, ಏನೇ ಹಿಂಸೆ ಕೊಡಲಿ, ಜನ ಬದಲಾವಣೆ ಬಯಸಿದ್ದಾರೆ. ಅಲ್ಲಿನ ಜನ ಶೇ 90% ಮತದಾನ ಮಾಡಿದ್ದಾರೆ. ಪಶ್ಚಿಮ ಬಂಗಾಳ ಫಲಿತಾಂಶ ದೇಶಕ್ಕೆ ದಿಕ್ಸೂಚಿ ಆಗಲಿದೆ ಎಂದು ಅವರು ಹೇಳಿದ್ದಾರೆ.